ಇಂಡೋನೇಶ್ಯಾ: ಭೀಕರ ಸುನಾಮಿ
ಇಂಡೋನೇಶ್ಯಾದ ಜಾವಾ ಮತ್ತು ಸುಮಾತ್ರಾ ದ್ವೀಪಗಳಲ್ಲಿ ಸುನಾಮಿಯ ಅಬ್ಬರದಿಂದ ಕನಿಷ್ಠ 222 ಜನರು ಪ್ರಾಣ ಕಳೆದುಕೊಂಡಿದ್ದಾರೆ. 800ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಹಲವಾರು ಜನರು ನಾಪತ್ತೆಯಾಗಿದ್ದಾರೆ. ಭಾರೀ ಪ್ರಮಾಣದಲ್ಲಿ ಆಸ್ತಿಪಾಸಿ ನಷ್ಟವುಂಟಾಗಿದೆ. ಅನಾಕ್ ಕ್ರಾಕಟಾವು ಜ್ವಾಲಾಮುಖಿ ಸ್ಫೋಟಗೊಂಡ ಪರಿಣಾಮ ಸಮುದ್ರದಾಳದಲ್ಲಿ ಸಂಭವಿಸಿದ ಭೂಕುಸಿತ ಈ ವಿನಾಶಕಾರಿ ಸುನಾಮಿಗೆ ಕಾರಣವಾಗಿತ್ತು ಎನ್ನಲಾಗಿದೆ. ಶನಿವಾರ ತಡರಾತ್ರಿ ಸುಂದಾ ಜಲಸಂಧಿಯಲ್ಲಿ ಉಂಟಾದ ಸುನಾಮಿಯಿಂದಾಗಿ ನೂರಾರು ಮನೆಗಳು ಮತ್ತು ಇತರ ಕಟ್ಟಡಗಳಿಗೆ ಭಾರೀ ಹಾನಿಯುಂಟಾಗಿದೆ ಎಂದು ವಿಪತ್ತು ನಿರ್ವಹಣಾ ಸಂಸ್ಥೆಯ ವಕ್ತಾರ ಸುತೊಪೊ ಪುರ್ವೊ ನುಗ್ರೊಹೊ ತಿಳಿಸಿ ದರು. ಭಾರೀ ಎತ್ತರದ ಅಲೆಗಳಿಂದಾಗಿ ಸಾವಿರಾರು ನಿವಾಸಿಗಳನ್ನು ಎತ್ತರದ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ನಾಪತ್ತೆಯಾಗಿರುವ ಜನರ ಸಂಖ್ಯೆಯನ್ನು ಇನ್ನಷ್ಟೇ ಅಂದಾಜಿಸಬೇಕಿದೆ.
Next Story





