ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ 100 ರೂ. ಸ್ಮರಣಾರ್ಥ ನಾಣ್ಯವನ್ನು ಪ್ರಧಾನಿ ನರೇಂದ್ರ ಮೋದಿ ದಿಲ್ಲಿಯಲ್ಲಿ ಸೋಮವಾರ ಬಿಡುಗಡೆಗೊಳಿಸಿದರು. ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ವಿತ್ತ ಸಚಿವ ಅರುಣ್ ಜೇಟ್ಲಿ, ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಉಪಸ್ಥಿತರಿದ್ದರು.