ಜೂಜಾಟ ಅಡ್ಡೆ ಮೇಲೆ ಸಿಸಿಬಿ ದಾಳಿ: 32 ಜನರ ಬಂಧನ

ಬೆಂಗಳೂರು, ಡಿ.25: ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ಆಡುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರು 32 ಜನರನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
ನಗರದ ಸದ್ದುಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿರಾಂ ಅತಿಥಿ ಗೃಹದ ಕಟ್ಟಡವನ್ನೇ ಅಡ್ಡೆಯನ್ನಾಗಿ ಮಾಡಿಕೊಂಡಿದ್ದರು ಎನ್ನಲಾಗಿದೆ.
ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ಮಾಡಿ, ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 3.64 ಲಕ್ಷ ರೂ. ನಗದು ಸೇರಿದಂತೆ ಇನ್ನಿತರೆ ಬೆಲೆ ಬಾಳುವ ವಸ್ತುಗಳನ್ನು ಜಪ್ತಿ ಮಾಡಿ ತನಿಖೆ ಮುಂದುವರೆಸಿದ್ದಾರೆ.
Next Story