Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ಮಾರ್ಟ್ ಸಿಟಿ ಯೋಜನೆ: ಕಾಮಗಾರಿಯ ವೇಗ...

ಸ್ಮಾರ್ಟ್ ಸಿಟಿ ಯೋಜನೆ: ಕಾಮಗಾರಿಯ ವೇಗ ಹೆಚ್ಚಿಸಲು ಶಿವಮೊಗ್ಗ ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ26 Dec 2018 10:31 PM IST
share
ಸ್ಮಾರ್ಟ್ ಸಿಟಿ ಯೋಜನೆ: ಕಾಮಗಾರಿಯ ವೇಗ ಹೆಚ್ಚಿಸಲು ಶಿವಮೊಗ್ಗ ಜಿಲ್ಲಾಧಿಕಾರಿ ಸೂಚನೆ

ಶಿವಮೊಗ್ಗ, ಡಿ. 26: ಕೇಂದ್ರ ಪುರಸ್ಕೃತ ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ಮಹಾನಗರದ ಪಾಲಿಕೆ ವ್ಯಾಪ್ತಿಗೊಳಪಡುವ ಪ್ರದೇಶದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾರ್ಯಗಳು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಸೂಚಿಸಿದ್ದಾರೆ.

ಬುಧವಾರ ನಗರದ ಡಿ.ಸಿ. ಕಚೇರಿ ಸಭಾಂಗಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ನಿರೀಕ್ಷೆಯಂತೆ ಪೂರ್ಣಗೊಳ್ಳದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಕಾಮಗಾರಿಗಳನ್ನು ನಡೆಸುತ್ತಿರುವ ಗುತ್ತಿಗೆದಾರರೊಂದಿಗೆ ಸಮಾಲೋಚನೆ ನಡೆಸಿ, ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಿದರು ಹಾಗೂ ಕಾಲಕಾಲಕ್ಕೆ ಸಂಬಂಧಿಸಿದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಕಾರ್ಯನಿರ್ವಹಿಸಬೇಕು. ಕೆಲಸದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವರ್ತನೆಯನ್ನು ಸಹಿಸಲಾಗುವುದಿಲ್ಲ ಎಂದು ತಿಳಿಸಿದರು.

ಕೆಲವು ಕಡೆಗಳಲ್ಲಿ ಕೈಗೊಳ್ಳಲಾಗಿರುವ ರಸ್ತೆ ಕೆಲಸ-ಕಾರ್ಯಗಳು ಮೆಸ್ಕಾಂ, ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ, ವಿವಿಧ ಇಲಾಖೆಗಳ ವ್ಯಾಪ್ತಿಗೊಳಪಡುವುದರಿಂದ ಸಮನ್ವಯತೆಯ ಕೊರತೆಯ ಕಾರಣದಿಂದಾಗಿ ನಿಧಾನಗತಿಯಾಗಿರಬಹುದು. ಹೀಗಿದ್ದಲ್ಲಿ ಕೂಡಲೇ ಅಧಿಕಾರಿಗಳು ಸಮನ್ವಯತೆ ಸಾಧಿಸಿ ಕಾರ್ಯನಿರ್ವಹಿಸುವಂತೆ ಅವರು ಸಲಹೆ ನೀಡಿದರು.

ಕೆಲವು ರಸ್ತೆ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮೆಸ್ಕಾಂನ ಅಭಿಯಂತರರು ನೀಡಿರುವ ಅಪೂರ್ಣವಾದ ಸಲಹೆಗಳಿಂದಾಗಿ ಕಾಮಗಾರಿ ಪೂರ್ಣಗೊಳಿಸದೇ ಗುತ್ತಿಗೆದಾರರು ಹಿಂದೆ ಸರಿದಿದ್ದಾರೆ. ಇನ್ನೊಮ್ಮೆ ಮೆಸ್ಕಾಂನಿಂದ ಪರಿಷ್ಕೃತ ಕ್ರಿಯಾಯೋಜನೆ ತಯಾರಿಸಿ, ಅನುಮೋದನೆ ಪಡೆದು ಟೆಂಡರ್ ಕರೆದು ಕಾಮಗಾರಿ ನಡೆಸಲು ಕ್ರಮ ಕೈಗೊಳ್ಳಬೇಕು. ತಪ್ಪು ಮಾಹಿತಿ ನೀಡಿರುವ ಸರಿಯಾದ ಕ್ರಿಯಾಯೋಜನೆ ರೂಪಿಸದೆ ಕಾಮಗಾರಿ ವಿಳಂಬಕ್ಕೆ ಕಾರಣವಾಗಿರುವ ಅಭಿಯಂತರರಿಗೆ ನೋಟೀಸ್ ನೀಡುವಂತೆ ಸೂಚಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಗೆ ಮರಳಿನ ಕೊರತೆ ಇದ್ದಲ್ಲಿ ಮರಳು ಪೂರೈಸಲು ಅನುಕೂಲವಾಗುವಂತೆ ವ್ಯವಸ್ಥಿತವಾಗಿ ನಿರ್ವಹಿಸುವ ಷರತ್ತಿಗೊಳಪಟ್ಟು, ನಗರಕ್ಕೆ ಸಮೀಪವಾಗಿರುವ ಕ್ವಾರಿಯನ್ನು ಬಿಟ್ಟು ಕೊಡುವುದಾಗಿ ಅವರು ತಿಳಿಸಿದರು. 

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಮಾತನಾಡಿ, ನಗರದ ಎಲ್ಲಾ ವಾರ್ಡ್ ಗಳಲ್ಲಿ ಕಾಮಗಾರಿಗಳ ಕುರಿತು ಮಾಹಿತಿಫಲಕ ಅಳವಡಿಸಿ. ಅಗತ್ಯವಿದ್ದಲ್ಲಿ ಸಾರ್ವಜನಿಕರ ಸಲಹೆ ಪಡೆಯಿರಿ. ಅಲ್ಲದೇ ಸ್ಮಾರ್ಟ್ ಸಿಟಿ ಯೋಜನೆಯ ಇತರೆ ವಿಷಯಗಳ ಕಡೆ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾಂತ್ರಿಕ ಸಮಸ್ಯೆಗಳು ಕಂಡುಬಂದಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಒಳಗೊಳ್ಳುವ ಎಲ್ಲಾ ಇಲಾಖೆಗಳ ಅಧಿಕಾರಿಗಳು ಇರುವಂತೆ ಗಮನಹರಿಸಬೇಕು. ನಗರದ ಸೌಂದರ್ಯ ಹೆಚ್ಚಳ, ಹಸಿರೀಕರಣ ಮುಂತಾದ ಕೆಲ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆಯು ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕ್ರಮಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಅವರು ಹೇಳಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಸ್ಮಾರ್ಟ್ ಸಿಟಿ ಮುಖ್ಯ ಇಂಜಿನಿಯರ್ ಚಿದಾನಂದ್, ಕಾರ್ಯಪಾಲಕ ಇಂಜಿನಿಯರ್ ಗಣೇಶ್ ಸೇರಿದಂತೆ ಪಾಲಿಕೆಯ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ಹಂತದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X