ಗುಜರಾತ್ ವಿಧಾನಸಭೆ ಉಪಚುನಾವಣೆ: ಬಿಜೆಪಿಗೆ ಭರ್ಜರಿ ಜಯ

ಅಹ್ಮದಾಬಾದ್, ಡಿ.23: ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಪ್ರತಿಷ್ಠೆಯ ಕಣವಾಗಿದ್ದ ಗುಜರಾತ್‌ನ ಜಸ್‌ದನ್ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಜಯ ಸಾಧಿಸುವುದರೊಂದಿಗೆ ಬಿಜೆಪಿ ಮೇಲುಗೈ ಸಾಧಿಸಿದೆ.
ಬಿಜೆಪಿ ಅಭ್ಯರ್ಥಿ ಕನ್ವರ್ಜಿ ಬವಾಲಿಯಾ ತಮ್ಮ ನಿಕಟ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್‌ನ ಅವ್ಸರ್ ನಕಿಯಾರನ್ನು 19 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಿಂದ ಸೋಲಿಸಿದ್ದಾರೆ. ಕೋಲಿ ಸಮುದಾಯದ ಪ್ರಭಾವೀ ನಾಯಕರಾಗಿರುವ ಬವಾಲಿಯಾ ಈ ಹಿಂದೆ ಕಾಂಗ್ರೆಸ್ ಅಭ್ಯರ್ಥಿಯಾಗಿ 1995, 1998, 2002, 2007 ಮತ್ತು 2017ರಲ್ಲಿ ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬವಾಲಿಯಾರನ್ನು ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿದ್ದರು.
ಬವಾಲಿಯಾ ಜಸ್‌ದನ್ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ನಡೆದಿದ್ದು, ಬಿಜೆಪಿಯಿಂದ ಸ್ಪರ್ಧಿಸಿದ್ದ ಅವರನ್ನು ಸೋಲಿಸಲು ಕಾಂಗ್ರೆಸ್ ಶತಪ್ರಯತ್ನ ನಡೆಸಿತ್ತು.
Next Story





