ಪುತ್ತೂರು : ನಾಪ್ತತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ಪುತ್ತೂರು, ಡಿ. 25 : ವಾರದ ಹಿಂದೆ ಪುತ್ತೂರು ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದ ರೋಟರಿಪುರ ಎಂಬಲ್ಲಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಮಂಗಳವಾರ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ.
ಚಿಕ್ಕಮುಡ್ನೂರು ಗ್ರಾಮದ ರೋಟರಿಪುರ ನಿವಾಸಿ ಚಂದ್ರಹಾಸ (35) ಮೃತರು ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಚಂದ್ರಹಾಸ ಅವರು ಕಳೆದ ಡಿ.16ರಂದು ನಾಪತ್ತೆಯಾಗಿದ್ದರು. ಈ ಕುರಿತು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಲಾಗಿತ್ತು.
ನಾಪತ್ತೆಯಾದ ಚಂದ್ರಹಾಸ ಅವರ ಪತ್ತೆಗಾಗಿ ಹಲವು ಕಡೆಗಳಲ್ಲಿ ಹುಡುಕಾಡಿದರೂ ಪ್ರಯೋಜನವಾಗಿರಲಿಲ್ಲ. ಮಂಗಳವಾರ ಬೆಳಗ್ಗೆ ಅವರ ಮೃತದೇಹ ಮನೆಯ ಸಮೀಪದಲ್ಲಿ ಇರುವ ಬಾವಿಯಲ್ಲಿ ಪತ್ತೆಯಾಗಿದೆ.
ಚಂದ್ರಹಾಸ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತರ ತಾಯಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





