ಡಿ.27 ರಂದು ಮಂಗಳೂರಿಗೆ ರಾಷ್ಟ್ರಪತಿ

ಮಂಗಳೂರು, ಡಿ.24: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇದೇ ಡಿ.27ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಷ್ಟ್ರಪತಿ, ಬಳಿಕ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ. ಮಧ್ಯಾಹ್ನ 1:55ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಬಳಿಕ ಮುಂಬೈಗೆ ನಿರ್ಗಮಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





