ವಿಷ ಪ್ರಸಾದ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಎಸ್.ಎಲ್.ಬೈರಪ್ಪ ಆಗ್ರಹ

ಚಾಮರಾಜನಗರ, ಡಿ.21: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ದುರಂತ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯ ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಶಿಕ್ಷೆ ಪ್ರಕಟಿಸಬೇಕು ಸಾಹಿತಿ ಡಾ. ಎಸ್.ಎಲ್.ಬೈರಪ್ಪ ಆಗ್ರಹಿಸಿದ್ದಾರೆ.
ಕೊಳ್ಳೇಗಾಲ ಪಟ್ಟಣದಲ್ಲಿ ಮಾನಸ ಕಾಲೇಜಿನಲ್ಲಿ ಮಾನಸೋತ್ಸವ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸುಳ್ವಾಡಿ ಪ್ರಕರಣದ ಆರೋಪಿಗಳಿಗೆ ಕಾನೂನು ರೀತಿಯಲ್ಲಿ ಕಠಿಣ ಶಿಕ್ಷೆಯಾಗಬೇಕು. ದುರಂತದಲ್ಲಿ ಮೃತಪಟ್ಟವರಿಗೆ ಹಾಗೂ ಅಸ್ವಸ್ಥಗೊಂಡವರಿಗೆ ಹೆಚ್ಚಿನ ಪರಿಹಾರವನ್ನು ಸರಕಾರ ನೀಡಬೇಕು ಎಂದು ಹೇಳಿದರು.
Next Story





