Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಗನವಾಡಿಗಳಲ್ಲಿ ಶೀಘ್ರ ಬಯೋಮೆಟ್ರಿಕ್...

ಅಂಗನವಾಡಿಗಳಲ್ಲಿ ಶೀಘ್ರ ಬಯೋಮೆಟ್ರಿಕ್ ಪದ್ಧತಿ ಜಾರಿ: ಸಚಿವೆ ಜಯಮಾಲ

ವಾರ್ತಾಭಾರತಿವಾರ್ತಾಭಾರತಿ24 Dec 2018 5:49 PM IST
share
ಅಂಗನವಾಡಿಗಳಲ್ಲಿ ಶೀಘ್ರ ಬಯೋಮೆಟ್ರಿಕ್ ಪದ್ಧತಿ ಜಾರಿ: ಸಚಿವೆ ಜಯಮಾಲ

ಮಡಿಕೇರಿ, ಡಿ.24 : ರಾಜ್ಯದಲ್ಲಿ ಹೆಚ್ಚು ಮಳೆಯಾಗುವ ಮಲೆನಾಡು ತಾಲೂಕುಗಳ ಅಂಗನವಾಡಿಯ ಮಕ್ಕಳಿಗೆ ಸ್ವೆಟರ್, ಶೂ, ಸಾಕ್ಸ್, ಕೊಡೆ ಇತರೆ ಅಗತ್ಯ ವಸ್ತುಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಜಯಮಾಲ ಅವರು ತಿಳಿಸಿದ್ದಾರೆ.      

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಲೆನಾಡು ಪ್ರದೇಶದ ಅಂಗನವಾಡಿ ಮಕ್ಕಳು ಮಳೆಗಾಲದ ಅವಧಿಯಲ್ಲಿ ಚಳಿ, ಮಳೆಗೆ ಸಿಲುಕಿ ತುಂಬಾ ತೊಂದರೆ ಅನುಭವಿಸುತ್ತಾರೆ. ಆದ್ದರಿಂದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಚಿಂತಿಸಲಾಗಿದ್ದು, ಆ ನಿಟ್ಟಿನಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಸಚಿವರು ಸಲಹೆ ಮಾಡಿದರು.  

ರಾಜ್ಯದಲ್ಲಿ ಏಕರೂಪ ಮಾದರಿಯಲ್ಲಿ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಅಂಗನವಾಡಿಯಲ್ಲಿ ಉತ್ತಮ ಪರಿಸರ, ಶುಚಿತ್ವ ಇರಬೇಕು. ಕುಡಿಯುವ ನೀರು, ಮಕ್ಕಳ ಸ್ನೇಹಿ ಶೌಚಾಲಯ ಮತ್ತಿತರವನ್ನು ಒಳಗೊಂಡಿರಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರಾದ ಜಯಮಾಲಾ ಅವರು ನಿರ್ದೇಶನ ನೀಡಿದರು. ಮಕ್ಕಳಿಗೆ ಕೆನೆಸಹಿತ ಹಾಲು, ಮೊಟ್ಟೆ ವಿತರಿಸಬೇಕು. ಮಕ್ಕಳ ಬೆಳವಣಿಗೆಗೆ ಪೂರಕವಾಗಿ ಪೌಷ್ಠಿಕ ಆಹಾರ ನೀಡಬೇಕು. ಯಾವುದೇ ಕಾರಣಕ್ಕೂ ಪೌಷ್ಠಿಕ ಆಹಾರ ವಿತರಣೆಯಲ್ಲಿ ವ್ಯತ್ಯಾಸ ಉಂಟಾಗಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. 

ಮಾತೃಪೂರ್ಣ ಯೋಜನೆಯನ್ನು ತಾಯಂದಿರು, ಗರ್ಭಿಣಿಯರು, ಬಾಣಂತಿಯರಿಗೆ ಸಮರ್ಪಕವಾಗಿ ತಲುಪಿಸಬೇಕು.  ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಅಂಗನವಾಡಿ ಶಿಕ್ಷಕಿಯರನ್ನು ಇತರೆ ಕಾರ್ಯಗಳಿಗೆ ನಿಯೋಜಿಸಬಾರದು. ನಿವೃತ್ತರಾದವರನ್ನು ಬಳಸಿಕೊಳ್ಳುವಂತೆ ಸಚಿವರು ಸಲಹೆ ಮಾಡಿದರು.  

ಗಡಿ ಪ್ರದೇಶದ ಅಂಗನವಾಡಿಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ. ಆಸ್ಪತ್ರೆ, ಕುಡಿಯುವ ನೀರು, ಸಾರಿಗೆ ಸಂಪರ್ಕ, ವಿದ್ಯುತ್, ಜನಜೀವನ ಪದ್ಧತಿ, ಕನ್ನಡ ಭವನ ಮತ್ತಿತರ ಬಗ್ಗೆ ಗಡಿನಾಡ ಪ್ರದೇಶದಲ್ಲಿ ಸಮೀಕ್ಷೆ ಮಾಡಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರಿಗೆ ಸಚಿವರಾದ ಜಯಮಾಲ ಅವರು ಸಲಹೆ ಮಾಡಿದರು. ಜಿಲ್ಲೆಯ ಗಡಿಯ ಕರಿಕೆ ಭಾಗದ 13 ಅಂಗನವಾಡಿಗಳು, ವಿರಾಜಪೇಟೆ ತಾಲೂಕಿನ ಮಾಕುಟ್ಟ ಮತ್ತು ಕುಟ್ಟದಲ್ಲಿ ತಲಾ ಒಂದು ಅಂಗನವಾಡಿಗಳಿವೆ ಎಂದು ಸಿಡಿಪಿಒ ಅವರು ಮಾಹಿತಿ ನೀಡಿದರು. 

ಮುಂದಿನ ದಿನಗಳಲ್ಲಿ ಅಂಗನವಾಡಿಗಳಿಗೂ ಬಯೋಮೆಟ್ರಿಕ್ ಪದ್ಧತಿ ಅಳವಡಿಸಲಾಗುವುದು ಎಂದು ಜಯಮಾಲ ಅವರು ತಿಳಿಸಿದರು. ಅಂಗನವಾಡಿಗಳಲ್ಲಿ ಪೌಷ್ಠಿಕ ಆಹಾರ ವಿತರಣೆ, ಮಕ್ಕಳ ಹಾಜರಾತಿ ಮತ್ತಿತರ ಬಗ್ಗೆ ನಿಖರ ಮಾಹಿತಿ ದೊರೆಯಬೇಕಿದೆ. ಆ ನಿಟ್ಟಿನಲ್ಲಿ ಬಯೋಮೆಟ್ರಿಕ್ ಜಾರಿಗೆ ಬರಲಿದೆ ಎಂದು ಸಚಿವರು ಹೇಳಿದರು. 

ವಿಕಲಚೇತನರಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಸಚಿವರು ವಿಕಲಚೇತನರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು. ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಕಲ್ಪಿಸಲು ಕ್ರಮಕೈಗೊಳ್ಳಬೇಕು. ವಸತಿ, ಶಿಕ್ಷಣ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಬಗ್ಗೆ ಮಾಹಿತಿ ನೀಡಿದ ವಿಕಲಚೇತನರ ಅಧಿಕಾರಿ ದೇವರಾಜು ಜಿಲ್ಲೆಯಲ್ಲಿ 9,020 ಮಂದಿ ವಿಕಲಚೇತನರಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಪ್ರಕೃತಿ ವಿಕೋಪ ಸಂದರ್ಭದಲ್ಲಿ 69 ಮಂದಿ ವಿಕಲಚೇತನ ಕುಟುಂಬದವರು ಮನೆ ಕಳೆದುಕೊಂಡಿದ್ದು, ಇವರಿಗೆ ತಕ್ಷಣವೇ ಮಾನವೀಯ ನೆಲೆಯಲ್ಲಿ ವಸತಿ ಕಲ್ಪಿಸಬೇಕು. ಈ ಸಂಬಂಧ ಅವರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ನ್ಯೂನತೆಯ ಪ್ರಮಾಣ, ಉದ್ಯೋಗದ ಮಾಹಿತಿಯನ್ನು ಮೂರು ದಿನದೊಳಗೆ ಕಳುಹಿಸಿಕೊಡುವಂತೆ ಜಯಮಾಲ ಸೂಚಿಸಿದರು. 

ವಿಕಲಚೇತನರು ಮತ್ತು ದಮನಿತರಿಗೆ ಸರ್ಕಾರದ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಪ್ರಥಮ ಆದ್ಯತೆ ನೀಡಬೇಕು. ಆ ನಿಟ್ಟಿನಲ್ಲಿ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಹೇಳಿದರು. 

ವಿಕಲಚೇತನರಿಗೆ ಸ್ಥಳೀಯವಾಗಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ 30 ಜಿಲ್ಲೆಗಳಲ್ಲಿ ಘಟಕ ನಿರ್ಮಾಣ ಮಾಡಲಾಗುವುದು ಎಂದು ಅವರು ಹೇಳಿದರು. ಸ್ತ್ರೀಶಕ್ತಿ ಭವನಗಳ ನಿಮಾಣ, ಸ್ತ್ರೀಶಕ್ತಿ ಸಂಘಟನೆಗಳನ್ನು ಬಲಪಡಿಸುವುದು ಮತ್ತಿತರ ಬಗ್ಗೆ ಹಲವು ಸಲಹೆ ನೀಡಿದರು. ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಕನ್ನಡ ಸಮುಚ್ಛಯ ಭವನ ಶೀಘ್ರ ಪೂರ್ಣಗೊಳಿಸುವಂತೆ ಜಯಮಾಲ ಅವರು ಸೂಚಿಸಿದರು. ಹಲವು ರಂಗಮಂದಿರ, ಕನ್ನಡ ಭವನಗಳ ಸಂಬಂಧ ಮಾಹಿತಿ ಪಡೆದರು. 

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ವಿಕಲಚೇತನರು ಹಾಗೂ ಮಹಿಳೆಯರು ಸೇರಿದಂತೆ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲಾಗುವುದು ಎಂದು ತಿಳಿಸಿದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ರಾಧ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದರ್ಶನ್, ಸಿಡಿಪಿಒಗಳು ಅವರು ತಮ್ಮ ಇಲಾಖೆ ವ್ಯಾಪ್ತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X