ಬ್ರಹ್ಮಾವರ: ಡಿ.23ರಿಂದ ಕಿಶೋರ ಯಕ್ಷ ಸಂಭ್ರಮ
ಉಡುಪಿ, ಡಿ.21: ಯಕ್ಷಶಿಕ್ಷಣ ಟ್ರಸ್ಟ್ ಮತ್ತು ಪ್ರದರ್ಶನ ಸಂಘಟನಾ ಸಮಿತಿ ಬ್ರಹ್ಮಾವರದ ವತಿಯಿಂದ ನಡೆಯುವ 13 ಪ್ರೌಢ ಶಾಲಾ ವಿದ್ಯಾರ್ಥಿಗಳ 14 ಯಕ್ಷಗಾನ ಪ್ರದರ್ಶನ ಡಿ.23ರಿಂದ 29ರವರೆಗೆ ಬ್ರಹ್ಮಾವರ ಬಂಟರ ಭವನದ ಮುಂಭಾಗದಲ್ಲಿ ನಡೆಯಲಿದೆ.
ಡಿ.23ರಂದು ಸಂಜೆ 5:30ಕ್ಕೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಜಿಪಂ ಮಾಜಿ ಅಧ್ಯಕ್ಷ ಬಿ. ಭುಜಂಗ ಶೆಟ್ಟಿ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಕೆ. ಗಣೇಶ್ ರಾವ್ ಭಾಗವಹಿಸಲಿರುವರು. ಬಳಿಕ ಸರಕಾರಿ ಪದವಿ ಪೂರ್ವ ಕಾಲೇಜು ಕೊಕ್ಕರ್ಣೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಬ್ರಹ್ಮಾವರ ಇವರಿಂದ ಯಕ್ಷೋತ್ತಮ ಕಾಳಗ ಹಾಗೂ ತಾಮ್ರಧ್ವಜ ಕಾಳಗ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.
Next Story





