Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಕೃತಿಗೆ ವಿರುದ್ಧವಾಗಿ ಹೋದರೆ ಮಾರಕ...

ಪ್ರಕೃತಿಗೆ ವಿರುದ್ಧವಾಗಿ ಹೋದರೆ ಮಾರಕ ರೋಗ: ಡಾ. ಶ್ರೀಶ ಕುಮಾರ್

ವಾರ್ತಾಭಾರತಿವಾರ್ತಾಭಾರತಿ26 Dec 2018 7:22 PM IST
share
ಪ್ರಕೃತಿಗೆ ವಿರುದ್ಧವಾಗಿ ಹೋದರೆ ಮಾರಕ ರೋಗ: ಡಾ. ಶ್ರೀಶ ಕುಮಾರ್

ಪುತ್ತೂರು, ಡಿ. 26: ಪ್ರಕೃತಿಯನ್ನು ನಾಶ ಮಾಡುತ್ತಿರುವ ಪರಿಣಾಮ ಪ್ರಾಕೃತಿಕ ವಿಕೋಪಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಮಣ್ಣಿನ ಫಲವತ್ತತೆ ಕಡಿಮೆಯಾಗುತ್ತಿದೆ. ಹಾಗೆಯೇ ಪ್ರಕೃತಿಗೆ ವಿರುದ್ಧವಾಗಿ ಹೋದರೆ ಮಾರಕವಾದ ರೋಗಗಳು ಬರುತ್ತವೆ ಎಂದು ವಿವೇಕಾನಂದ ಪದವಿ ಕಾಲೇಜಿನ ಸಂಸ್ಕೃತ ವಿಭಾಗದ ಉಪನ್ಯಾಸಕ ಡಾ. ಶ್ರೀಶ ಕುಮಾರ್ ಎಂ.ಕೆ ಹೇಳಿದರು.

ಅವರು ಕಾಲೇಜಿನ ಐಕ್ಯುಎಸಿ ಸಹಯೋಗದಲ್ಲಿ ಎನ್‍ಎಸ್‍ಎಸ್ ಘಟಕವು ಸಾರಡ್ಕ ಸಮೀಪದ ಮೂಡಂಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿರುವ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ `ಪ್ರಕೃತಿ ಮತ್ತು ಬದುಕು' ಎಂಬ ವಿಷಯದ ಕುರಿತು ಸೋಮವಾರ ಉಪನ್ಯಾಸ ನೀಡಿದರು.

ನಾವಿಂದು ಪ್ರಾಕೃತಿಕವಾದ ಜೀವನದಿಂದ ಯಾಂತ್ರೀಕೃತವಾದ ಜೀವನದತ್ತ ಹೋಗುತ್ತಿದ್ದೇವೆ. ನೈಸರ್ಗಿಕ ಸಂಗತಿಗಳಿಗೆ ವಿರೋಧವೆನಿಸುವ ಶಿಕ್ಷಣ, ಆಹಾರ, ಆರೋಗ್ಯ ಇಂದು ಬಹುದೊಡ್ಡ ಉದ್ಯಮವಾಗಿ ನಮ್ಮನ್ನು ಆವರಿಸಿಕೊಂಡುಬಿಟ್ಟಿವೆ. ಪ್ರಕೃತಿಯಲ್ಲಿ ಸಿಗುತ್ತಿದ್ದ ನೈಸರ್ಗಿಕ ಸಂಪತ್ತುಗಳು ವಿಷವಾಗಿ ಮಾರ್ಪಾಡಾಗುತ್ತಿರುವುದು ದುರಂತ. ಇತ್ತೀಚಿನ ದಿನಗಳಲ್ಲಿ ಕಾಣುತ್ತಿರುವ ಜಲಪ್ರಳಯಕ್ಕೆ ಮಾನವನೇ ನೇರ ಹೊಣೆ. ದ.ಕ.ಜಿಲ್ಲೆಗೂ ಪ್ರವಾಹ ವ್ಯಾಪಿಸುವ ದಿನಗಳು ಬಹುದೂರವಿಲ್ಲ. ಅತಿಯಾದ ಜಾಗತಿಕ ತಾಪಮಾನದಿಂದ ಸಮುದ್ರದ ವ್ಯಾಪ್ತಿ ದೊಡ್ಡದಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇಂದು ನೈಸರ್ಗಿಕವಾದ ಕಾಡಿನ ಬದಲು ಕಾಂಕ್ರೀಟ್ ಕಾಡುಗಳು ಹೆಚ್ಚಾಗುತ್ತಿರುವುದು ದುರಂತ. ಮರಗಳ ನಾಶದಿಂದ ಗಾಳಿಯಲ್ಲಿ ಆಮ್ಲಜನಕದ ಪ್ರಮಾಣ ಕಡಿಮೆಯಾಗುತ್ತಿದೆ. ಶುದ್ಧವಾದ ನೀರು, ನೀರು, ಗಾಳಿ ಇದ್ದರೆ ಮಾತ್ರ ದೀರ್ಘಕಾಲ ಬದುಕಬಹುದು. ಮೂಢನಂಬಿಕೆಗಳನ್ನು ಬದಿಗಿರಿಸಿ ಅತಿ ಹೆಚ್ಚು ಗಾಳಿ ಒದಗಿಸುವ ಅಶ್ವಥ ಗಿಡಗಳನ್ನು ಬೆಳೆಸುವ ಕೆಲಸ ಆಗಬೇಕಿದೆ. ಮುಂದಿನ ಜನಾಂಗ ಬದುಕಬೇಕಿದ್ದರೆ ನೈಸರ್ಗಿಕವಾದ ಪ್ರಕೃತಿ ಅಗತ್ಯ. ಪ್ರಕೃತಿಯನ್ನು ಮರೆತಾಗ ಬದುಕು ಬರಡಾಗುತ್ತದೆ. ಪ್ರಕೃತಿ ಮತ್ತು ಬದುಕು ಎರಡು ನಾಣ್ಯದ ಮುಖಗಳಿದ್ದಂತೆ. ಪ್ರಕೃತಿಯ ಸಂಪತ್ತನ್ನು ದುರ್ಬಳಕೆ ಮಾಡದೆ ಉಳಿಸುವ ಕೆಲಸ ಆಗಬೇಕಾಗಿದೆ ಎಂದು ಹೇಳಿದರು.

ಮೂಡಂಬೈಲು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಂಜೀವ ಬಂಟ ಮಾತನಾಡಿ ಪ್ರಕೃತಿ ಇದ್ದರೆ ಮಾತ್ರ ಬದುಕು ಹಸನಾಗುತ್ತದೆ. ಆದರೆ ನಾವಿಂದು ಪ್ರಕೃತಿಯನ್ನು ವಿಕೃತಿಯಾಗಿ ಮಾಡಿ ಬದುಕುತ್ತಿದ್ದೇವೆ. ನಗರದ ವಾತಾವರಣ ಹಳ್ಳಿಯಲ್ಲಿ ಸೃಷ್ಟಿಯಾಗುತ್ತಿರುವುದು ದುರಂತ. ಗಣಿಗಾರಿಕೆಗಳು ಇಂದು ಪ್ರತಿಯೊಂದು ಹಳ್ಳಿಯನ್ನು ಆವರಿಸಿಕೊಂಡುಬಿಟ್ಟಿವೆ. ನೈಸರ್ಗಿಕವಾದ ಸಂಪತ್ತನ್ನು ಉಳಿಸಿ ಬೆಳೆಸುವುದರತ್ತ ಯುವಜನತೆ ಗಮನ ಕೊಡಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೂಡಂಬೈಲಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಅಧ್ಯಕ್ಷ ರಮೇಶ್ ಪೂಜಾರಿ ಬಳಂತಿಮುಗೇರು ಮಾತನಾಡಿ ಸುಂದರವಾದ ಬದುಕನ್ನು ಕಟ್ಟಿಕೊಳ್ಳಬೇಕಿದ್ದರೆ ಪ್ರಕೃತಿ ಅತಿ ಅಗತ್ಯ ಎಂದು ಹೇಳಿದರು. ವಿದ್ಯಾರ್ಥಿ ಕಾರ್ತಿಕ್ ಸ್ವಾಗತಿಸಿದರು. ವಿದ್ಯಾರ್ಥಿನಿ ಹರ್ಷಿತ ವಂದಿಸಿದರು. ವಿದ್ಯಾರ್ಥಿನಿ ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X