ಡಿ.25ರಂದು ಸಹಕಾರಿ ಪ್ರಶಸ್ತಿ ಪುರಸ್ಕೃತರಿಗೆ ಸಾರ್ವಜನಿಕ ಅಭಿನಂದನೆ
ಉಡುಪಿ, ಡಿ.23: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಸಹಕಾರಿ ಧುರೀಣರಾದ ಕೆ.ಕೃಷ್ಣರಾಜ ಸರಳಾಯ ಮತ್ತು ಸರಳಾ ಬಿ.ಕಾಂಚನ್ ಹಾಗೂ ಶ್ರೇಷ್ಠ ಸಹಕಾರಿ ಪ್ರಶಸ್ತಿ ಪಡೆದ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮವನ್ನು ಡಿ.25ರಂದು ಮಧ್ಯಾಹ್ನ 2:30ಕ್ಕೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ.
ಉಡುಪಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅಭಿನಂದನಾ ಸಮಿತಿ ಕಾರ್ಯದರ್ಶಿ ಬಿ.ವಿ.ಲಕ್ಷ್ಮೀನಾರಾಯಣ ಈ ವಿಷಯ ತಿಳಿಸಿದರು. ಸಮಾ ರಂಭವನ್ನು ಪರ್ಯಾಯ ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಉದ್ಘಾಟಿಸಲಿರುವರು. ಕಾಣಿಯೂರು ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಅದಮಾರು ಕಿರಿಯ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಲಿರುವರು.
ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಉಡುಪಿ ಶಾಸಕ ಕೆ.ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಮಾಹಿತ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್, ಡಾ.ಜಿ.ಶಂಕರ್ ಮೊದ ಲಾದವರು ಭಾಗವಹಿಸಲಿರುವರು.
ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಪ್ರಮುಖರಾದ ವಸಂತಿ ರಾವ್ ಕೊರಡ್ಕಲ್, ವಿ.ಜಿ.ಶೆಟ್ಟಿ, ರಂಗನಾಥ ಸಾಮಗ, ಮಂಜುನಾಥ ಉಪಾಧ್ಯ ಉಪಸ್ಥಿತರಿದ್ದರು.