ಡಿ.23ರಂದು ಕಾರ್ಕಳ ತಾಲೂಕು ಮಟ್ಟದ ಕ್ರೀಡಾಕೂಟ
ಉಡುಪಿ, ಡಿ.21: ಕಾರ್ಕಳ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ರಜತ ಮಹೋತ್ಸವ ಮತ್ತು ಶಿವಾಜಿ ಜಯಂತಿ ಪ್ರಯುಕ್ತ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಡಿ.23ರಂದು ಕಾರ್ಕಳ ಭುವನೇಂದ್ರ ಕಾಲೇಜು ಬಳಿಯ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಬೆಳಗ್ಗೆ 9ಗಂಟೆಗೆ ಕ್ರೀಡಾಕೂಟವನ್ನು ಸಂಘದ ಜಿಲ್ಲಾಧ್ಯಕ್ಷ ಎಸ್.ಅನಂತ ನಾಯ್ಕ ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಕಾರ್ಕಳ ಕ್ರೀಡಾಧಿಕಾರಿ ಫೆಡ್ರಿಕ್ ರೆಬೆಲ್ಲೊ ಭಾಗವಹಿಸಲಿರುವರು. ಅಪರಾಹ್ನ 3:30ಕ್ಕೆ ಬಹುಮಾನ ವಿತರಣಾ ಸಮಾರಂಭದಲ್ಲಿ ನಿವೃತ್ತ ಜಿಲ್ಲಾ ಸರ್ಜನ್ ಡಾ.ಆನಂದ ನಾಯ್ಕ ಭಾಗವಹಿಸಲಿರುವರು ಎಂದು ತಾಲೂಕು ಅಧ್ಯಕ್ಷ ರಾಘವ ನಾಯ್ಕೆ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಶಂಕರ ನಾಯ್ಕ, ಕ್ರೀಡಾ ಕಾರ್ಯದರ್ಶಿ ಅಶೋಕ್ ನಾಯ್ಕ, ಸಂಘಟನಾ ಕಾರ್ಯದರ್ಶಿ ಸುರೇಶ್ ನಾಯ್ಕ, ಹೆಬ್ರಿ ವಲಯ ಯುವ ಘಟಕದ ಅಧ್ಯಕ್ಷ ನಾಗೇಂದ್ರ ನಾಯ್ಕ ಉಪಸ್ಥಿತರಿದ್ದರು.
Next Story