ಮಲ್ಪೆ: ಎಂಟು ಮಂದಿ ಮೀನುಗಾರರು ಬೋಟು ಸಹಿತ ನಾಪತ್ತೆ

ಮಲ್ಪೆ, ಡಿ.23: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಎಂಟು ಮಂದಿ ಮೀನುಗಾರರು ಕಳೆದ ಎಂಟು ದಿನಗಳಿಂದ ಬೋಟು ಸಮೇತ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ನಾಪತ್ತೆಯಾದವರನ್ನು ಬೋಟಿನ ಮಾಲಕ ಬಡಾನಿಡಿಯೂರಿನ ಚಂದ್ರ ಶೇಖರ, ಮೀನುಗಾರರಾದ ದಾಮೋದರ, ಲಕ್ಷ್ಮಣ್, ಸತೀಶ್, ರವಿ, ಹರೀಶ್, ರಮೇಶ್, ಜೋಗಯ್ಯ ಎಂದು ಗುರುತಿಸಲಾಗಿದೆ.
ಇವರೆಲ್ಲ ಸುವರ್ಣ ತ್ರಿಭುಜ ಎಂಬ ಮೀನುಗಾರಿಕಾ ಬೋಟಿನಲ್ಲಿ ಡಿ.13 ರಂದು ರಾತ್ರಿ 11 ಗಂಟೆಗೆ ಸುಮಾರಿಗೆ ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದರು. ಡಿ.15ರ ರಾತ್ರಿ ಒಂದು ಗಂಟೆಯವರೆಗೆ ಸಂಪರ್ಕದಲ್ಲಿದ್ದ ಇವರು ನಂತರ ಸಂಪರ್ಕ ಸಿಗದೇ ನಾಪತ್ತೆಯಾಗಿದ್ದಾರೆ.
ನಾಪತ್ತೆಯಾದ ಬೋಟು ಹಾಗೂ ಎಂಟು ಮಂದಿಯನ್ನು ಹುಡುಕಾಡಿದರೂ ಈವರೆಗೆ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





