ಬೊಟ್ಟಿಕೆರೆಗೆ ಬೋಳಾರ ಪ್ರಶಸ್ತಿ ಪ್ರದಾನ

ಮಂಗಳೂರು,ಡಿ.24: ಯಕ್ಷಗಾನದ ಪರಂಪರೆ ಹಿರಿಯರ ಬಳುವಳಿಯಾಗಿದೆ. ಬೋಳಾರ ನಾರಾಯಣ ಶೆಟ್ಟರಂತಹ ಶ್ರೇಷ್ಠ ಕಲಾವಿದರು ಕೀರ್ತಿಶರೀರಿಗಳಾಗಿ ಇಂದಿನ ಕಲಾವಿದರಿಗೆ ಸ್ಫೂರ್ತಿಯಾಗಿದ್ದಾರೆ. ಅಂಥವರ ನೆನಪಿನಲ್ಲಿ ಯಕ್ಷಗಾನಕ್ಕೆ ಕಸುವು ತುಂಬುವ ಕಾರ್ಯಕ್ರಮಗಳು ನಿರಂತರ ನಡೆಯಬೇಕು ಎಂದು ಒಡಿಯೂರು ಶ್ರೀಗುರುದೇವ ದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಹೇಳಿದ್ದಾರೆ.
ಬೋಳಾರ ನಾರಾಯಣ ಶೆಟ್ಟಿ ಯಕ್ಷ ಪ್ರತಿಷ್ಠಾನದ ವತಿಯಿಂದ ಒಡಿಯೂರು ಶ್ರೀಗುರುದೇವ ದತ್ತ ಸಂಸ್ಥಾನದಲ್ಲಿ ಇತ್ತೀಚಿಗೆ ಜರುಗಿದ ‘ಬೋಳಾರ ನಾರಾಯಣ ಶೆಟ್ಟಿ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ’ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.
ಯಕ್ಷಾಂಗಣ ಮಂಗಳೂರು ಇದರ ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸಂಸ್ಮರಣಾ ಭಾಷಣ ಮಾಡಿದರು. ಟೈಮ್ಸ್ ಗ್ರೂಪ್‌ನ ಪ್ರಸರಣಾಧಿಕಾರಿ ಕದ್ರಿ ನವನೀತ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು. ಕೆ.ಲಕ್ಷ್ಮೀನಾರಾಯಣ ರೈ ಹರೇಕಳ ಸನ್ಮಾನ ಪತ್ರ ವಾಚಿಸಿದರು.
ವೇದಿಕೆಯಲ್ಲಿ ಸಾಧ್ವಿ ಮಾತಾನಂದಮಯಿ, ವಿದ್ವಾಂಸ ಹಿರಣ್ಯ ವೆಂಕಟೇಶ್ವರ ಭಟ್, ಹಿರಿಯ ಪತ್ರಕರ್ತ ಮಲಾರ್ ಜಯರಾಮ ರೈ, ಬೋಳಾರ ಪ್ರತಿಷ್ಠಾನದ ಸಂಚಾಲಕ ಬೋಳಾರ ಕರುಣಾಕರ ಶೆಟ್ಟಿ, ಜಯಶೀಲ ಧನಂಜಯ ಶೆಟ್ಟಿ, ವಾಸುದೇವ ಆರ್.ಕೊಟ್ಟಾರಿ, ಬೋಳಾರ ಗೋಪಾಲ ಶೆಟ್ಟಿ , ಕೀರ್ತನ್ ಶೆಟ್ಟಿ, ಕಿಶನ್ ಶೆಟ್ಟಿ ಉಪಸ್ಥಿತರಿದ್ದರು.
ಯಶವಂತ ವಿಟ್ಲ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸದಾಶಿವ ಅಳಿಕೆ ವಂದಿಸಿದರು.







