ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಬೆಂಗಳೂರು, ಡಿ.21: ಟೈಲರಿಂಗ್ ಕೆಲಸ ಮಾಡುತ್ತಿದ್ದ ಮಹಿಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದೊಡ್ಡಬಸ್ತಿ ಬಸ್ ನಿಲ್ದಾಣ ಸಮೀಪದ ಒಂದನೆ ಕ್ರಾಸ್, ಒಂದನೆ ಮುಖ್ಯರಸ್ತೆ ನಿವಾಸಿ ಫೈಝಾನ್(30) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂಲತಃ ಬಿಹಾರ ರಾಜ್ಯದ ಫೈಝಾನ್, ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಘಟನೆಗೆ ಕಾರಣ ತಿಳಿದುಬಂದಿಲ್ಲ. ಸುದ್ದಿ ತಿಳಿದ ಜ್ಞಾನಭಾರತಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story





