Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆಯಿಂದ ಸ್ಪರ್ಧಾತ್ಮಕ...

ದ.ಕ. ಜಿಲ್ಲೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವವರ ಸಂಖ್ಯೆ ವಿರಳ : ಅಪರ ಜಿಲ್ಲಾಧಿಕಾರಿ ಕುಮಾರ್

ವಾರ್ತಾಭಾರತಿವಾರ್ತಾಭಾರತಿ22 Dec 2018 8:11 PM IST
share
ದ.ಕ. ಜಿಲ್ಲೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವವರ ಸಂಖ್ಯೆ ವಿರಳ : ಅಪರ ಜಿಲ್ಲಾಧಿಕಾರಿ ಕುಮಾರ್

ಪುತ್ತೂರು, ಡಿ. 22: ದ.ಕ. ಜಿಲ್ಲೆ ಶೈಕ್ಷಣಿಕವಾಗಿ ಮೇಲುಗೈ ಸಾಧಿಸಿದ್ದರೂ ಜಿಲ್ಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸುತ್ತಿರುವವರ ಸಂಖ್ಯೆ ತೀರಾ ಕಡಿಮೆಯಿದೆ. ಇದರಿಂದಾಗಿ  ಆಡಳಿತಾತ್ಮಕ ವಿಷಯದಲ್ಲಿ ಕೆಳಗಿರುವುದಕ್ಕೆ ಕರ್ನಾಟಕ ಸರ್ಕಾರದ ನಾಗರಿಕ ಸೇವೆಗಳಲ್ಲಿ ಜಿಲ್ಲೆಯ ಪ್ರಾತಿನಿದ್ಯ ಅತ್ಯಂತ ವಿರಳವಾಗಿರುವುದೇ ಇದಕ್ಕೆ ಕಾರಣವಾಗಿದೆ  ಎಂದು ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿ ಕುಮಾರ್ ಹೇಳಿದರು.

ಅವರು ಶನಿವಾರ ಪುತ್ತೂರು ಉಪವಿಭಾಗ ಮತ್ತು ಪುತ್ತೂರು ಆಡಳಿತ ವತಿಯಿಂದ, ಪುತ್ತೂರು ಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ದ.ಕ. ಜಿಲ್ಲೆಯವರು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸುವವರು ಕಡಿಮೆ ಹಾಗಾಗಿ ಆಡಳಿತಕ್ಕೆ ಬರುವವರು ಕಡಿಮೆಯಾಗಿದ್ದಾರೆ ಎಂದ ಅವರು ವಿದ್ಯಾರ್ಥಿ ಜೀವನ ಅಮೂಲ್ಯವಾದ ಜೀವನವಾಗಿದೆ.  ಈ ಸಮಯದಲ್ಲಿ ಕನಸನ್ನು ಕಾಣಬೇಕು. ಆದರೆ ನಿದ್ದೆ ಮಾಡುವಂತಹ ಕನಸಲ್ಲ ನಿದ್ದೆಯಿಂದ ಎಚ್ಚರಿಸುವ ಕನಸು ಕಾಣಬೇಕು. ನಾವು ಕನಸನ್ನು ಕಟ್ಟಿಕೊಳ್ಳುವಾಗ ದೊಡ್ಡ ಪ್ರಮಾಣದ ಕನಸನ್ನು ಕಟ್ಟಬೇಕು. ಮುಂದೆ ಆ ಕನಸು ನನಸು ಮಾಡುವ ಗುರಿಯತ್ತ ಮುನ್ನಡಿಯಿಡ ಬೇಕು. ಬದುಕಿನಲ್ಲಿ ಎತ್ತರಕ್ಕೆ ಏರಬೇಕಾದಲ್ಲಿ ಸಿಗುವ ಸಮಯವನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕು. ಬೇರೆಯವರ ದಾರಿಯನ್ನು ಅನುಕರಣೆ ಮಾಡದೇ ನಮ್ಮದೇ ಆದ ದಾರಿಯನ್ನು ಅನುಸರಿಸಿ ಬದುಕಿನಲ್ಲಿ ಗುರಿಯನ್ನು ತಲುಪಬೇಕು ಎಂದರು.

ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಎಚ್.ಕೆ. ಕೃಷ್ಣಮೂರ್ತಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ವಿದ್ಯಾರ್ಥಿಗಳು ಹಾಗೂ ಆಸಕ್ತರಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಆಸಕ್ತಿ ಮೂಡಿಸಿ ಸ್ಪೂರ್ತಿ ತುಂಬಲು ಹಾಗೂ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಮೂಡಿಸಲು ಈ ತರಬೇತಿಯ ಮೂಲಕ ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು. 

ಬಳಿಕ ನಡೆದ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ದ.ಕ. ಜಿಲ್ಲಾ ಅಪರ ಜಿಲ್ಲಾಧಿಕಾರಿ ಕುಮಾರ್, ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಎಚ್.ಕೆ. ಕೃಷ್ಣಮೂರ್ತಿ, ಶಿವಮೊಗ್ಗ ಅಚೀವರ್ಸ್ ಕೋಚಿಂಗ್ ಸೆಂಟರ್‍ನ ಶಿವಕುಮಾರ್, ದ.ಕ.ಜಿ.ಪಂ. ಸಹಾಯಕ ಕಾರ್ಯದರ್ಶಿ ಸಂತೋಷ್ ಕುಮಾರ್, ಪುತ್ತೂರು ಸರ್ಕಾರಿ ಮಹಿಳಾ ಕಾಲೇಜ್‍ನ ಪ್ರಾಂಶುಪಾಲ ಪ್ರೊ. ಝೇವಿಯರ್ ಡಿ'ಸೋಜ, ಮಂಗಳೂರು ಸರ್ವಜ್ಞ ಅಕಾಡಮಿಯ ಮುಖ್ಯಸ್ಥ ಸುರೇಶ್ ಕುಮಾರ್, ರಾಷ್ಟ್ರೀಯ ಹೆದ್ದಾರಿ ಭೂ ಸ್ವಾಧೀನ ಆಧಿಕಾರಿ ಯತೀಶ್ ಉಳ್ಳಾಲ್ ಅವರು ವಿವಿಧ ವಿಷಯಗಳ ಬಗ್ಗೆ ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಓರ್ವ ಐಎಎಸ್ ಮತ್ತು ಇಬ್ಬರು ಕೆಎಎಸ್ ಪರೀಕ್ಷೆ ಪೂರೈಸಿದ ವಿದ್ಯಾರ್ಥಿಗಳು ತನ್ನ ಅನುಭವವನ್ನು ಹಂಚಿಕೊಂಡರು. 
ಸುಮಾರು 450ಕ್ಕೂ ಮಿಕ್ಕಿ ಶಿಭಿರಾರ್ಥಿಗಳು ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಪುತ್ತೂರು ತಹಸೀಲ್ದಾರ್ ಅನಂತಶಂಕರ್ ಉಪಸ್ಥಿತರಿದ್ದರು. ಲಕ್ಷ್ಮೀಕಾಂತ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X