ಮಂಡ್ಯ: ಹಾಡಹಗಲೇ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ

ಮಂಡ್ಯ, ಡಿ.24: ಜೆಡಿಎಸ್ ಮುಖಂಡನನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮದ್ದೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.
ಮದ್ದೂರು ತಾಲೂಕು ತೊಪ್ಪನಹಳ್ಳಿ ಗ್ರಾಮದ ಪ್ರಕಾಶ್ ಹತ್ಯೆಯಾದ ವ್ಯಕ್ತಿಯಾಗಿದ್ದು, ಇವರು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಲಲಿತ ಅವರ ಪತಿ ಎನ್ನಲಾಗಿದೆ. ಜನನಿಬಿಡ ಮತ್ತು ವಾಹನ ದಟ್ಟಣೆ ಇರುವ ಟಿ.ಬಿ.ವೃತ್ತದಲ್ಲಿ ಕಾರಿನೊಳಗಿದ್ದ ಪ್ರಕಾಶ್ ಅವರನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾದರೆಂದು ವರದಿಯಾಗಿದೆ.
ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ. ಕೆಲವು ವರ್ಷಗಳ ಹಿಂದೆ ತೊಪ್ಪನಹಳ್ಳಿಯಲ್ಲಿ ಫ್ಲೆಕ್ಸ್ ಕಟ್ಟುವ ವಿಚಾರದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆಯಾಗಿ ಮೂವರು ಜೆಡಿಎಸ್ ಕಾರ್ಯಕರ್ತರು ಕೊಲೆಯಾಗಿದ್ದರು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಮತ್ತೊಂದೆಡೆ ಹತ್ಯೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಮದ್ದೂರಿನಲ್ಲಿ ರಸ್ತೆತಡೆ ನಡೆಸಿದ್ದಾರೆ.
Next Story





