ರಾಷ್ಟ್ರೀಯ ಜೂನಿಯರ್ ವೇಯ್ಟ್ ಲಿಪ್ಟಿಂಗ್ : ಲಾವಣ್ಯ ರೈಗೆ ಚಿನ್ನ

ಮೂಡುಬಿದಿರೆ, ಡಿ. 25: ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ರಾಷ್ಟ್ರೀಯ ಜೂನಿಯರ್ ವೇಯ್ಟ್ ಲಿಪ್ಟಿಂಗ್ ಚಾಂಪಿಯನ್ ಶಿಪ್‍ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಲಾವಣ್ಯ ರೈ ಚಿನ್ನದ ಪದಕವನ್ನು ಪಡೆದಿರುತ್ತಾರೆ.
ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲೂ ಕಂಚಿನ ಪದಕ ಪಡೆದಿದ್ದ ಲಾವಣ್ಯ ರೈ ಆಳ್ವಾಸ್ ಕಾಲೇಜು ಮೂಡುಬಿದಿರೆಯ ದ್ವಿತೀಯ ಬಿ.ಎ. ವಿದ್ಯಾರ್ಥಿನಿ.
Next Story