ಶರಣಾಗತಿಗೆ ಕಾಲಾವಕಾಶ ಕೇಳಿದ ಸಜ್ಜನ್ ಕುಮಾರ್ ಮನವಿಯನ್ನು ತಿರಸ್ಕರಿಸಿದ ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ, ಡಿ.21: ಸಿಖ್ ವಿರೋಧಿ ಹತ್ಯಾಕಾಂಡ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗ ಗುರಿಯಾಗಿರುವ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಶರಣಾಗತಿಗೆ ಕಾಲಾವಕಾಶ ನೀಡುವಂತೆ ಸಲ್ಲಿಸಿದ್ದ ಮನವಿಯನ್ನು ದಿಲ್ಲಿ ಹೈಕೋರ್ಟ್ ತಿರಸ್ಕರಿಸಿದೆ.
ನ್ಯಾಯಾಲಯಕ್ಕೆ ಶರಣಾಗಲು ಜ.30ರ ಕಾಲಾವಕಾಶ ನೀಡುವಂತೆ ಸಜ್ಜನ್ ಕುಮಾರ್ ಗುರುವಾರ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
1984ರ ಸಿಖ್ ವಿರೋಧಿ ಹತ್ಯಾಕಾಂಡ ಪ್ರಕರಣದಲ್ಲಿ ಅಪರಾಧಿಯಾಗಿರುವ ಸಜ್ಜನ್ ಕುಮಾರ್ ಗೆ ಜೀವಾವಧಿ ಸಜೆ ವಿಧಿಸಿರುವ ನ್ಯಾಯಾಲಯ ಅವರನ್ನು ಡಿ.31ರ ಮೊದಲು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ಆದೇಶ ನೀಡಿತ್ತು.
73ರ ಹರೆಯದ ಮಾಜಿ ಎಂಪಿ ಸಜ್ಜನ್ ಕುಮಾರ್ ಕುಟುಂಬದ ಆಸ್ತಿ ವಿವಾದದ ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ. ಈ ಸಮಸ್ಯೆಯ ಬಗೆಹರಿಸುವ ಉದ್ದೇಶಕ್ಕಾಗಿ ನ್ಯಾಯಾಲಯಕ್ಕೆ ಶರಣಾಗಲು ಕಾಲಾವಕಾಶ ಕೇಳಿದ್ದರು. ಆದರೆ ಇದು ವಿನಾಯತಿ ನೀಡಲು ಕಾರಣವಲ್ಲ ಎಂದು ಹೇಳಿರುವ ದಿಲ್ಲಿ ಹೈಕೋರ್ಟ್ ಸಜ್ಜನ್ ಕುಮಾರ್ ಮನವಿಯನ್ನು ತಿರಸ್ಕರಿಸಿದೆ.
Next Story