ಲೋಕಸಭೆಯಲ್ಲಿ ತ್ರಿವಳಿ ತಲಾಕ್ ಮಸೂದೆ ಅಂಗೀಕಾರ

ಹೊಸದಿಲ್ಲಿ, ಡಿ.27: ಸರಿಸುಮಾರು 5 ಗಂಟೆಗಳ ಚರ್ಚೆಯ ನಂತರ ಕಾಂಗ್ರೆಸ್ ಮತ್ತು ಎಐಎಡಿಎಂಕೆಯ ನಿರ್ಗಮನದ ಹೊರತಾಗಿಯೂ ತ್ರಿವಳಿ ತಲಾಕನ್ನು ಶಿಕ್ಷಾರ್ಹ ಅಪರಾಧವನ್ನಾಗಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು.
ತ್ರಿವಳಿ ತಲಾಕ್ ಮಸೂದೆಯನ್ನು ಜಂಟಿ ಸಮಿತಿಗೆ ಒಪ್ಪಿಸಬೇಕೆಂದು ವಿಪಕ್ಷಗಳು ಒತ್ತಾಯಿಸಿದವು. ತ್ರಿವಳಿ ತಲಾಕನ್ನು ಸುಪ್ರೀಂ ಕೋರ್ಟ್ ಅಸಾಂವಿಧಾನಿಕ ಎಂದು ಕರೆದಿದ್ದು, ಅದರ ವಿರುದ್ಧ ಕಾನೂನು ಜಾರಿಗೊಳಿಸಬೇಕೆಂದು ಹೇಳಿದೆ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದರು.
Next Story





