ಡಿ. 29: ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಸ್ವರ್ಣ ಮಹೋತ್ಸವ

ಮಂಗಳೂರು, ಡಿ.27: ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಸ್ವರ್ಣ ಮಹೋತ್ಸವ ಕಾರ್ಯಕ್ರಮವು ಡಿ.29ರಂದು ನಗರದ ಪುರಭವನದಲ್ಲಿ ನಡೆಯಲಿದೆ ಎಂದು ಕಮಿಟಿಯ ಅಧ್ಯಕ್ಷ ಕೆ.ಎಸ್. ಮುಹಮ್ಮದ್ ಮಸೂದ್ ತಿಳಿಸಿದ್ದಾರೆ.
ಗುರುವಾರ ನಗರದ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದ.ಕ. ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಬೆಳಗ್ಗೆ 10:30ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಡುಪಿ ಖಾಝಿ ಹಾಜಿ ಇಬ್ರಾಹೀಂ ಮುಸ್ಲಿಯಾರ್ ಬೇಕಲ ದುಆಗೈಯಲಿದ್ದಾರೆ. ರಾಜ್ಯ ವಕ್ಫ್ ಮಂಡಳಿಯ ಆಡಳಿತಾಧಿಕಾರಿ ಎ.ಬಿ. ಇಬ್ರಾಹೀಂ, ಅಬ್ದುಲ್ ಅಝೀಝ್ ದಾರಿಮಿ, ಎನ್.ಕೆ. ಮುಹಮ್ಮದ್ ಶಾಫಿ ಸಅದಿ ಮುಖ್ಯ ಭಾಷಣ ಮಾಡಲಿದ್ದಾರೆ ಎಂದರು.
ಅಪರಾಹ್ನ 2:30ಕ್ಕೆ ನಡೆಯುವ ಸಮಾರೋಪ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಈ ಸಂದರ್ಭ ಅರ್ಹ ಮಹಿಳೆಯರಿಗೆ ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್ ಹೊಲಿಗೆ ಯಂತ್ರ ವಿತರಿಸುವರು ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕಮಿಟಿಯ ಪದಾಧಿಕಾರಿಗಳಾದ ಇಬ್ರಾಹೀಂ ಕೋಡಿಜಾಲ್, ಮುಮ್ತಾಝ್ ಅಲಿ, ಮುಹಮ್ಮದ್ ಭಾಷಾ ತಂಙಳ್, ಹಾಜಿ ಮುಹಮ್ಮದ್ ಹನೀಫ್, ಸಿ.ಎಂ. ಮುಸ್ತಫಾ, ಅಹ್ಮದ್ ಬಾವಾ ಪಡೀಲ್, ಅಹ್ಮದ್ ಬಾವಾ ಬಜಾಲ್, ಡಿ.ಎಂ. ಅಸ್ಲಂ, ಸಿ.ಎಂ. ಹನೀಫ್, ಬಿ.ಎಸ್. ಇಮ್ತಿಯಾಝ್, ಮುಹಮ್ಮದ್ ಬಪ್ಪಳಿಗೆ, ಎಂ.ಎ. ಅಶ್ರಫ್ ಉಪಸ್ಥಿತರಿದ್ದರು.