ಡಿ.22: ಎಸ್‌ಐಒ ನೂತನ ರಾಷ್ಟ್ರೀಯ ಅಧ್ಯಕ್ಷ ಮಂಗಳೂರಿಗೆ
ಮಂಗಳೂರು, ಡಿ.20: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ (ಎಸ್‌ಐಒ)ದ ನೂತನ ರಾಷ್ಟ್ರೀಯ ಅಧ್ಯಕ್ಷ ಲಬೀದ್ ಶಾಫಿ ಹಾಗೂ ಕರ್ನಾಟಕ ರಾಜ್ಯಾಧ್ಯಕ್ಷ ನಿಹಾಲ್ ಕಿದಿಯೂರು ಡಿ.22ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಅಂದು ಸಂಜೆ 6:30ಕ್ಕೆ ನಗರದ ಕಂಕನಾಡಿಯಲ್ಲಿರುವ ಜಮೀಯ್ಯತುಲ್ ಫಲಾಹ್ ಸಭಾಂಗಣದಲ್ಲಿ ನಡೆಯಲಿರುವ ಸ್ವಾಗತ ಮತ್ತು ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಮಾಅತೆ ಇಸ್ಲಾಮೀ ಹಿಂದ್ ದ.ಕ. ಜಿಲ್ಲಾಧ್ಯಕ್ಷ ಅಮೀನ್ ಅಹ್ಸನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ವಲಯ ಸಂಚಾಲಕ ಅಬ್ದುಸ್ಸಲಾಂ ಉಪ್ಪಿನಂಗಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಐಒ ರಾಜ್ಯಾಧ್ಯಕ್ಷೆ ಉಮೈರಾ ಬಾನು, ಎಸ್‌ಐಒ ಮಾಜಿ ರಾಷ್ಟ್ರೀಯ ಅಧ್ಯಕ್ಷ ಅಶ್ಫಾಕ್ ಅಹ್ಮದ್ ಶರೀಫ್, ಎಸ್‌ಐಒ ದ.ಕ. ಜಿಲ್ಲಾಧ್ಯಕ್ಷ ಅಹ್ಮದ್ ಮುಬೀನ್, ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ದ.ಕ. ಜಿಲ್ಲಾ ಸಂಚಾಲಕಿ ಝೀನತ್ ಹಸನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಎಸ್‌ಐಒ ದ.ಕ. ಜಿಲ್ಲಾ ಕಾರ್ಯದರ್ಶಿ ನಿಝಾಮ್ ಉಳ್ಳಾಲ್ ತಿಳಿಸಿದ್ದಾರೆ.





