Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ಪೋರೇಟ್ ವಲಯದ ಕಡಿವಾಣಕ್ಕೆ...

ಕಾರ್ಪೋರೇಟ್ ವಲಯದ ಕಡಿವಾಣಕ್ಕೆ ಕಮ್ಯೂನಿಷ್ಟ್ ಸಂಘಟನೆಗಳು ಒಗ್ಗೂಡಬೇಕಿದೆ: ಸಿಪಿಐ ಮುಖಂಡ ಪಿ.ವಿ.ಲೋಕೇಶ್

ವಾರ್ತಾಭಾರತಿವಾರ್ತಾಭಾರತಿ26 Dec 2018 11:43 PM IST
share
ಕಾರ್ಪೋರೇಟ್ ವಲಯದ ಕಡಿವಾಣಕ್ಕೆ ಕಮ್ಯೂನಿಷ್ಟ್ ಸಂಘಟನೆಗಳು ಒಗ್ಗೂಡಬೇಕಿದೆ: ಸಿಪಿಐ ಮುಖಂಡ ಪಿ.ವಿ.ಲೋಕೇಶ್

ದಾವಣಗೆರೆ,ಡಿ.26: ಎಡಪಕ್ಷಗಳಲ್ಲಿ ಐಕ್ಯತೆ ಇಲ್ಲದೆ ಇರುವುದರಿಂದ 93 ವರ್ಷಗಳ ಇತಿಹಾಸದಲ್ಲಿ ಬಲಪಂಥೀಯರು ಅಧಿಕಾರಕ್ಕೆ ಬರಲು ಕಾರಣವಾಯಿತು ಎಂದು ಭಾರತೀಯ ಕಮ್ಯುನಿಸ್ಟ್ ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ವಿ.ಲೋಕೇಶ್ ಹೇಳಿದರು.

ನಗರದ ಸಿಪಿಐ ಜಿಲ್ಲಾ ಮಂಡಳಿ ಪಂಪಾಪತಿ ಭವನದಲ್ಲಿ ಭಾರತೀಯ ಕಮ್ಯುನಿಸ್ಟ್ ಪಕ್ಷದ 93ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶದ ಅಭಿವೃದ್ಧಿ, ಕಾರ್ಪೋರೇಟ್ ವಲಯಕ್ಕೆ ಕಡಿವಾಣಕ್ಕೆ ಕಮ್ಯೂನಿಷ್ಟ್ ಸಂಘಟನೆಗಳು ಒಗ್ಗೂಡಬೇಕಿದೆ. ಹಾಗಾದರೆ ಮಾತ್ರ ಹೊಸ ರಾಜಕೀಯ ಅಲೆ ಕಂಡು ಬರಲಿದೆ ಎಂದರು.  

ದೇಶದಲ್ಲಿ ಕಮ್ಯೂನಿಷ್ಟ್ ಸಂಘಟನೆಗಳು ವಿಲೀನಗೊಂಡರೆ ಮಾತ್ರ ಶೋಷಣೆ ನಡೆಸುತ್ತಿರುವ ಕಾರ್ಪೋರೇಟ್ ವಲಯಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದು ಬದಲಾದ ಕಾಲಘಟ್ಟದಲ್ಲಿ ರಾಜಕೀಯ ಸನ್ನಿವೇಶಕ್ಕೆ ಜನರು ಮಾರುಹೋಗಿದ್ದಾರೆ. ಅವರನ್ನು ಜಾಗೃತರನ್ನಾಗಿ ಮಾಡಬೇಕು. ಈ ಹಿನ್ನಲೆಯಲ್ಲಿ ಎರಡಾಗಿರುವ ಪಕ್ಷಗಳು ಒಂದಾಗಬೇಕಿದೆ. 1964ರಲ್ಲಿ ಪಕ್ಷದಲ್ಲಿ ಒಡಕು ಉಂಟಾದ ಹಿನ್ನಲೆಯಲ್ಲಿ ರಾಜಕೀಯವಾಗಿ ದುರ್ಬಲಗೊಂಡಿತು. ಕಳೆದ ತಿಂಗಳು ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಪ್ರಗತಿಪರ ಸಂಘಟನೆಗಳು ಭಾಗವಹಿಸಿ ಸರ್ಕಾರಕ್ಕೆ ನಮ್ಮ ಬಲ ಏನೆಂಬುದನ್ನು ತೋರಿಸಿತು. ಇದು ನಮಗೆ ಪಾಠವಾಗಬೇಕು ಎಂದರು. 

ದೇಶದ ಸ್ವಾತಂತ್ರ್ಯ ಹೋರಾಟ ಮತ್ತು ಆನಂತರದ ಜನಪರ ಚಳವಳಿಯಲ್ಲಿ ಸಿಪಿಐ ಪಾತ್ರ ದೊಡ್ಡದು. ಪಕ್ಷ ಕಳೆದ 93 ವರ್ಷದಿಂದಲೂ ತನ್ನದೇ ಸೈದ್ಧಾಂತಿಕ ನಿಲುವು, ಬದ್ಧತೆಯೊಂದಿಗೆ ಹೋರಾಟ ಮಾಡುತ್ತಿದೆ. ಕೇಂದ್ರ ಸರ್ಕಾರಕ್ಕೆ ಮಗ್ಗಲು ಮುಳ್ಳಾಗಿರುವ ಜಿಎಸ್‍ಟಿ ಮತ್ತು ನೋಟು ಅಮಾನ್ಯೀಕರಣದ ವಿರುದ್ಧ ಮೊದಲ ಬಾರಿಗೆ ಧ್ವನಿ ಎತ್ತಿದ್ದೆ ಸಿಪಿಐ. ಆದರೆ ಹಟ ಹಿಡಿದು ಜಾರಿಗೆ ತಂದ ಕೇಂದ್ರ ಸರ್ಕಾರ ಅವರ ಪರಿಣಾಮಗಳನ್ನು ಈಗ ಎದುರಿಸುತ್ತಿದೆ ಎಂದರು.

ಸಿಪಿಐ ಜಿಲ್ಲಾ ಮಂಡಳಿ ಕಾರ್ಯದರ್ಶಿ ಹೆಚ್.ಕೆ. ರಾಮಚಂದ್ರಪ್ಪ ಅಧ್ಯಕ್ಷತೆ ವಹಿಸಿ, ಡಿಸೆಂಬರ್ 26, 1925ರಲ್ಲಿ ಪಕ್ಷ ಸ್ಥಾಪನೆಯಾಗಿ ಇಂದಿಗೆ 93 ವರ್ಷ ಪೂರೈಸಿದೆ. ಅಂದಿನಿಂದ ಇಂದಿನವರೆಗೂ ಸಮಾಜವಾದಿ ಸಮಾಜ ರಚನೆಯ ಗುರಿಯೊಂದಿಗೆ ಭೂ ರಹಿತರ ಪರವಾಗಿ ಅನೇಕ ಹೋರಾಟಗಳನ್ನು ಮಾಡಿಕೊಂಡು ಬರುತ್ತಿದೆ ಎಂದರು.

ದೇಶದಲ್ಲಿಂದು ಹಲವಾರು ಜನಪರವಾದ ಕಾಯಿದೆಗಳು ಜಾರಿಯಾಗಿದ್ದರೆ ಅದಕ್ಕೆ ಸಿಪಿಐನ ಹೋರಟಗಳು ಕಾರಣ. ಇಂದು ಅನೇಕ ಸವಾಲುಗಳಿದ್ದರೂ ತನ್ನ ತತ್ವ, ಸಿದ್ಧಾಂತಗಳನ್ನು ಬಿಟ್ಟು ಕೊಡದೇ ಮುನ್ನೆಡೆಯುತ್ತಿದೆ ಎಂದು ತಿಳಿಸಿದರು.

ಪಕ್ಷದ ಮುಖಂಡರಾದ ಆನಂದ್‍ ರಾಜ್, ಪಾಲಿಕೆ ಸದಸ್ಯ ಹೆಚ್.ಜಿ.ಉಮೇಶ್, ಪರಮೇಶ್ವರಪ್ಪ ಹರಿಹರ, ಆವರಗೆರೆ ವಾಸು, ಚಂದ್ರು, ಮಹಮದ್‍ ಬಾಷಾ, ಗೌಸ್‍ಪೀರ್ ಮತ್ತಿತರರಿದ್ದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X