Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೊಸ ಸುಂಕ ಆದೇಶ ಖಂಡಿಸಿ ಕೇಬಲ್...

ಹೊಸ ಸುಂಕ ಆದೇಶ ಖಂಡಿಸಿ ಕೇಬಲ್ ಆಪರೇಟರ್‌ಗಳ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ21 Dec 2018 9:51 PM IST
share
ಹೊಸ ಸುಂಕ ಆದೇಶ ಖಂಡಿಸಿ ಕೇಬಲ್ ಆಪರೇಟರ್‌ಗಳ ಪ್ರತಿಭಟನೆ

ಬೆಂಗಳೂರು, ಡಿ.21: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ರೂಪಿಸಿರುವ ಹೊಸ ಸುಂಕದ ಆದೇಶ ಖಂಡಿಸಿ ಕೇಬಲ್ ಟಿವಿ ಆಪರೇಟರ್‌ಗಳ ಸಂಘದ ವತಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು.

ಶುಕ್ರವಾರ ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಜಮಾಯಿಸಿದ್ದ ನೂರಾರು ಕೇಬಲ್ ಟಿವಿ ಆಪರೇಟರ್‌ಗಳು ಪ್ರಾಧಿಕಾರ ರೂಪಿಸಲು ಮುಂದಾಗಿರುವ ಹೊಸ ಸುಂಕದ ನೀತಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.

ಪ್ರಾಧಿಕಾರ ರಚಿಸಿರುವ ನೀತಿಯ ಹಿನ್ನೆಲೆಯಲ್ಲಿ ಕೇಬಲ್ ಟಿವಿ ಗ್ರಾಹಕರು ಪ್ರಸಾರಕರಿಗೆ ಹೆಚ್ಚಿನ ಶುಲ್ಕ ಪಾವತಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇದರಿಂದಾಗಿ ಕೇಬಲ್ ಟಿವಿ ಆಪರೇಟರ್‌ಗಳು ಟ್ರಾಯ್‌ನ ಹೊಸ ಸುಂಕದ ನೀತಿಯಿಂದ ಕೇಬಲ್ ಉದ್ಯಮವನ್ನೇ ನಂಬಿರುವ ಸಾವಿರಾರು ಕುಟುಂಬಗಳು ಬೀದಿಪಾಲಾಗಲಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಹೊಸ ಸುಂಕದ ಆದೇಶದಿಂದ ಬ್ರಾಡ್ ಕಾಸ್ಟರ್ ಹಾಗೂ ಕೇಬಲ್ ಆಪರೇಟರ್‌ಗೆ ಹಣ ಹಂಚಿಕೆ ವಿಷಯದಲ್ಲಿ ಗಂಡಾಂತರ ಪರಿಗಣಿಸಲಿದ್ದು, ಕೇಬಲ್ ಆಪರೇಟರ್‌ಗಳು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಕೂಡಲೇ ಹೊಸ ಸುಂಕದ ಆದೇಶವನ್ನು ಹಿಂತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ಯಾಟ್ರಿಕ್ ರಾಜು, ಕೇಬಲ್ ಆಪರೇಟರ್‌ಗಳು ಆರ್ಥಿಕವಾಗಿ ಹಿಂದುಳಿದಿದ್ದು, ಕನಿಷ್ಠ ತಿಳುವಳಿಕೆಯನ್ನು ಹೊಂದಿರುತ್ತಾರೆ. ಅವರು ಯಾವುದೇ ಕಾರ್ಪೊರೇಟ್ ಕಂಪನಿಗಳಿಂದಾಗಲಿ, ಚಾನಲ್‌ಗಳಿಂದಾಗಲಿ ನೆರವು ಪಡೆಯುವುದಿಲ್ಲ. ಕಾಲಕಾಲಕ್ಕೆ ತಂತ್ರಜ್ಞಾನವನ್ನು ಬಲಪಡಿಸಿಕೊಳ್ಳುತ್ತಾ ಸಾಗುತ್ತಿದ್ದಾರೆ. ಕಷ್ಟಪಟ್ಟು ಉದ್ಯಮವನ್ನು ಮುಂದುವರೆಸಿಕೊಂಡು ಹೋಗುತ್ತಿರುವ ಕೇಬಲ್ ಆಪರೇಟರ್‌ಗಳಿಗೆ ಕಾರ್ಪೊರೇಟ್ ಕಂಪನಿಗಳು ಹೊಡೆತ ನೀಡುತ್ತಿರುವುದು ಸರಿಯಲ್ಲ ಎಂದರು.

ಪೇ ಚಾನಲ್‌ಗಳ ವಿಷಯ ಬಂದಾಗಲೂ ಕೇಬಲ್ ಆಪರೇಟರ್‌ಗಳಿಗೆ ಅನ್ಯಾಯವಾಗಿದೆ. ಬ್ರಾಡ್ ಕಾಸ್ಟರ್‌ಗಳು ಶೇ. 95 ರಷ್ಟು ಹಣವನ್ನು ಜಾಹೀರಾತುಗಳಿಂದಲೇ ಪಡೆಯುತ್ತಿದ್ದು, ನಿರಂತರವಾಗಿ ದಿನದ 24 ಗಂಟೆಗಳ ಕಾಲ ಗ್ರಾಹಕರಿಗೆ ಚಾನಲ್‌ಗಳನ್ನು ತಲುಪಿಸುತ್ತಿರುವ ಕೇಬಲ್ ಆಪರೇಟರ್‌ಗಳ ಸಂಕಷ್ಟ ನಿವಾರಿಸಬೇಕು ಎಂದು ಅವರು ಒತ್ತಾಯಿಸಿದರು.

ಕೇಬಲ್ ಟಿವಿ ಗ್ರಾಹಕ ಪ್ರಾದೇಶಿಕ ಅಥವಾ ಕ್ರೀಡಾ ವಾಹಿನಿಗಳ ಹೊರತಾಗಿ ಕೇವಲ ಪ್ರಮುಖ ಚಾನೆಲ್‌ಗಳನ್ನು ವೀಕ್ಷಿಸಲು ಮಾಸಿಕ 450 ಪಾವತಿಸಬೇಕು. ಎಲ್ಲ ವಾಹಿನಿಗಳ ಗುಚ್ಛವನ್ನು ಪಡೆಯಬಯಸಿದರೆ ಗ್ರಾಹಕರು 800 ರೂ. ಪಾವತಿಸಬೇಕಾಗುತ್ತದೆ. ಪ್ರಾಧಿಕಾರ ಹೇಳಿದ ತಕ್ಷಣ ಗ್ರಾಹಕರು ಹೆಚ್ಚುವರಿ ಶುಲ್ಕ ಪಾವತಿಸಲು ಮುಂದಾಗುವುದಿಲ್ಲ. ಇದರ ಹೊರೆ ಆಪರೇಟರ್‌ಗಳ ಮೇಲೆ ಬೀಳುತ್ತದೆ. ಹೀಗಾಗಿ, ಅದನ್ನು ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆಂದು ಅವರು ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X