Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಶ್ವ ಹವ್ಯಕ ಸಮ್ಮೇಳನಕ್ಕೆ ಬಹಿಷ್ಕಾರ:...

ವಿಶ್ವ ಹವ್ಯಕ ಸಮ್ಮೇಳನಕ್ಕೆ ಬಹಿಷ್ಕಾರ: ಹವ್ಯಕ ಒಕ್ಕೂಟ

ವಾರ್ತಾಭಾರತಿವಾರ್ತಾಭಾರತಿ26 Dec 2018 11:05 PM IST
share

ಬೆಂಗಳೂರು, ಡಿ.26: ಅತ್ಯಾಚಾರದ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ಪೀಠಾಧ್ಯಕ್ಷ ರಾಘವೇಶ್ವರ ಭಾರತೀ ಸ್ವಾಮಿ ನೇತೃತ್ವದಲ್ಲಿ ಡಿ.28 ರಿಂದ ನಡೆಯುತ್ತಿರುವ ಅಖಿಲ ಹವ್ಯಕ ಮಹಾಸಭಾದ ಅಮೃತ ಮಹೋತ್ಸವ ಹಾಗೂ ವಿಶ್ವ ಹವ್ಯಕ ಸಮ್ಮೇಳನವನ್ನು ಬಹಿಷ್ಕರಿಸುತ್ತಿದ್ದೇವೆ ಎಂದು ಅಖಿಲ ಹವ್ಯಕ ಒಕ್ಕೂಟ ಹೇಳಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಸ್ಥಾಪಕ ಕಾರ್ಯದರ್ಶಿ ಸಿ.ಎಚ್.ಎಸ್.ಭಟ್, ಅನೈತಿಕ, ಅಧಾರ್ಮಿಕ ದಾರಿಯಲ್ಲಿ ನಡೆಯುತ್ತಿರುವ ರಾಘವೇಶ್ವರ ಸ್ವಾಮೀಜಿ ನಿರ್ದೇಶನದಂತೆ ಮೂರು ದಿನಗಳ ಕಾರ್ಯಕ್ರಮ ನಡೆಯುತ್ತಿದೆ. ಇದು ಹವ್ಯಕ ಮಹಾಸಭಾ ಕಾರ್ಯಕ್ರಮದ ಬದಲಿಗೆ ರಾಮಚಂದ್ರಾಪುರ ಮಠದ ಕಾರ್ಯಕ್ರಮದಂತಾಗಿದೆ ಎಂದು ದೂರಿದರು.

ರಾಘವೇಶ್ವರ ಭಾರತೀ ಸ್ವಾಮೀಜಿ ತಾವು ಮಾಡಿದ ತಪ್ಪುಗಳನ್ನು ಮುಚ್ಚಿ ಹಾಕಿಕೊಳ್ಳುವ ಉದ್ದೇಶದಿಂದ ಈ ಕಾರ್ಯಕ್ರಮಕ್ಕೆ ಪ್ರೋತ್ಸಾಹಿಸುತ್ತಿದ್ದಾರೆ. ಅಲ್ಲದೆ, ಹವ್ಯಕ ಮಹಾಸಭಾವು ಸ್ವಾಮಿಯ ಮೇಲಿನ ಯಾವುದೇ ಆರೋಪಗಳನ್ನು ಪ್ರಶ್ನಿಸದೆ ನೇರವಾಗಿ ಅವರ ಬೆಂಬಲಕ್ಕೆ ನಿಂತಿದೆ. ಹೀಗಾಗಿ, ಹವ್ಯಕ ಸಮುದಾಯದ ಯಾರೊಬ್ಬರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಾರದು ಎಂದು ಮನವಿ ಮಾಡಿದರು.

ಹವ್ಯಕ ಮಹಾಸಭಾದ ಸಮ್ಮೇಳನದಲ್ಲಿ ರಾಘವೇಶ್ವರ ಭಾರತೀ ಸ್ವಾಮೀಜಿಯ ಹಿಂಬಾಲಕರಿಗೆ ಅಷ್ಟೇ ಗೌರವಿಸಲಾಗುತ್ತಿದೆ. ಆದರೆ, ಸಮುದಾಯದಲ್ಲಿ ಪದ್ಮಶ್ರೀ ಪಡೆದವರಲ್ಲಿ ಒಬ್ಬರಾದ ಚ.ಮೂ.ಕೃಷ್ಣಶಾಸ್ತ್ರಿಯನ್ನು, ತಪ್ಪು ಮಾಡಿದ ಸ್ವಾಮೀಜಿಯನ್ನು ಟೀಕೆ ಮಾಡಿದ ಕಾರಣಕ್ಕಾಗಿ ಗೌರವಿಸದೇ ದೂರವಿಟ್ಟಿದ್ದಾರೆ. ಆದುದರಿಂದಾಗಿ ಒಕ್ಕೂಟದಿಂದ ಸಮ್ಮೇಳನವನ್ನು ಬಹಿಷ್ಕರಿಸಲಾಗುತ್ತಿದೆ. ಹೀಗಾಗಿ, ಯಾರೂ ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಾರದು ಎಂದು ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಎಂ.ಎನ್.ಭಟ್, ಹವ್ಯಕ ಮಹಾಸಭಾದ ಮಾಜಿ ಅಧ್ಯಕ್ಷ ಯು.ಎನ್.ಭಟ್, ಕಾರ್ಯದರ್ಶಿ ತಾರಾನಾಥ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X