ಬೈಕ್ಗೆ ಕಾರು ಢಿಕ್ಕಿ: ಸವಾರ ಪಾರು
ಬೆಂಗಳೂರು, ಡಿ.25: ಶರವೇಗವಾಗಿ ಬಂದ ಕಾರೊಂದು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾರಿಬಿದ್ದು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನೆಲಮಂಗಲದ ರಾಯರಪಾಳ್ಯ ಬಳಿ ಸಂಭವಿಸಿದೆ.
ಈ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿ 4ರ ಬೆಂಗಳೂರು-ತುಮಕೂರು ರಸ್ತೆಯ ರಾಯರಪಾಳ್ಯ ಬಳಿ ಉತ್ತರಪ್ರದೇಶ ಮೂಲದ ಬೈಕ್ ಸವಾರ ರಸ್ತೆ ದಾಟುತ್ತಿದ್ದ ವೇಳೆ ಅತಿ ವೇಗದಿಂದ ಬಂದ ಕಾರು ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಢಿಕ್ಕಿಯ ರಭಸಕ್ಕೆ ಬೈಕ್ ಸವಾರ ದೂರ ಹಾರಿಬಿದ್ದು ಪಾರಾದರೆ, ಬೈಕ್ ಸಂಪೂರ್ಣ ಜಖಂಗೊಂಡಿದೆ. ಸಣ್ಣಪುಟ್ಟ ಗಾಯಗಳಾಗಿದ್ದ ಸವಾರ ಸ್ಥಳೀಯರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಉತ್ತರ ಪ್ರದೇಶಕ್ಕೆ ತೆರಳಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Next Story