ಡಿ.25ರಂದು ಭಾಷಾ ಸಮ್ಮಾನ ಪ್ರದಾನ ಸಮಾರಂಭ
ಬೆಂಗಳೂರು, ಡಿ.21: ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಡಿ.25ರಂದು ನಗರದ ಜಯನಗರದ ಶ್ರೀಜಯರಾಮ ಸೇವಾ ಮಂಡಳಿ ವತಿಯಿಂದ ಭಾಷಾ ಸಮ್ಮಾನ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನಿಘಂಟು ತಜ್ಞ ಜಿ.ವೆಂಕಟಸುಬ್ಬಯ್ಯಗೆ ಭಾಷಾ ಸಮ್ಮಾನ ಪ್ರದಾನ ಮಾಡಲಾಗುತ್ತದೆ. ಈ ವೇಳೆ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ, ಹಿರಿಯ ಕವಿ ಸಿದ್ದಲಿಂಗಯ್ಯ, ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ ಮಾತನಾಡಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story





