ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿ: ಯುವತಿ ಮೃತ್ಯು
ಹೃದಯಾಘಾತಕ್ಕೊಳಗಾದ ತಾಯಿ
ಹೊಸದಿಲ್ಲಿ, ಡಿ.24: ದುಷ್ಕರ್ಮಿಯೊಬ್ಬನ ದಾಳಿಯಿಂದ ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 18 ವರ್ಷದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
“ಆಕೆಯ ದೇಹದ 77 ಶೇ. ಭಾಗಗಳು ಸುಟ್ಟು ಹೋಗಿತ್ತು. ಚಿಂತಾಜನಕ ಸ್ಥಿತಿಯಲ್ಲಿ ಆಕೆಯನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ” ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಪುತ್ರಿಯ ಸಾವಿನ ಸುದ್ದಿ ಕೇಳಿ ಯುವತಿಯ ತಾಯಿ ಹೃದಯಾಘಾತಕ್ಕೊಳಗಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಯುವತಿ ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ ಆರೋಪಿ ಆಕೆಯನ್ನು ಹಿಂಬಾಲಿಸಿ ಈ ಕೃತ್ಯ ಎಸಗಿದ್ದ. “ಆಕೆಯ ಮೈಮೇಲೆ ಪೆಟ್ರೋಲ್ ಸುರಿದ ಆರೋಪಿ ಬೆಂಕಿ ಹಚ್ಚಿದ್ದ. ಕೂಡಲೇ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರು” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story