ಹೊಕ್ಕಾಡಿಗೋಳಿ: ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ ಸಮಾರೋಪ

ಬಂಟ್ವಾಳ, ಡಿ. 23: ಜಿಲ್ಲೆಯಲ್ಲಿ ಕೃಷಿಕರು ತನ್ನ ಮಕ್ಕಳಂತೆ ಸಾಕಿದ ಓಟದ ಕೋಣಗಳನ್ನು ಓಡಿಸಲು ಹಿಂದಿನ ಮಾದರಿಯಲ್ಲೇ ಬೆತ್ತ ಸಹಿತ ಅಹಿಂಸಾತ್ಮಕವಾಗಿ ನಡೆಸಲು ಕಾನೂನು ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಹೊಕ್ಕಾಡಿಗೋಳಿಯಲ್ಲಿ ಮಹಿಷ ಮರ್ಧಿನಿ ಕಂಬಳ ಸಮಿತಿ ವತಿಯಿಂದ ಶನಿವಾರ ರಾತ್ರಿ ನಡೆದ ವೀರ -ವಿಕ್ರಮ ಜೋಡುಕರೆ ಬಯಲು ಕಂಬಳ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕರಾವಳಿ ಜಿಲ್ಲೆಯಲ್ಲಿ ಯಾವುದೇ ಜಾತಿ, ಮತ, ಧರ್ಮ ಮತ್ತು ರಾಜಕೀಯ ಬೇಧವಿಲ್ಲದೆ ಕೃಷಿಕರು ಒಟ್ಟಾಗಿ ಕಂಬಳ ಕ್ರೀಡೆ ನಡೆಸುತ್ತಿರುವ ಬಗ್ಗೆ ಏನೂ ಗೊತ್ತಿರದ ಕೆಲವೊಂದು ಮಂದಿ ಕೋರ್ಟಿಗೆ ತಪ್ಪು ಮಾಹಿತಿ ನೀಡಿ ಕಂಬಳ ಸ್ಥಗಿತಗೊಳಿಸಲು ಹವಣಿಸುತ್ತಿದ್ದಾರೆ. ಇದಕ್ಕಾಗಿ ಈಗಾಗಲೇ ಅಟಾರ್ನಿ ಜನರಲ್ ಮೂಲಕ ಅವಿರತ ಶ್ರಮ ವಹಿಸಿ ಧಾರ್ಮಿಕ ನಂಟು ಹೊಂದಿರುವ ಕಂಬಳವನ್ನು ಅಹಿಂಸಾತ್ಮಕವಾಗಿ ಮುನ್ನಡೆಸಲು ಕಂಬಳಾಸಕ್ತರ ಬೆಂಬಲ ಅಗತ್ಯವಿದೆ ಎಂದು ಅವರು ಹೇಳಿದರು.
ಇದೇ ವೇಳೆ ಕಂಬಳದ ಮಾಜಿ ಪ್ರಧಾನ ತೀರ್ಪುಗಾರ ಬೆಳ್ಳಿಪಾಡಿ ಮಂಜಯ ರೈ ಇವರನ್ನು ಸನ್ಮಾನಿಸಲಾಯಿತು.
ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ, ಕಂಬಳ ಕ್ರೀಡೆಯು ಜಿಲ್ಲೆಯ ಜನರ ಕೃಷಿ ಪದ್ಧತಿಯಿಂದ ಹಂತ ಹಂತವಾಗಿ ಬೆಳೆದು ಬಂದಿದೆ ಎಂದರು.
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಈ ಹಿಂದೆ ಕಾವಳಮೂಡೂರು ಎಂಬಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಉಪಸ್ಥಿತಿಯಲ್ಲಿ ನಾನು 10 ವರ್ಷ ಅದ್ದೂರಿ ಕಂಬಳ ನಡೆಸಿದ್ದೇನೆ. ಇದೇ ವೇಳೆ ಕಂಬಳ ಚಿತ್ರೀಕರಿಸಿದ್ದ ವ್ಯಕ್ತಿಯೊಬ್ಬರು ಕಂಬಳದಲ್ಲಿ ಹಿಂಸೆಯಾಗುತ್ತಿದೆ ಎಂದು ಆರೋಪಿಸಿ ಅಂದಿನ ಕೇಂದ್ರ ಸಚಿವೆ ಮೇನಕಾ ಗಾಂಧಿಗೆ ಸಿಡಿ ಕಳುಹಿಸಿದ್ದರು. ಇದರಿಂದಾಗಿ ಜಿಲ್ಲೆಯಲ್ಲಿ ಕಂಬಳ ಸ್ಥಗಿತಗೊಳ್ಳಲು ಪ್ರಮುಖ ಕಾರಣವಾಗಿದೆ ಎಂದರು.
ಬಂಟ್ವಾಳ ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಬೆಳ್ತಂಗಡಿ ಶಾಸಕ ಹರೀಶ ಪೂಂಜ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಮತ್ತಿತರರು ಮಾತನಾಡಿದರು.
ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್.ಶೆಟ್ಟಿ, ಗೌರವ ಸಲಹೆಗಾರ ಗುಣಪಾಲ ಕಡಂಬ, ಜಿಲ್ಲಾ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು, ಮಾಜಿ ಕಾರ್ಯದರ್ಶಿ ವಿಜಯ ಕುಮಾರ್, ಪ್ರಮುಖರಾದ ಬಾರ್ಕೂರು ಶಾಂತರಾಮ ಶೆಟ್ಟಿ, ವಿನು ವಿಶ್ವನಾಥ ಶೆಟ್ಟಿ ಕರಿಂಜೆ, ಜಿಪಂ ಸದಸ್ಯರಾದ ಎಂ.ತುಂಗಪ್ಪ ಬಂಗೇರ, ಬಿ.ಪದ್ಮಶೇಖರ ಜೈನ್, ಎಪಿಎಂಸಿ ಸದಸ್ಯ ಎಂ.ಪದ್ಮರಾಜ ಬಲ್ಲಾಳ್ ಮಾವಂತೂರು, ಬಂಟ್ವಾಳ ಪುರಸಭೆ ಮಾಜಿ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಅಧ್ಯಕ್ಷ ಎಂ.ದುರ್ಗಾದಾಸ್ ಶೆಟ್ಟಿ ಮಾವಂತೂರು, ತಾಪಂ ಮಾಜಿ ಸದಸ್ಯ ವಸಂತ ಕುಮಾರ್ ಅಣ್ಣಳಿಕೆ, ಆರಂಬೋಡಿ ಗ್ರಾಪಂ ಅಧ್ಯಕ್ಷ ಪ್ರಭಾಕರ ಹುಲಿಮೇರು, ಚೆನ್ನೈತ್ತೋಡಿ ಗ್ರಾಪಂ ಮಾಜಿ ಅಧ್ಯಕ್ಷ ನವೀನಚಂದ್ರ ಶೆಟ್ಟಿ, ಪಂಜಿಕಲ್ಲು ಗ್ರಾಪಂ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ, ಪದಾಧಿಕಾರಿಗಳಾದ ಬಾಬು ರಾಜೇಂದ್ರ ಶೆಟ್ಟಿ ಅಜ್ಜಾಡಿ, ಎಚ್. ಹರೀಶ್ ಹಿಂಗಾಣಿ, ಸಂದೇಶ್ ಶೆಟ್ಟಿ ಪೆÇಡುಂಬ, ಪುಷ್ಪರಾಜ ಜೈನ್ ನಡ್ಯೋಡಿ, ಹರಿಪ್ರಸಾದ್ ಶೆಟ್ಟಿ ಕುರ್ಡಾಡಿ, ರಾಜೇಶ್ ಶೆಟ್ಟಿ ಕೊನೆರೊಟ್ಟು, ಪ್ರವೀಣ್ ಶೆಟ್ಟಿ ಮಾವಿನಕಟ್ಟೆ, ಕಿರಣ್ ಕುಮಾರ್ ಮಂಜಿಲ, ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಜನಾರ್ದನ ಬಂಗೇರ ತಿಮರಡ್ಡ, ಕೃಷ್ಣ ಶೆಟ್ಟಿ ಉಮನೊಟ್ಟು, ಉಮೇಶ್ ಶೆಟ್ಟಿ ಕೊನೆರೊಟ್ಟು, ಸುಧೀಂದ್ರ ಶೆಟ್ಟಿ ಕಲಾಯಿದಡ್ಡ, ರಾಜೇಶ್ ಶೆಟ್ಟಿ ಸಿದ್ದಕಟ್ಟೆ, ಸಾಧು ಶೆಟ್ಟಿ ಕಲ್ಲಾಪು, ಜನಾರ್ದನ ನಾಯ್ಕ್ ಸಿದ್ದಕಟ್ಟೆ, ಎಚ್.ಎ. ರಹ್ಮಾನ್ ಹೊಕ್ಕಾಡಿಗೋಳಿ, ರಮೇಶ್ ಪೂಜಾರಿ ಕುಂಜಾಡಿ, ಸುರೇಶ್ ಕೆ. ಶೆಟ್ಟಿ ಹಕ್ಕೇರಿ, ಸುಧೀರ್ ಶೆಟ್ಟಿ ಹೊಕ್ಕಾಡಿಗೋಳಿ, ರಾಜು ಗುಮ್ಮಣ್ಣ ಶೆಟ್ಟಿ ಹೊಕ್ಕಾಡಿಗೋಳಿ, ಸುಧಾಕರ ಚೌಟ ಬಾವ ಹೊಸಬೆಟ್ಟು, ಹರೀಶ್ ಶೆಟ್ಟಿ ಹೊಕ್ಕಾಡಿಗೋಳಿ, ಟಿ.ನರಸಿಂಹ ಪೈ ಮಾವಿನಕಟ್ಟೆ, ಆನಂದ ಶೆಟ್ಟಿ ಹಕ್ಕೇರಿ, ಸಂತೋಷ್ ಮಂಜಿಲ, ಸುರೇಶ್ ಎಂ. ಶೆಟ್ಟಿ ಹಕ್ಕೇರಿ, ರಾಧಕೃಷ್ಣ ಶೆಟ್ಟಿ ಉಗ್ರೋಡಿ, ರಘುರಾಮ್ ಶೆಟ್ಟಿ ದೇವಸ್ಯ, ಭುಜಂಗ ಶೆಟ್ಟಿ ಹೊಕ್ಕಾಡಿಗೋಳಿ, ನವೀನ್ ಕುಂಜಾಡಿ, ಲೋಕನಾಥ್ ಶೆಟ್ಟಿ ಪಮುಂಜ, ಗಿರೀಶ್ ಕರ್ಪೆ, ನವೀನ ಹೆಗ್ಡೆ ಮಂಚಕಲ್ಲು ಮತ್ತಿತರರು ಹಾಜರಿದ್ದರು.
ಸಮಿತಿ ಗೌರವ ಸಲಹೆಗಾರ ಸುರೇಶ್ ಶೆಟ್ಟಿ ಸಿದ್ದಕಟ್ಟೆ ಸ್ವಾಗತಿಸಿ, ಜಿಲ್ಲಾ ಕಂಬಳ ಸಮಿತಿ ಮಾಜಿ ಕಾರ್ಯದರ್ಶಿ ವಿಜಯ ಕುಮಾರ್ ಕಂಗಿನಮನೆ ಮತ್ತು ಪ್ರಚಾರ ಸಮಿತಿ ಸಂಚಾಲಕ ಮೋಹನ್ ಕೆ. ಶ್ರೀಯಾನ್ ರಾಯಿ ಕಾರ್ಯಕ್ರಮ ನಿರೂಪಿಸಿದರು.