Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಸಿಬಿಐ ಪೊಲೀಸ್ ಎಂದು ನಂಬಿಸಿ...

ಮಂಗಳೂರು: ಸಿಬಿಐ ಪೊಲೀಸ್ ಎಂದು ನಂಬಿಸಿ ಬೆಲೆ ಬಾಳುವ ವಸ್ತುಗಳು ಲೂಟಿ !

ವಾರ್ತಾಭಾರತಿವಾರ್ತಾಭಾರತಿ25 Dec 2018 8:41 PM IST
share
ಮಂಗಳೂರು: ಸಿಬಿಐ ಪೊಲೀಸ್ ಎಂದು ನಂಬಿಸಿ ಬೆಲೆ ಬಾಳುವ ವಸ್ತುಗಳು ಲೂಟಿ !

ಮಂಗಳೂರು, ಡಿ.25: ಬೈಕ್‌ನಲ್ಲಿ ಬಂದ ಲೂಟಿಕೋರರ ತಂಡವೊಂದು ‘ಸಿಬಿಐ ಪೊಲೀಸ್’ ಎಂದು ನಂಬಿಸಿ ಚಿನ್ನ, ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ಲೂಟಿ ಮಾಡಿದ ಘಟನೆ ಮಂಗಳವಾರ ಬೆಳಗ್ಗೆ ನಗರದ ಕಾರ್‌ಸ್ಟ್ರೀಟ್ ಬಳಿ ನಡೆದಿದೆ.

ಅಳಕೆ ನಿವಾಸಿ ಭಗವಾನ್ (70) ಎಂಬವರು ಇಂದು ಬೆಳಗ್ಗೆ 11:45ರ ವೇಳೆ ನಗರದ ಕಾರ್‌ಸ್ಟ್ರೀಟ್ ಬಿಇಎಂ ಸ್ಕೂಲ್‌ನ ಬಳಿ ನಡೆದುಕೊಂಡು ಹೋಗುತ್ತಿದ್ದು, ಈ ಸಂದರ್ಭ ಬೈಕ್‌ನಲ್ಲಿ ಬಂದ ಇಬ್ಬರು ಹಿಂದಿಯಲ್ಲಿ ಮಾತನಾಡುತ್ತಾ ‘ನಾವು ಸಿಬಿಐ ಪೊಲೀಸರು, ನಗರದಲ್ಲಿ ಚಿನ್ನಾಭರಣ ದರೋಡೆ ಮಾಡುವ ತಂಡವಿದೆ. ನೀವು ನಿಮ್ಮ ಚಿನ್ನಾಭರಣವನ್ನು ಜೋಪಾನವಾಗಿ ಕಿಸೆಯಲ್ಲಿ ಕಟ್ಟಿಡಿ’ ಎಂದು ಹೇಳುತ್ತಾರೆ.

ಆದರೆ ಭಗವಾನ್‌ ಅವರು ಏನು ಪ್ರತ್ಯುತ್ತರ ನೀಡದೆ ಮುಂದೆ ಹೋದಾಗ, ಹಠಬಿಡದ ಆ ಇಬ್ಬರು ಮತ್ತೆ ಅಡ್ಡಗಟ್ಟಿ, ಅದೇ ರೀತಿ ಹೇಳಿ ಅವರನ್ನು ನಂಬಿಸುತ್ತಾರೆ. ಅವರ ಬಣ್ಣದ ಮಾತನ್ನು ನಂಬಿದ ಭಗವಾನ್ ಕೂಡಲೇ ಕನ್ನಡಕ, ಮೊಬೈಲ್, ವಾಚ್, ನಗದು, ಉಂಗುರ, ಚಿನ್ನದ ಸರವನ್ನು ಟವಲ್‌ನಲ್ಲಿ ಕಟ್ಟುತ್ತಾರೆ. ಈ ಸಂದರ್ಭ ಆ ಇಬ್ಬರು ನಾವು ಕಟ್ಟಿಕೊಡುತ್ತೇವೆ ಎಂದು ಹೇಳಿ ತೆಗೆದುಕೊಂಡು ಸ್ವಲ್ಪ ಹೊತ್ತಿನಲ್ಲೇ ಆ ಟವಲ್‌ನ್ನು ಮರಳಿ ನೀಡುತ್ತಾರೆ. ಇದಾದ ನಂತರ ಇಬ್ಬರು ಕೂಡಾ ತಾವು ಬಂದ ಬೈಕ್‌ನಲ್ಲಿ ಪರಾರಿಯಾಗುತ್ತಾರೆ.

ಭಗವಾನ್ ಅವರಿಗೆ ಸ್ವಲ್ಪ ಸಮಯದ ಬಳಿಕ ಸಂಶಯ ಬಂದು ಟವಲ್ ಕಟ್ಟು ಬಿಡಿಸಿ ನೋಡಿದಾಗ ಚಿನ್ನದ ಉಂಗುರ ಮತ್ತು ಸರ ಕಳವಾಗಿತ್ತು. ಉಳಿದ ವಸ್ತುಗಳು ಹಾಗೆ ಉಳಿದಿದ್ದವು. ನಂತರ ಅವರಿಗೆ ಮೋಸ ಹೋಗಿರುವುದು ಸ್ಪಷ್ಟವಾಯಿತು. ಲೂಟಿಯಾದ ಸೊತ್ತಿನ ಮೌಲ್ಯ 70 ಸಾವಿರ ರೂ. ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಬಂದರು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ನಗರ ಪೊಲೀಸರು ಅಲರ್ಟ್
ಉಡುಪಿಯಲ್ಲಿ ಮಂಗಳವಾರ ಬೆಳಗ್ಗೆ 9:30ರ ವೇಳೆ ದರೋಡೆಕೋರರ ತಂಡವೊಂದು ಇದೇ ಮಾದರಿ ಎರಡು ಕಡೆ ಕೃತ್ಯ ನಡೆಸಿ ಮಂಗಳೂರಿನತ್ತ ಪ್ರಯಾಣ ಬೆಳೆಸಿತ್ತು. ಇದರ ಬಗ್ಗೆ ಉಡುಪಿ ಜಿಲ್ಲಾ ಪೊಲೀಸರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಅಲರ್ಟ್ ಆದ ನಗರ ಪೊಲೀಸರು ಠಾಣೆಗಳ ಸಾಗರ ವಾಹನದಲ್ಲಿ ಧ್ವನಿವರ್ಧಕ ಮೂಲಕ ಮಾಹಿತಿ ನೀಡಿದ್ದರು.

ಪೊಲೀಸರು ಧ್ವನಿವರ್ಧಕದಲ್ಲಿ ಮಾಹಿತಿ ನೀಡಿದರೂ ಗ್ಯಾಂಗ್ ಮಾತ್ರ ಕಾರ್‌ಸ್ಟ್ರೀಟ್ ಸಮೀಪ ವ್ಯಕ್ತಿಯೊಬ್ಬರನ್ನು ಲೂಟಿ ಮಾಡಿ ಪರಾರಿಯಾಗಿದೆ. ಆರೋಪಿಗಳಿಗೆ ಶೋಧ ಕಾರ್ಯ ನಡೆಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X