ಬೆಂಗಳೂರು: ಡಿ.23ಕ್ಕೆ ಯುವ ಕೃಷಿ ಮೇಳ
ಬೆಂಗಳೂರು, ಡಿ.20: ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ, ಅಂತರ್‌ರಾಷ್ಟ್ರೀಯ ರೈತರ ದಿನಾಚರಣೆ ಪ್ರಯುಕ್ತ ಯುವ ಕೃಷಿ ಮೇಳವನ್ನು ಡಿ.23ರಂದು ರಾಮನಗರದ ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಆಡಳಿತಾಧ್ಯಕ್ಷ ಬಿ.ಕೆ.ಮಂಜುನಾಥ ಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಬಿಡುಗಡೆ ಮಾಡುತ್ತಾರೆ ಹಾಗೂ ಕೃಷಿ ಸಚಿವ ಶಿವಶಂಕರ ರೆಡ್ಡಿ ಸೂಪರ್ ಸ್ಟಾರ್ ರೈತ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.
Next Story





