Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಂದೂರ್ ಹಂತಕ ಸುಶೀಲ್ ಶರ್ಮಾನನ್ನು ತಕ್ಷಣ...

ತಂದೂರ್ ಹಂತಕ ಸುಶೀಲ್ ಶರ್ಮಾನನ್ನು ತಕ್ಷಣ ಬಿಡುಗಡೆಗೊಳಿಸಲು ದಿಲ್ಲಿ ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ21 Dec 2018 11:12 PM IST
share
ತಂದೂರ್ ಹಂತಕ ಸುಶೀಲ್ ಶರ್ಮಾನನ್ನು ತಕ್ಷಣ ಬಿಡುಗಡೆಗೊಳಿಸಲು ದಿಲ್ಲಿ ಹೈಕೋರ್ಟ್ ಆದೇಶ

ಹೊಸದಿಲ್ಲಿ,ಡಿ.21: 1995ರಲ್ಲಿ ತನ್ನ ಪತ್ನಿ ನೈನಾ ಸಾಹ್ನಿಯನ್ನು ಕೊಂದು ಬಳಿಕ ತಂದೂರ್ ನಲ್ಲಿ ಆಕೆಯ ಶವವನ್ನು ಸುಟ್ಟಿದ್ದ ಆರೋಪದಲ್ಲಿ ಕಳೆದ ಎರಡು ದಶಕಗಳಿಗೂ ಅಧಿಕ ಕಾಲದಿಂದ ಜೈಲಿನಲ್ಲಿ ಕೊಳೆಯುತ್ತಿರುವ ಸುಶೀಲ್ ಶರ್ಮಾನನ್ನು ತಕ್ಷಣವೇ ಬಿಡುಗಡೆಗೊಳಿಸುವಂತೆ ದಿಲ್ಲಿ ಉಚ್ಚ ನ್ಯಾಯಾಲಯವು ಶುಕ್ರವಾರ ಆದೇಶಿಸಿದೆ.

ಕೊಲೆ ಆರೋಪದಲ್ಲಿ ತನ್ನ ಶಿಕ್ಷೆಯನ್ನು ಪೂರೈಸಿರುವ ವ್ಯಕ್ತಿಯನ್ನು ಅನಿರ್ದಿಷ್ಟಾವಧಿಯವರೆಗೆ ಜೈಲಿನಲ್ಲಿಡಬಹುದೇ ಎಂದು ಈ ವಾರದ ಪೂರ್ವಾರ್ಧದಲ್ಲಿ ವಿಚಾರಣೆ ಸಂದರ್ಭ ಪ್ರಶ್ನಿಸಿದ್ದ ನ್ಯಾಯಾಲಯವು,ಮಾನವ ಹಕ್ಕುಗಳನ್ನು ಪ್ರಸ್ತಾಪಿಸಿತ್ತು.

ತಾನು ಗರಿಷ್ಠ ನಿಗದಿತ ಶಿಕ್ಷೆಗಿಂತ ಹೆಚ್ಚಿನ ಅವಧಿಯನ್ನು ಜೈಲಿನಲ್ಲಿ ಕಳೆದಿರುವುದರಿಂದ ತನ್ನನ್ನು ಬಿಡುಗಡೆಗೊಳಿಸುವಂತೆ ಮಾಜಿ ಯುವ ಕಾಂಗ್ರೆಸ್ ನಾಯಕ ಶರ್ಮಾ(56) ನ್ಯಾಯಾಲಯವನ್ನು ಕೋರಿದ್ದ.

ಬಿಡುಗಡೆಗಾಗಿ ಶರ್ಮಾನ ಮನವಿಯನ್ನು ಶಿಕ್ಷೆಗಳ ಪುನರ್‌ಪರಿಶೀಲನೆ ಮಂಡಳಿಯು ತಿರಸ್ಕರಿಸಿದ್ದನ್ನು ಪ್ರಸ್ತಾಪಿಸಿದ್ದ ಉಚ್ಚ ನ್ಯಾಯಾಲಯವು, ಇದೊಂದು ಬರ್ಬರ ಹತ್ಯೆ,ಹೀಗಾಗಿ ಆತನನ್ನು ಬಿಡುಗಡೆಗೊಳಿಸುವುದಿಲ್ಲ ಎಂದು ಮಂಡಳಿಯು ಹೇಳುವಂತಿಲ್ಲ. ಆತನನ್ನು ಎರಡು ದಶಕಗಳಿಗೂ ಹೆಚ್ಚಿನ ಸಮಯ ಜೈಲಿನಲ್ಲಿಡಲಾಗಿದೆ. ಆತ ಮಾಡಿದ್ದ ಕೊಲೆ ಬರ್ಬರವಾಗಿತ್ತು,ನಿಜ. ಅದಕ್ಕಾಗಿ ಈಗಾಗಲೇ ಆತ ಶಿಕ್ಷೆಯನ್ನು ಅನುಭವಿಸಿದ್ದಾನೆ. ಇನ್ನೂ ಆತನನ್ನು ಜೈಲಿನಲ್ಲಿಟ್ಟರೆ ಅದು ಆತನ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿತ್ತು.

ವ್ಯಕ್ತಿಯೋರ್ವನನ್ನು ಅನಿರ್ದಿಷ್ಟಾವಧಿಯವರೆಗೆ ಜೈಲಿನಲ್ಲಿಡಲು ಕಾರ್ಯಾಂಗಕ್ಕೆ ಅವಕಾಶ ನೀಡಿದರೆ ಕೊಲೆ ಮಾಡಿದ ವ್ಯಕ್ತಿ ಎಂದೂ ಬಿಡುಗಡೆಗೊಳ್ಳುವಂತಿಲ್ಲ ಎಂದೂ ಅದು ಹೇಳಿತ್ತು. ತನ್ನ ಪತ್ನಿ ಅನೈತಿಕ ಸಂಬಂಧವನ್ನು ಹೊಂದಿದ್ದಾಳೆಂಬ ಶಂಕೆಯಿಂದ 1995,ಜು.2ರಂದು ಆಕೆಯೊಡನೆ ಜಗಳವಾಡಿದ್ದ ಶರ್ಮಾ ಗುಂಡಿಟ್ಟು ಹತ್ಯೆಗೈದಿದ್ದ. ಬಳಿಕ ಆಕೆಯ ಶವವನ್ನು ತುಂಡುಗಳನ್ನಾಗಿ ಮಾಡಿ ಹೊಟೇಲ್‌ನ ತಂದೂರ್ನಲ್ಲಿ ಸುಡಲು ಯತ್ನಿಸಿದ್ದ.

2003ರಲ್ಲಿ ಕೆಳ ನ್ಯಾಯಾಲಯವು ಆತನಿಗೆ ಮರಣ ದಂಡನೆಯನ್ನು ವಿಧಿಸಿತ್ತು ಮತ್ತು 2007ರಲ್ಲಿ ದಿಲ್ಲಿ ಉಚ್ಚ ನ್ಯಾಯಾಲಯವು ಇದನ್ನು ಎತ್ತಿ ಹಿಡಿದಿತ್ತು. 2013ರಲ್ಲಿ ಸರ್ವೋಚ್ಚ ನ್ಯಾಯಾಲಯವು ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಗೆ ತಗ್ಗಿಸಿತ್ತು.

ತಂದೂರ್ ಕೊಲೆ ಎಂದೇ ಕುಖ್ಯಾತಿಯನ್ನು ಪಡೆದಿದ್ದ ಈ ಪ್ರಕರಣದಲ್ಲಿ ಆರೋಪವನ್ನು ಸಾಬೀತುಗೊಳಿಸಲು ಡಿಎನ್‌ಎ ಸಾಕ್ಷಾಧಾರ ಮತ್ತು ಮರು ಮರಣೋತ್ತರ ಪರೀಕ್ಷೆಯನ್ನು ಬಳಸಿಕೊಳ್ಳಲಾಗಿದ್ದರಿಂದ ಇದು ಭಾರತದಲ್ಲಿ ಚಾರಿತ್ರಿಕ ಪ್ರಕರಣಗಳಲ್ಲೊಂದಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X