Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವಾಗ...

ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವಾಗ ತಪ್ಪು ಮಾಹಿತಿ ನೀಡಿದ್ದ ಸುಶೀಲ್: ದಿಲ್ಲಿ ಹೈಕೋರ್ಟ್

ಉಪಹಾರ್ ಸಿನೆಮಾ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ24 Dec 2018 7:47 PM IST
share
ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವಾಗ ತಪ್ಪು ಮಾಹಿತಿ ನೀಡಿದ್ದ ಸುಶೀಲ್: ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ,ಡಿ.24: 1997ರಲ್ಲಿ 59 ಜೀವಗಳನ್ನು ಬಲಿ ಪಡೆದುಕೊಂಡಿದ್ದ ಉಪಹಾರ್ ಸಿನೆಮಾ ಅಗ್ನಿ ಅವಘಡ ಪ್ರಕರಣದಲ್ಲಿ ನ್ಯಾಯಾಲಯದಿಂದ ದೋಷಿ ಎಂದು ಘೋಷಿಸಲ್ಪಟ್ಟಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಸುಶೀಲ್ ಅನ್ಸಾಲ್ ಅವರು 2013ರಲ್ಲಿ ತತ್ಕಾಲ್ ಯೋಜನೆಯಡಿ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾಗ ತನ್ನ ದೋಷನಿರ್ಣಯದ ಮಾಹಿತಿಯನ್ನು ಒದಗಿಸದೆ ಭಾರತ ಸರಕಾರವನ್ನು ದಾರಿ ತಪ್ಪಿಸಿದ್ದರು ಮತ್ತು ಸುಳ್ಳು ಪ್ರಮಾಣವನ್ನು ಮಾಡಿದ್ದರು ಎಂದು ದಿಲ್ಲಿ ಉಚ್ಚ ನ್ಯಾಯಾಲಯವು ಹೇಳಿದೆ. ಇದಕ್ಕಾಗಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಜರುಗಿಸುವುದು ಅಗತ್ಯವಾಗಿದೆ ಎಂದು ಅದು ತಿಳಿಸಿದೆ.

ನ್ಯಾ.ನಜ್ಮಿ ವಝೀರಿ ಅವರು ಉಪಹಾರ್ ಪ್ರಕರಣದಲ್ಲಿ ಅನ್ಸಾಲ್ ತನ್ನ ದೋಷನಿರ್ಣಯದ ಮಾಹಿತಿಯನ್ನು ಮುಚ್ಚಿಟ್ಟಿದ್ದರೂ 2013ರಲ್ಲಿ ಪಾಸ್‌ಪೋರ್ಟ್ ವಿತರಣೆಗಾಗಿ ಅವರ ಪರವಾಗಿ ದೃಢೀಕರಣ ವರದಿಯನ್ನು ನೀಡಿದ್ದ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಿದ್ದಾರೆ.

ನಾಗರಿಕನೋರ್ವ ತತ್ಕಾಲ್ ಯೋಜನೆಯಡಿ ಅರ್ಜಿ ಸಲ್ಲಿಸುವಾಗ ಆತನಿಂದ ಕೋರಲಾದ ಮಾಹಿತಿಯನ್ನು ಒದಗಿಸುವುದು ಪಾಸ್‌ಪೋರ್ಟ್ ಕಾಯ್ದೆಯಡಿ ಕಡ್ಡಾಯವಲ್ಲ ಎಂಬ ಅನ್ಸಾಲ್ ಪರ ವಾದವನ್ನು ನ್ಯಾಯಾಲಯವು ತಿರಸ್ಕರಿಸಿದೆ. ತತ್ಕಾಲ್ ಯೋಜನೆಯು ತುರ್ತು ಸಂದರ್ಭಗಳಲ್ಲಿ ಪಾಸ್‌ಪೋರ್ಟ್ ನೀಡಲು ವಿಶೇಷ ವ್ಯವಸ್ಥೆಯಾಗಿದೆ ಮತ್ತು ಅದು ಸರಕಾರವು ಕೇಳಿರುವ ಮಾಹಿತಿಗಳ ಸ್ವೀಕೃತಿಗೆ ಒಳಪಟ್ಟಿದೆ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.

ತಾನು ಯಾವುದೇ ಅಪರಾಧಕ್ಕಾಗಿ ಯಾವುದೇ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿಲ್ಲ ಎಂಬ ಸುಳ್ಳು ಪ್ರಮಾಣಪತ್ರವನ್ನು ಅನ್ಸಾಲ್ ಸಲ್ಲಿಸಿದ್ದರು ಎನ್ನುವುದನ್ನು ಅದು ಎತ್ತಿ ಹಿಡಿದಿದೆ.

ಅನ್ಸಾಲ್‌ಗೆ ಪಾಸ್‌ಪೋರ್ಟ್ ವಿತರಣೆಯಲ್ಲಿ ಪಾಸ್‌ಪೋರ್ಟ್ ಮತ್ತು ಪೊಲೀಸ್ ಅಧಿಕಾರಿಗಳ ಕ್ರಿಮಿನಲ್ ದುರ್ವತನೆಯ ಆರೋಪದಲ್ಲಿ ಸಿಬಿಐ ತನಿಖೆಯನ್ನು ಕೋರಿ ಉಪಹಾರ್ ದುರಂತ ಸಂತ್ರಸ್ತರ ಸಂಘವು ತನ್ನ ಅಧ್ಯಕ್ಷೆ ನೀಲಂ ಕೃಷ್ಣಮೂರ್ತಿ ಅವರ ಮೂಲಕ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿತು.

ದುರಂತದಲ್ಲಿ ತನ್ನಿಬ್ಬರು ಮಕ್ಕಳನ್ನು ಕಳೆದುಕೊಂಡಿರುವ ನೀಲಂ ಕಳೆದ 20 ವರ್ಷಗಳಿಂದಲೂ ಸಂತ್ರಸ್ತ ಕುಟುಂಬಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.

1997,ಜೂನ್ 13ರಂದು ಉಪಹಾರ್ ಸಿನೆಮಾದಲ್ಲಿ ‘ಬಾರ್ಡರ್ ’ ಹಿಂದಿ ಚಿತ್ರ ಪ್ರದರ್ಶನದ ವೇಳೆ ಅಗ್ನಿ ಅವಘಡ ಸಂಭವಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X