Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ದೇವಾಲಯಗಳಲ್ಲಿ ಪ್ರಸಾದ, ದಾಸೋಹ ತಯಾರಿ...

‘ದೇವಾಲಯಗಳಲ್ಲಿ ಪ್ರಸಾದ, ದಾಸೋಹ ತಯಾರಿ ಬಗ್ಗೆ ಎಚ್ಚರ ವಹಿಸಿ’

ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್

ವಾರ್ತಾಭಾರತಿವಾರ್ತಾಭಾರತಿ21 Dec 2018 9:08 PM IST
share
‘ದೇವಾಲಯಗಳಲ್ಲಿ ಪ್ರಸಾದ, ದಾಸೋಹ ತಯಾರಿ ಬಗ್ಗೆ ಎಚ್ಚರ ವಹಿಸಿ’

ಉಡುಪಿ, ಡಿ.21: ಜಿಲ್ಲೆಯ ದೇವಾಲಯಗಳಲ್ಲಿ ಭಕ್ತರಿಗೆ ಪ್ರಸಾದದ ವಿನಿಯೋಗ ಹಾಗೂ ದಾಸೋಹ ಏರ್ಪಡಿಸುವ ಸಂದರ್ಭದಲ್ಲಿ ಅಗತ್ಯ ಎಚ್ಚರಿಕಾ ಕ್ರಮಗಳನ್ನು ವಹಿಸುವ ಕುರಿತು ಎಲ್ಲಾ ದೇವಾಲಯಗಳ ಆಡಳಿತ ಮಂಡಳಿಗಳ ಮುಖ್ಯಸ್ಥರಿಗೆ ಕಾರ್ಯಾಗಾರ ಏರ್ಪಡಿಸಿ, ಆಹಾರ ಸುರಕ್ಷತಾ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚನೆಗಳನ್ನು ನೀಡಿದ್ದಾರೆ.

ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಸಲಹಾ ಸಮಿತಿ ಸಭೆ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ಯಾಡಿ ಗ್ರಾಮದ ದೇವಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಕ್ತಾದಿಗಳಿಗೆ ನೀಡಲಾದ ಪ್ರಸಾದದಲ್ಲಿ ವಿಷ ಮಿಶ್ರಣದಿಂದ ಹಲವರು ಮೃತಪಟ್ಟು, ಇನ್ನಷ್ಟು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದ್ದರಿಂದ ದೇವಾಲಯಗಳಲ್ಲಿ ದಾಸೋಹ ಮತ್ತು ಪ್ರಸಾದ ತಯಾರಿಸುವಾಗ ಅಗತ್ಯ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಪ್ರಸಾದ ತಯಾರಿಕೆ ಕೋಣೆ ಮತ್ತು ದಾಸೋಹ ತಯಾರಿಸುವ ಅಡುಗೆ ಕೋಣೆಗೆ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸುವಂತೆ ಹಾಗೂ ಈ ಕೋಣೆಗಳಿಗೆ ಯಾವುದೇ ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ನಿಗಾ ವಹಿಸಬೇಕು ಎಂದವರು ನಿರ್ದೇಶನ ನೀಡಿದರು.

ತಯಾರಿಸಿರುವ ನೈವೇದ್ಯ, ಪ್ರಸಾದ, ಅಡುಗೆ ಸ್ವೀಕರಿಸಲು ಯೋಗ್ಯವಾಗಿರುವ ಬಗ್ಗೆ ಖಚಿತಪಡಿಸಿಕೊಂಡು ನಂತರ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ ಜಿಲ್ಲಾಧಿಕಾರಿ, ಸುರಕ್ಷಿತ ಆಹಾರ ತಯಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲೆಯ ದೇವಾಲಯಗಳ ಆಡಳಿತ ಮಂಡಳಿಗಳ ಮುಖ್ಯಸ್ಥರಿಗೆ ಪ್ರತ್ಯೇಕ ಕಾರ್ಯಾಗಾರ ಏರ್ಪಡಿಸುವಂತೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಿಂದ ಗೋವಾಗೆ ತೆರಳುವ ಮೀನುಸಾಗಾಟ ವಾಹನಗಳ ಮಾಲಕರು ಆಹಾರ ಸುರಕ್ಷತಾ ಅಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಕೆಗೆ ಬಳಸುವ ಪದಾರ್ಥಗಳ ಗುಣಮಟ್ಟದ ಕುರಿತು ಆಹಾರ ಸುರಕ್ಷತಾ ಅಧಿಕಾರಿಗಳು ಆಗಿಂದಾಗ್ಗೆ ಭೇಟಿ ನೀಡಿ ಪರಿಶೀಲಿಸುವಂತೆ ತಿಳಿಸಿದರು. ಆಹಾರ ಪದಾರ್ಥಗಳು ಸರಬರಾಜಾಗುವ ಗೋಡೌನ್‌ಗಳಿಗೂ ಭೇಟಿ ನೀಡಿ ಕೈಗೊಂಡಿ ರುವ ಸುರಕ್ಷತಾ ಕ್ರಮಗಳು ಮತ್ತು ಅಲ್ಲಿರುವ ಆಹಾರ ಪದಾರ್ಥಗಳ ಗುಣಮಟ್ಟ ಕುರಿತು ಪರಿಶೀಲಿಸುವಂತೆ ಹಾಗೂ ಈ ಕುರಿತು ತಮಗೆ ವರದಿಯನ್ನು ನೀಡುವಂತೆ ಸೂಚಿಸಿದರು.

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ದಾಳಿ ನಡೆಸುವ ಸಂದರ್ಭದಲ್ಲಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಿ. ತಂಡದ ಸದಸ್ಯರಿಗೆ ಪ್ಲಾಸ್ಟಿಕ್‌ನ ವಿಧಗಳ ಬಗ್ಗೆ ತರಬೇತಿ ನೀಡಿ ಹಾಗೂ ಜಿಲ್ಲೆಯ ಎಲ್ಲಾ ಬೀಚ್‌ಗಳಲ್ಲಿ ಧೂಮಪಾನ ನಿಷೇಧಿತ ಪ್ರದೇಶ ಎಂಬ ಸೂಚನಾ ಫಲಕ ಮತ್ತು ಇದನ್ನು ಉಲ್ಲಂಘಿಸಿದರೆ ದಂಡ ವಿಧಿಸುವ ಕುರಿತ ಎಚ್ಚರಿಕೆ ಫಲಕಗಳನ್ನು ಅವಡಿಸುವಂತೆ ಪ್ರಿಯಾಂಕ ಹೇಳಿದರು.

ಜಿಲ್ಲೆಯಲ್ಲಿ ನವೆಂಬರ್ ಅಂತ್ಯದವರೆಗೆ ಪೊಲೀಸ್ ಇಲಾಖೆ ಮತ್ತು ಇತರೆ ಇಲಾಖೆಗಳ ಕೋಟ್ಪಾ ನಿಯಂತ್ರಣಾ ದಳದಿಂದ ಒಟ್ಟು 1938 ಕಾನೂನು ಉಲ್ಲಂಘನೆ ಪ್ರಕರಣಗಳಲ್ಲಿ 2,61,990ರೂ. ದಂಡ ವಸೂಲಿ ಮಾಡಲಾಗಿದೆ. 46 ಶಾಲೆಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್ ಸಭೆಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X