Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಚಿವೆ ಜಯಮಾಲ ಎದುರೇ ಅಧಿಕಾರಿಗಳನ್ನು...

ಸಚಿವೆ ಜಯಮಾಲ ಎದುರೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರೈತರು

ಮಣಿಪಾಲದಲ್ಲಿ ರೈತ ಜನಸಂಪರ್ಕ ಸಭೆ

ವಾರ್ತಾಭಾರತಿವಾರ್ತಾಭಾರತಿ23 Dec 2018 8:29 PM IST
share
ಸಚಿವೆ ಜಯಮಾಲ ಎದುರೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರೈತರು

ಉಡುಪಿ, ಡಿ. 23: ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ರವಿವಾರ ಜಿಲ್ಲಾಡಳಿತ, ಜಿಪಂ, ಕೃಷಿ ಸಂಬಂಧಿತ ಇಲಾಖೆಗಳು ಹಾಗೂ ಕೃಷಿಕ ಸಮಾಜದ ವತಿಯಿಂದ ರಾಷ್ಟ್ರೀಯ ರೈತ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ರೈತ ಜನಸಂಪರ್ಕ ಸಭೆಯಲ್ಲಿ ಜಿಲ್ಲೆಯ ಮೂಲೆಮೂಲೆಯಿಂದ ಆಗಮಿಸಿದ್ದ ರೈತರು ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲ ಅವರ ಎದುರಿನಲ್ಲೇ ಕೃಷಿ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡರು.

ಜಿಲ್ಲೆಯಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಮಹಾಪೂರದಿಂದ ಹೈರಾಣಾದಂತೆ ಕಂಡುಬಂದ ಇವರು, ಪ್ರಾಕೃತಿಕ ವಿಕೋಪದಿಂದ ತಾವು ವರ್ಷವಿಡೀ ದುಡಿದ ಬೆಳೆಯನ್ನು ಕಳೆದುಕೊಂಡು ಅಪಾರ ನಷ್ಟ ಅನುಭವಿಸಿದರೂ, ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಭೇಟಿ ನೀಡದೇ, ಪರಿಹಾರವನ್ನು ಹಂಚುತ್ತಿರುವ ಬಗ್ಗೆ ಅವರು ತೀವ್ರವಾದ ಆಕ್ರೋಶ ವ್ಯಕ್ತಪಡಿಸಿದರು.

ರೈತರನ್ನು ತಲುಪದ ಯೋಜನೆ: ಸಂವಾದವನ್ನು ಪ್ರಾರಂಭಿಸಿದ ಕುಂದಾಪುರ ರೈತ ಸಂಘದ ಕಾರ್ಯದರ್ಶಿ ವಿಕಾಸ ಹೆಗ್ಡೆ ಮಾತನಾಡಿ, ಕೃಷಿ, ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ರೈತರ ಸಂಪರ್ಕವೇ ಇರುವುದಿಲ್ಲ. ಸರಕಾರಗಳು ಜನಪರ ಯೋಜನೆಗಳನ್ನು ಜಾರಿಗೆ ತಂದರೂ ಅದು ನಿಜವಾದ ಫಲಾನುಭವಿಯನ್ನು ತಲುಪುದೇ ಇಲ್ಲ. ಅವರು ಕೆಲವೇ ಸಂಘಟನೆಗಳ ಮುಖಂಡರ ಮೂಲಕ ಅವುಗಳನ್ನು ಕೆಲವೇ ರೈತರಿಗೆ ನೀಡುತ್ತಾರೆ. ಗ್ರಾಮೀಣ ಭಾಗಗಳ ಬಹುಪಾಲು ರೈತರು ಯೋಜನೆಯಿಂದ ಹೊರಗುಳಿಯುತ್ತಾರೆ ಎಂದರು. ಇಲಾಖಾ ಅಧಿಕಾರಿಗಳು ಗ್ರಾಮಸಭೆಗಳಿಗೆ ಅಲ್ಲಿ ರೈತರಿಗೆ ಯೋಜನೆ ಕುರಿತು ತಿಳಿಹೇಳಬೇಕು ಎಂದವರು ಸಲಹೆ ನೀಡಿದರು.

ಜಲಾನಯನ ಯೋಜನೆಯಲ್ಲಿ ಅವ್ಯವಹಾರ: ಹಾಲಾಡಿ ಸೇರಿದಂತೆ ಜಿಲ್ಲೆಯ ಅನೇಕ ಗ್ರಾಪಂಗಳಲ್ಲಿ ಜಲಾನಯನ ಯೋಜನೆಯಲ್ಲಿ ವ್ಯಾಪಕ ಅವ್ಯವಹಾರ ಗಳು ನಡೆದಿವೆ ಎಂದು ಆ ಭಾಗದ ಹಲವು ರೈತರು ಸಚಿವರ ಗಮನಕ್ಕೆ ತಂದರಲ್ಲದೇ ಈ ವಿಷಯದಲ್ಲಿ ಸಮಜಾಯಿಷಿ ನೀಡಲು ಬಂದ ಕೃಷಿ ಇಲಾಖೆಯ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಜಲಾನಯನದ ಎಲ್ಲಾ ಯೋಜನೆಗಳ ಕುರಿತು ಸಮಗ್ರ ತನಿಖೆ ನಡೆಯಬೇಕು ಎಂದು ರೈತರು ಪಟ್ಟು ಹಿಡಿದರು. ಈ ಕುರಿತಂತೆ ಕೆಲಹೊತ್ತು ಜೋರಾದ ಚರ್ಚೆಗಳು ನಡೆದು ಕೊನೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿ ವರದಿ ಪಡೆಯಲಾಗುವುದು ಎಂದು ಸಚಿವರು ಆಕ್ರೋಶಿತ ರೈತರನ್ನು ಸಮಾಧಾನ ಪಡಿಸಿದರು.

ಕೊಳೆರೋಗಕ್ಕೆ ಅಸಮರ್ಪಕ ಪರಿಹಾರ: ಈ ಬಾರಿ ಅತಿವೃಷ್ಠಿಯಿಂದ ಜಿಲ್ಲೆಯಾದ್ಯಂತ ಅಡಿಕೆ ತೋಟದಲ್ಲಿ ಕಾಣಿಸಿಕೊಂಡ ಕೊಳೆರೋಗದ ಕುರಿತು ಯಾವುದೇ ಸಮೀಕ್ಷೆ ನಡೆಸದೇ ಬೇಕಾಬಿಟ್ಟಿಯಾಗಿ ಪರಿಹಾರ ವಿತರಣೆ ಮಾಡಲಾಗಿದೆ ಎಂದು ರೈತರು ದೂರಿದರು. ಕೊಳೆರೋಗದಿಂದ ತನ್ನ ತೋಟವಿಡೀ ನಾಶವಾಗಿದ್ದು, ಗ್ರಾಪಂ ಮೂಲಕ ತಾನು ಅರ್ಜಿ ಹಾಕಿದ್ದರೂ ಇದುವರೆಗೆ ಯಾವೊಬ್ಬ ಅಧಿಕಾರಿಯೂ ನಮ್ಮ ಗ್ರಾಮಕ್ಕೆ ಭೇಟಿ ನೀಡಿಲ್ಲ ಎಂದು ಹಿರಿಯ ರೈತ ಮುಖಂಡ ಸಂಪಿಗೆಬೆಟ್ಟು ಸಂಜೀವ ಶೆಟ್ಟಿ ತೋಟಗಾರಿಕಾ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ರೈತರ ದೂರಿಗೆ ಉತ್ತರಿಸಿದ ತೋಟಗಾರಿಕಾ ಇಲಖೆಯ ಉಪ ನಿರ್ದೇಶಕಿ ಭುವನೇಶ್ವರಿ, ಜಿಲ್ಲೆಯಲ್ಲಿ 5770 ಹೆಕ್ಟೆರ್ ಪ್ರದೇಶ ಅಡಿಕೆ ಕೊಳೆ ರೋಗದಿಂದ ಹಾನಿಗೊಂಡಿರುವ ಬಗ್ಗೆ ಕೇಂದ್ರಕ್ಕೆ ವರದಿ ಸಲ್ಲಿಸಲಾಗಿದೆ. ಕೊಳೆರೋಗ ಪರಿಹಾರಕ್ಕೆ 9960 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಇವುಗಳಲ್ಲಿ 2600 ಅರ್ಜಿಗಳನ್ನು ಇನ್ನೂ ಆನ್‌ಲೈನ್‌ನಲ್ಲಿ ದಾಖಲಿಸಲು ಬಾಕಿ ಇದೆ. ತಾಂತ್ರಿಕ ಕಾರಣಗಳಿಂದ ದಾಖಲಾತಿ ವಿಳಂಬವಾಗಿದೆ. ಇದುವರೆಗೆ 512 ಮಂದಿ ರೈತರಿಗೆ 47.38 ಲಕ್ಷ ರೂ.ಪರಿಹಾರ ಪಾವತಿಸಲಾಗಿದೆ ಎಂದರು. ಬಾಕಿ ಉಳಿದ ಅರ್ಜಿಗಳನ್ನು ಡಿ.31ರೊಳಗೆ ವಿಲೇವಾರಿ ಮಾಡುವಂತೆ ಸಚಿವರು ಸೂಚನೆ ನೀಡಿದರು.

ವಾರಾಹಿ ಯೋಜನೆ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನು ಮತ್ತೆ ಆರಂಭಿ ಸುವ ಕುರಿತಂತೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಜಿಲ್ಲೆಯ ರೈತರಿಗೆ ಈ ಕಾರ್ಖಾನೆಯ ಅಗತ್ಯವಿದೆ. ಇದಕ್ಕೆ ಸಕ್ಕರೆ ಬೆಳೆಯಲು ತಾವು ಸಿದ್ಧರಿರುವುದಾಗಿ ರೈತರು ಒಕ್ಕೊರಳಿನಿಂದ ತಿಳಿಸಿದರು. ಈಗಾಗಲೇ 2800 ರೈತರು ಕಬ್ಬು ಬೆಳೆಯಲು ಸಿದ್ಧರಿರುವುದಾಗಿ ಒಪ್ಪಿಗೆ ಪತ್ರ ನೀಡಿರುವುದಾಗಿ ರೈತ ಸಂಘದ ನಾಯಕರು ತಿಳಿಸಿದರು.

ಅದರೆ ವಾರಾಹಿ ಯೋಜನೆ ಇನ್ನೂ ಪೂರ್ಣಗೊಳ್ಳದೆ ಇರುವುದರಿಂದ ಶೀಘ್ರವಾಗಿ ಯೋಜನೆ ಪೂರ್ಣಗೊಂಡು ಸಂಪೂರ್ಣ ನೀರಾವರಿ ಕಾರ್ಯರೂಪಕ್ಕೆ ಬಂದಲ್ಲಿ ಸಕ್ಕರೆ ಕಾರ್ಖಾನೆಗೆ ಕಬ್ಬಿನ ಕೊರತೆಯಾಗುವುದಿಲ್ಲ. ಕಾರ್ಖಾನೆಯನ್ನು ಪುನಃಶ್ಚೇತನ ಮಾಡುವ ಬದಲು ಮರು ನಿರ್ಮಾಣ ಮಾಡಬೇಕು ಎಂದು ರೈತರು ಕೋರಿದರು.

ವಾರಾಹಿ ಯೋಜನೆಯ ಪ್ರಗತಿ ಕುರಿತು ಸಚಿವರ ಪ್ರಶ್ನೆಗೆ ಉತ್ತರಿಸಿದ ಅಧಿಕಾರಿಗಳು ಎಡದಂಡೆ ಕಾಲುವೆ ಕಾಮಗಾರಿ ಪೂರ್ಣಗೊಂಡಿದ್ದು, ಬಲದಂಡೆ ಯೋಜನೆಗೆ ಅಂತಿಮ ಅನುಮೋದನೆ ದೊರೆಯುವುದು ಬಾಕಿ ಇದೆ. 2019ರಲ್ಲಿ ಈ ಕಾಮಗಾರಿ ಆರಂಭಿಸಲಾಗುವುದು ಎಂದರು. ವಾರಾಹಿ ಯೋಜನೆ ಕುರಿತಂತೆ ಪ್ರತ್ಯೇಕ ಸಭೆ ಕರೆಯುವಂತೆ ರೈತರು ಸಚಿವರನ್ನು ಕೋರಿದರು.

ಬಂಡೆ ತಡೆ: ವಾರಾಹಿ ಯೋಜನೆಯಲ್ಲಿ ಬಿಲ್ಲಾಡಿ ಬಳಿ ಕಾಲುವೆ ನಡುವೆ ಬಂಡೆ ಬಂದಿದ್ದು, ಈ ಬಂಡೆಯನ್ನು ಒಡೆಯದೆ ಅದರ ನಂತರದ ಭಾಗದ ಕಾಮಗಾರಿ ಯನ್ನು ಮುಂದುವರಿಸಿರುವುದರಿಂದ ಕಾಲುವೆ ವ್ಯಾಪ್ತಿಯ ಮೂರು ಗ್ರಾಮ ಗಳಿಗೆ ನೀರು ದೊರೆಯುತ್ತಿಲ್ಲ. ಈ ಕುರಿತಂತೆ ಅಧಿಕಾರಿಗಳ ನಿರ್ಲಕ್ಷತೆ ವಿರುದ್ಧ ರೈತರು ಅಸಮಧಾನ ವ್ಯಕ್ತಪಡಿಸಿದರು. ಕಾಲುವೆ ನಡುವೆ ಇರುವ ಬಂಡೆ ಒಡೆಯುವ ಕುರಿತಂತೆ ಇರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ಶೀಘ್ರದಲ್ಲಿ ಬಂಡೆ ಒಡೆದು ಗ್ರಾಮಗಳಿಗೆ ನೀರಿನ ಸೌಲಭ್ಯ ಒಗಿಸುವಂತೆ ಸಚಿವರು ಸೂಚಿಸಿದರು.

ಭತ್ತ ಮತ್ತು ತೆಂಗಿಗೆ ಬೆಂಬಲ ಬೆಲೆ ನೀಡುವ ಕುರಿತು, ಅಡಿಕೆ ಕೊಳೆ ರೋಗಕ್ಕೆ ಸೂಕ್ತ ಔಷಧಿ ಕಂಡು ಹಿಡಿಯುವ ಬಗ್ಗೆ, ಕಾಡುಪ್ರಾಣಿ ಹಾವಳಿಯಿಂದ ಬೆಳೆ ರಕ್ಷಿಸುವ ಬಗ್ಗೆ, ಕೃಷಿ ಅಧಿಕಾರಿಗಳು ಗ್ರಾಮಗಳಿಗೆ ಬಂದು ರೈತರಿಗೆ ಸೌಲ್ಯಗಳ ಕುರಿತು ಮಾಹಿತಿ ನೀಡುವ ಬಗ್ಗೆ , ಡ್ರೀಮ್ಡ್ ಪಾರೆಸ್ಟ್ ಸಮಸ್ಯೆ ಬಗ್ಗೆ ಸಬೆಯಲ್ಲಿ ಚರ್ಚೆಗಳು ನಡೆದವು. ವಿವಿಧ ರೈತ ಸಂಘಟನೆಗಳ ಮುಖಂಡರು, ಭಾರೀ ಸಂಖ್ಯೆಯಲ್ಲಿ ರೈತರು ಸಭೆಯಲ್ಲಿ ಉಪಸ್ಥಿತರಿದ್ದರು.

10 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ

ರೈತರು ಮನೆ ನಿರ್ಮಾಣ, ತೋಟ ಅಭಿವೃದ್ಧಿ, ಬೇಲಿ ನಿರ್ಮಾಣ ಮುಂತಾದ ಅಭಿವೃದ್ದಿ ಕಾರ್ಯಕ್ರಮಗಳನ್ನು ಮಾಡಲು 10 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ನೀಡುವ ಕುರಿತಂತೆ ಸರಕಾರದ ಮಟ್ಟದಲ್ಲಿ ಚರ್ಚಿಸಿ, ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಸಂವಾದದುದ್ದಕೂ ಉಸ್ಥಿತರಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲ ಭರವಸೆ ನೀಡಿದರು.

ರೈತರಿಗೆ ಸಾಲ ನೀಡಿ, ಮನ್ನಾ ಮಾಡುವ ಬದಲು ಮನೆ ನಿರ್ಮಾಣ, ತೋಟ ಅಭಿವೃದ್ಧಿ, ಬೇಲಿ ನಿರ್ಮಾಣ ಮುಂತಾದ ಅಭಿವೃದ್ದಿ ಕಾರ್ಯಗಳಿಗೆ ಬಳಸಲು 10 ಲಕ್ಷ ರೂ.ವರೆಗೆ ಬಡ್ಡಿ ರಹಿತವಾಗಿ ಸಾಲ ನೀಡಿ ಎಂದು ಸಭೆಯಲ್ಲಿದ್ದ ಹಾವಂಜೆಯ ರೈತರೊಬ್ಬರು ಸಚಿವರನ್ನು ಕೋರಿದ್ದರು. ಈ ಕುರಿತಂತೆ ಸರಕಾರದ ಮಟ್ಟದಲ್ಲಿ ಚರ್ಚಿಸಿ, ಜಾರಿಗೆ ಪ್ರಯತ್ನಿಸಲಾಗುವುದು ಎಂದ ಸಚಿವರು ಎಲ್ಲಾ ರೈತರು ತಮ್ಮ ಬೆಳೆಗಳಿಗೆ ಬೆಳೆ ವಿಮೆ ಮಾಡಿಸುವಂತೆ ತಿಳಿಸಿ, ರೈತರಿಗೆ ಈ ಕುರಿತು ಪ್ರತಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಗಳು ಮಾಹಿತಿ ನೀಡುವಂತೆ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X