Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಗತ್ತಿನಲ್ಲಿ ಪ್ರೀತಿ, ಬಾಂಧವ್ಯ...

ಜಗತ್ತಿನಲ್ಲಿ ಪ್ರೀತಿ, ಬಾಂಧವ್ಯ ಬೆಸೆಯಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್

ಉಡುಪಿ ಪೇಜಾವರ ಮಠ, ಶ್ರೀಕೃಷ್ಣ ಮಠಗಳಿಗೆ ಭೇಟಿ

ವಾರ್ತಾಭಾರತಿವಾರ್ತಾಭಾರತಿ27 Dec 2018 7:43 PM IST
share
ಜಗತ್ತಿನಲ್ಲಿ ಪ್ರೀತಿ, ಬಾಂಧವ್ಯ ಬೆಸೆಯಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್

ಉಡುಪಿ, ಡಿ.27: ಜಗತ್ತಿನಲ್ಲಿ ಮಾನವರ ಮಧ್ಯೆ ಪ್ರೀತಿ ಬಾಂಧವ್ಯ ಇನ್ನಷ್ಟು ಹೆಚ್ಚು ಮೂಡಿಬರಬೇಕಾದ ಅಗತ್ಯವಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಕರೆ ನೀಡಿದ್ದಾರೆ.

ಬುಧವಾರ ಉಡುಪಿ ಪೇಜಾವರ ಮಠ ಹಾಗೂ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ಪರಮಾತ್ಮನು ಜಗತ್ತಿನಲ್ಲಿ ಹಲವು ಜೀವಿ ಗಳನ್ನು ಸೃಷ್ಠಿಸಿದ್ದಾನೆ. ಈ ಪೈಕಿ ಮಾನವನು ದೇವರ ಅತ್ಯುತ್ತಮ ಸೃಷ್ಟಿಯಾಗಿದ್ದಾನೆ. ಇವರ ಮಧ್ಯೆ ಪ್ರೀತಿ ಪ್ರೇಮದ ಬೆಸುಗೆ ಇಂದಿನ ಅವಶ್ಯವಾಗಿದೆ ಎಂದು ರಾಷ್ಟ್ರಪತಿಗಳು ಹೇಳಿದರು. ಹಲವು ರೂಪ, ಹಲವು ಹೆಸರುಗಳಲ್ಲಿ ದೇವರನ್ನು ಕರೆದರೂ, ದೇವಸ್ವರೂಪ ಒಂದೇ ಆಗಿದೆ ಎಂದರು.

ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಲು ಬಹುದಿನಗಳಿಂದ ಯೋಚಿಸುತ್ತಿದ್ದೆ. ಇಂದು ಭೇಟಿ ನೀಡಿರುವುದು ಸಂತೋಷ ತಂದಿದೆ. ಪೇಜಾವರ ಸ್ವಾಮೀಜಿಗಳ ಬಗ್ಗೆ ಕೇಂದ್ರ ಸಚಿವೆ ಉಮಾಭಾರತಿ ಸಾಕಷ್ಟು ತಿಳಿಸಿದ್ದಾರೆ. 89ರ ಹರೆಯದಲ್ಲೂ ಸ್ವಾಮೀಜಿ ಚೈತನ್ಯದಿಂದ ಓಡಾಡುತ್ತಿರುವುದನ್ನು ನೋಡಿ ಸಂತೋಷವಾಗಿದೆ. ಅವರು ಶತಾಯುಷಿಗಳಾಗಲಿ. ಅವರಿಂದ ಧಾರ್ಮಿಕ ಮತ್ತು ಸಾಮಾಜಿಕ ಕೈಂಕರ್ಯಗಳು ಇನ್ನಷ್ಟು ಮೂಡಿಬರುವಂತಾಗಲಿ ಎಂದು ರಾಷ್ಟ್ರಪತಿಗಳು ಹಾರೈಸಿದರು.

ರಾಮರಾಜ್ಯ ಎಂಬುದು ಒಂದು ಆದರ್ಶ ರಾಜ್ಯವಾಗಿದ್ದು, ಪ್ರಜೆಗಳೊಂದಿಗೆ ಯಾವ ರೀತಿ ವ್ಯವಹರಿಸಬೇಕು ಮತ್ತು ಆಡಳಿತ ನಡೆಸಬೇಕು ಎಂಬುದಕ್ಕೆ ಅದೊಂದು ಮಾದರಿಯಾಗಿದೆ. ಈ ಆದರ್ಶವನ್ನು ಪಾಲಿಸಿದರೆ ಜಗತ್ತು ಸುಖಿಯಾಗಿರಬಲ್ಲದು ಎಂದು ರಾಷ್ಟ್ರಪತಿಗಳು ಹೇಳಿದರು.

ಪೇಜಾವರ ಶ್ರೀವಿಶ್ವೇಶ್ವತೀರ್ಥ ಸ್ವಾಮೀಜಿ ಮಾತನಾಡಿ, ಮಧ್ವಾಚಾರ್ಯರು ಪ್ರತಿಷ್ಠಾಪಿಸಿದ ಉಡುಪಿ ಶ್ರೀಕೃಷ್ಣ ಮಠಕ್ಕೆ ರಾಷ್ಟ್ರಪತಿಗಳ ಆಗಮನ ಸಂತೋಷ ತಂದಿದೆ ಎಂದರು. ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮೀಜಿ, ಪಂಚಲೋಹದ ಶ್ರೀಕೃಷ್ಣನ ಸುಂದರ ಬೃಹತ್ ಸ್ಮರಣಿಕೆ ನೀಡಿ ರಾಷ್ಟ್ರಪತಿಗಳನ್ನು ಗೌರವಿಸಿದರು.

ರಾಷ್ಟ್ರಪತಿ ಅವರ ಪತ್ನಿ ಸವಿತಾ ಕೋವಿಂದ್, ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ, ನಾಗಾಲ್ಯಾಂಡ್ ರಾಜ್ಯಪಾಲ ಪದ್ಮನಾ ಆಚಾರ್ಯ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್, ಜಿಪಂ ಅಧ್ಯಕ್ಷ ದಿನಕರ ಬಾಬು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕಲ್ಕೂರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಯಶವಂತ್, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಪ್ರಾನ್ಸಿಸ್, ಎಡಿಜಿಪಿ ಕಮಲ ಪಂತ್, ಐಜಿಪಿ ಅರುಣ್ ಚಕ್ರವರ್ತಿ, ಎಸ್ಪಿ ಲಕ್ಷ್ಮಣ ಬ.ನಿಂಬರಗಿ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಉಡುಪಿಗೆ ಮೊದಲ ಭೇಟಿ ನೀಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥರು ಸನ್ಯಾಸ ದೀಕ್ಷೆ ಸ್ವೀಕರಿಸಿ 80 ವರ್ಷಗಳು ಪೂರ್ಣಗೊಂಡ ಪ್ರಯುಕ್ತ ಅವರನ್ನು ಭೇಟಿಯಾಗಿ ಗೌರವ ಸಲ್ಲಿಸುವುದಕ್ಕಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಗುರುವಾರ ಇದೇ ಮೊದಲ ಬಾರಿಗೆ ಉಡುಪಿ ಜಿಲ್ಲೆಗೆ ಭೇಟಿ ನೀಡಿದರು.

ಪತ್ನಿ ಸವಿತಾ ಕೋವಿಂದ್ ಅವರೊಂದಿಗೆ ಮಂಗಳೂರು ವಿಮಾನ ನಿಲ್ದಾಣ ದಿಂದ ಬೆಳಗ್ಗೆ 11:20ಕ್ಕೆ ಆದಿಉಡುಪಿ ಹೆಲಿಪ್ಯಾಡ್‌ಗೆ ಆಗಮಿಸಿದ ರಾಷ್ಟ್ರಪತಿ ಗಳನ್ನು ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ, ನಾಗಾಲ್ಯಾಂಡ್ ರಾಜ್ಯಪಾಲ ಪದ್ಮನಾ ಆಚಾರ್ಯ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ, ಜಿಪಂ ಅಧ್ಯಕ್ಷ ದಿನಕರ ಬಾಬು ಮತ್ತಿತರರು ಸ್ವಾಗತಿಸಿದರು.

ಹೆಲಿಪ್ಯಾಡ್‌ನಿಂದ ನೇರವಾಗಿ ಕಲ್ಸಂಕ ಮಾರ್ಗವಾಗಿ ರಥಬೀದಿಗೆ ಆಗಮಿಸಿದ ರಾಷ್ಟ್ರಪತಿ 11:40ಕ್ಕೆ ಪೇಜಾವರ ಮಠಕ್ಕೆ ಆಗಮಿಸಿದರು. ಅಲ್ಲಿ ಅವರನ್ನು ಮಠದ ದಿವಾಣರಾದ ರಘುರಾಮ ಆಚಾರ್ಯರು ಸ್ವಾಗತಿಸಿದರು. ಅವರನ್ನು ಪೇಜಾವರ ಮಠದ ಒಳಕ್ಕೆ ಕರೆದೊಯ್ಯಲಾಯಿತು. ಅಲ್ಲಿ ರಾಷ್ಟ್ರಪತಿಗಾಗಿ ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥರು ಹಾಗೂ ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾದೀಶ ತೀರ್ಥರೊಂದಿಗೆ ಕಾದಿದ್ದ ಶ್ರೀವಿಶ್ವೇಶ್ವ ತೀರ್ಥ ಸ್ವಾಮೀಜಿಗಳು ಸ್ವಾಗತಿಸಿ, ಮಠದ ಇತಿಹಾಸವನ್ನು ವಿವರಿಸಿದರು.

ಅನಂತರ ಪೇಜಾವರ ಶ್ರೀಗಳು ಮಠದೊಳಗಿರುವ ಮಠದ ಮೂಲದೇವರು ರಾಮವಿಠಲನಿಗೆ ವಿಶೇಷ ಪೂಜೆ ನೆರವೇರಿಸಿದರು. ರಾಷ್ಟ್ರಪತಿಗಳೊಂದಿಗೆ ಅತಿಥಿಗಳೆಲ್ಲರೂ ಪೂಜೆಯಲ್ಲಿ ಭಾಗಿಯಾದರು. ಬಳಿಕ ಪೇಜಾವರಶ್ರೀಗಳು ರಾಷ್ಟ್ರಪತಿಗಳನ್ನು ಶಾಲು ಹೊದಿಸಿ, ಯಕ್ಷಗಾನದ ಕೇದಗೆ ಮುಂಡಾಸು ತೊಡಿಸಿ ಗೌರವಿಸಿದರು. ಅಲ್ಲದೇ ಪಂಚಲೋಹದಿಂದ ತಯಾರಿಸಿ ಶ್ರೀಕೃಷ್ಣನ ವಿಗ್ರಹವಿರುವ ಅಟ್ಟೆ ಪ್ರಭಾವಳಿಯನ್ನು ಸ್ಮರಣಿಕೆಯಾಗಿ ನೀಡಿದರು. ರಾಷ್ಟ್ರಪತಿಗಳೂ ಪೇಜಾವರ ಶ್ರೀಯನ್ನು ಶಾಲು ಹೊದಿಸಿ ಗೌರವಿಸಿದರು.

ಅಪರಾಹ್ನ 12:20ಕ್ಕೆ ಸರಿಯಾಗಿ ಪೇಜಾವರ ಮಠದಿಂದ ಹೊರಬಂದ ರಾಷ್ಟ್ರಪತಿಗಳು ಅಲ್ಲಿಂದ ನೇರವಾಗಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದರು. ಅಲ್ಲಿ ಅವರನ್ನು ಮಂಗಳವಾದ್ಯ ಹಾಗೂ ವೇದಘೋಷಗಳೊಂದಿಗೆ ಸ್ವಾಗತಿಸಿ, ಕೃಷ್ಣಮಠದ ಒಕ್ಕೆ ಕರೆದುಕೊಂಡು ಬರಲಾಯಿತು.

ನೇರವಾಗಿ ಕೃಷ್ಣ ದರ್ಶನ ಪಡೆದ ರಾಷ್ಟ್ರಪತಿಗಳು, ಚಂದ್ರಶಾಲೆಯಲ್ಲಿ ಉಳಿದ ಗಣ್ಯರೊಂದಿಗೆ ಆಸೀನರಾದರು. ಪೇಜಾವರ, ಪಲಿಮಾರುಶ್ರೀಗಳೊಂದಿಗೆ ಸೋದೆ, ಕಾಣಿಯೂರು ಹಾಗೂ ಅದಮಾರು ಕಿರಿಯ ಯತಿಗಳು ಈ ಸಂದರ್ಭ ದಲ್ಲಿ ಉಪಸ್ಥಿತರಿದ್ದರು. ರಾಷ್ಟ್ರಪತಿಗಳನ್ನು ಪರ್ಯಾಯ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಸ್ವಾಗತಿಸಿದರು. ರಾಷ್ಟ್ರಪತಿಗಳು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿರುವ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದರು.

ಪರ್ಯಾಯ ಸ್ವಾಮೀಜಿಗಳು ರಾಷ್ಟ್ರಪತಿಗಳನ್ನು ಶಾಲು ಹೊದಿಸಿ, ಕೃಷ್ಣನ ಪಂಚಲೋಹ ವಿಗ್ರಹ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಗಳು ಪೇಜಾವರಶ್ರೀಗಳು ಈ ವಯಸ್ಸಿನಲ್ಲೂ ದೇಶಾದ್ಯಂತ ಪ್ರವಾಸ ಮಾಡುತ್ತಿರುವುದನ್ನು ತಿಳಿದು, ರಾಷ್ಟ್ರಪತಿ ಭವನಕ್ಕೂ ಒಮ್ಮೆ ಆಗಮಿಸು ವಂತೆ ಆಹ್ವಾನಿಸಿದರು.

ಅಪರಾಹ್ನ 12:45ಕ್ಕೆ ರಾಷ್ಟ್ರಪತಿಗಳು ಕೃಷ್ಣಮಠದಿಂದ ಹೆಲಿಪ್ಯಾಡ್‌ಗೆ ತೆರಳಿ ಅಲ್ಲಿಂದ ಮಂಗಳೂರಿಗೆ ನಿರ್ಗಮಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X