Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇಕೆದಾಟು ಯೋಜನೆಗೆ ತ.ನಾಡು ಆಕ್ಷೇಪ:...

ಮೇಕೆದಾಟು ಯೋಜನೆಗೆ ತ.ನಾಡು ಆಕ್ಷೇಪ: ಮಧ್ಯಪ್ರವೇಶ ಮಾಡುವಂತೆ ಪ್ರಧಾನಿಗೆ ಸಿಎಂ ಕುಮಾರಸ್ವಾಮಿ ಮನವಿ

ವಾರ್ತಾಭಾರತಿವಾರ್ತಾಭಾರತಿ27 Dec 2018 9:36 PM IST
share
ಮೇಕೆದಾಟು ಯೋಜನೆಗೆ ತ.ನಾಡು ಆಕ್ಷೇಪ: ಮಧ್ಯಪ್ರವೇಶ ಮಾಡುವಂತೆ ಪ್ರಧಾನಿಗೆ ಸಿಎಂ ಕುಮಾರಸ್ವಾಮಿ ಮನವಿ

ಹೊಸದಿಲ್ಲಿ, ಡಿ.27: ಕಾವೇರಿ ಜಲ ವಿವಾದ ನ್ಯಾಯಾಧೀಕರಣದ ಆದೇಶ ಹಾಗೂ ನಂತರ ಸುಪ್ರೀಂ ಕೋರ್ಟಿನಲ್ಲಿ ಮಾರ್ಪಡಿಸಿದ ಆದೇಶಗಳ ಅನ್ವಯ ತಮಿಳುನಾಡಿಗೆ ಪ್ರತಿ ತಿಂಗಳು ನೀರು ಹರಿಸುವುದನ್ನು ಕ್ರಮಬದ್ಧವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಮೇಕೆದಾಟು ಯೋಜನೆಯು ನೆರವಾಗಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಗುರುವಾರ ಸಂಜೆ ಲೋಕ ಕಲ್ಯಾಣ ಮಾರ್ಗದಲ್ಲಿ ಪ್ರಧಾನಿ ನರೇಂದ್ರಮೋದಿಯನ್ನು ಭೇಟಿ ಮಾಡಿದ ಅವರು, ಮೇಕೆದಾಟು ಯೋಜನೆಯು ಸುಮಾರು 67 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಸುಪ್ರೀಂಕೋರ್ಟ್ ಬೆಂಗಳೂರಿಗೆ ಹೆಚ್ಚುವರಿಯಾಗಿ ಹಂಚಿಕೆ ಮಾಡಿರುವ 4.75 ಟಿಎಂಸಿ ನೀರನ್ನು ಬಳಸಿಕೊಳ್ಳಲು ಹಾಗೂ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಉದ್ದೇಶಿಸಲಾಗಿದೆ. ಇದಕ್ಕೆ ತಮಿಳು ನಾಡು ಆಕ್ಷೇಪ ವ್ಯಕ್ತಪಡಿಸಿದ್ದು, ನೀವು ಮಧ್ಯಪ್ರವೇಶಿಸುವಂತೆ ಪ್ರಧಾನಿಗೆ ಮನವಿ ಮಾಡಿದರು.

ಇದಲ್ಲದೆ, ಕೃಷ್ಣಾ ನ್ಯಾಯಾಧೀಕರಣ-2ರಡಿ ಕರ್ನಾಟಕಕ್ಕೆ ನೀರಾವರಿ ಉದ್ದೇಶಕ್ಕೆ 166 ಟಿಎಂಸಿ ನೀರು ಹಂಚಿಕೆಯಾಗಿದ್ದು, ಈ ನೀರಿನ ಬಳಕೆಗಾಗಿ ಕೃಷ್ಣ ಮೇಲ್ದಂಡೆ ಯೋಜನೆ-ಹಂತ 3 ಮತ್ತಿತರ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸರಕಾರ ಈಗಾಗಲೇ ಈ ಯೋಜನೆಗಳಿಗೆ ಸಾಕಷ್ಟು ಹಣ ಹೂಡಿಕೆ ಮಾಡಿದೆ ಎಂದು ಅವರು ಹೇಳಿದರು.

ನ್ಯಾಯಾಧೀಕರಣ ತೀರ್ಪು ನೀಡಿ 5 ವರ್ಷ ಕಳೆದರೂ ಇನ್ನೂ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ. ಇದರಿಂದ ರಾಜ್ಯಕ್ಕೆ ಹಂಚಿಕೆಯಾದ ನೀರಿನ ಪಾಲನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದುದರಿಂದ, ಈ ಅಧಿಸೂಚನೆಯನ್ನು ಶೀಘ್ರವೇ ಹೊರಡಿಸುವಂತೆ ಕುಮಾರಸ್ವಾಮಿ ಮನವಿ ಮಾಡಿದರು.

ಮಹಾದಾಯಿ ಜಲ ವಿವಾದ ನ್ಯಾಯಾಧೀಕರಣವು ತನ್ನ ಅಂತಿಮ ಆದೇಶದಲ್ಲಿ ಕರ್ನಾಟಕಕ್ಕೆ 13.42 ಟಿಎಂಸಿ ನೀರು ಹಂಚಿಕೆ ಮಾಡಿದ್ದು, ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳು ಹಾಗೂ ಈ ಮಾರ್ಗದಲ್ಲಿರುವ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆಗೆ ಬಹುಕಾಲದಿಂದ ನೆನೆಗುದಿಗೆ ಬಿದ್ದಿರುವ ಕಳಸಾ ಬಂಡೂರಿ ನಾಲಾ ಯೋಜನೆ ಮತ್ತು ಇತರ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ನೀರು ಹಂಚಿಕೆಯ ಗೆಜೆಟ್ ನೋಟಿಫಿಕೇಷನ್ ಶೀಘ್ರವೇ ಹೊರಡಿಸುವಂತೆ ಅವರು ಕೋರಿದರು.

ಕೃಷ್ಣಾ ಮೇಲ್ದಂಡೆ ಯೋಜನೆ- ಮೂರನೇ ಹಂತವನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಪ್ರಧಾನಿಗೆ ಮನವಿ ಮಾಡಿದ ಅವರು, ಈ ಯೋಜನೆಯಿಂದ ಉತ್ತರ ಕರ್ನಾಟಕದ ವಿಜಯಪುರ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಗಳ 5.30 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದ ನೀರಾವರಿ ಸೌಲಭ್ಯ ಒದಗಿಸುವ ನಿರೀಕ್ಷೆ ಇದ್ದು, ಇದು ರಾಷ್ಟ್ರೀಯ ಯೋಜನೆಯ ಮಾನದಂಡಕ್ಕಿಂತ ಹೆಚ್ಚಾಗಿದೆ ಎಂದರು.

ಈ ಯೋಜನೆಯ ಅಂದಾಜು ವೆಚ್ಚ 51,148 ಕೋಟಿ ರೂ.ಗಳಾಗಿದ್ದು, ರಾಜ್ಯದ ಸಂಪನ್ಮೂಲವೊಂದರಿಂದಲೇ ಭರಿಸಿದರೆ ಯೋಜನೆ ಅನುಷ್ಠಾನದಲ್ಲಿ ವಿಳಂಬವಾಗಬಹುದು. ಭೂ ಸ್ವಾಧೀನಕ್ಕೆ ಇಂದು ಅತಿ ಹೆಚ್ಚು ಅನುದಾನದ ಅಗತ್ಯವಿರುವುದರಿಂದ ಇದನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸುವಂತೆ ಜಲಸಂಪನ್ಮೂಲ ಸಚಿವಾಲಯಕ್ಕೆ ಸೂಚನೆ ನೀಡುವಂತೆ ಪ್ರಧಾನಿಗೆ ಕುಮಾರಸ್ವಾಮಿ ಮನವಿ ಮಾಡಿದರು.

ಬರ ಪರಿಸ್ಥಿತಿ: ಬರ ಪರಿಸ್ಥಿತಿಯಿಂದ ಕಂಗಾಲಾಗಿರುವ ರೈತರಿಗೆ ಎನ್‌ಡಿಆರ್‌ಎಫ್ ಮಾನದಂಡಗಳನ್ವಯ ಶೇ.33ಕ್ಕೂ ಹೆಚ್ಚು ನಷ್ಟ ಅನುಭವಿಸಿದ ರೈತರಿಗೂ ಇನ್ಪುಟ್ ಸಬ್ಸಿಡಿ ನೀಡುವಂತೆ ಹಾಗೂ ಎನ್‌ಡಿಆರ್‌ಎಫ್ ಅಡಿ ಮುಂಗಾರು ಹಂಗಾಮಿನ ಬರ ಪರಿಹಾರ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಅವರು ಮನವಿ ಮಾಡಿದರು.

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, ಮುಂಗಾರು ಹಂಗಾಮಿನಲ್ಲಿ ಕೃಷಿ ಮತ್ತು ತೋಟಗಾರಿಕಾ ವಲಯಗಳಲ್ಲಿ 16,662.48 ಕೋಟಿ ರೂ. ನಷ್ಟವಾಗಿದ್ದು, ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ ಕೇಂದ್ರದಿಂದ 2434 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಉದ್ಯೋಗ ಖಾತರಿ: ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಹಿಂದಿನ ಬಾಕಿ ಸೇರಿ ರಾಜ್ಯಕ್ಕೆ ಒಟ್ಟು 2538 ಕೋಟಿ ರೂ. ಅನುದಾನ ಬರಬೇಕಾಗಿದೆ. ಇದನ್ನು ಶೀಘ್ರವೇ ಬಿಡುಗಡೆ ಮಾಡಲು ಕ್ರಮ ವಹಿಸುವಂತೆ ಪ್ರಧಾನಿಗೆ ಅವರು ಕೋರಿದರು.

2015-16 ಹಾಗೂ 2016-17 ರಲ್ಲಿ ಕೇಂದ್ರದ ಪಾಲಿನ ಅನುದಾನ ಸುಮಾರು 2175 ಕೋಟಿ ರೂ.ಗಳಷ್ಟು ರಾಜ್ಯ ಸರಕಾರವೇ ಭರಿಸಿತ್ತು. ಇದರಲ್ಲಿ 935.51 ಕೋಟಿ ರೂ. ಬಾಕಿ ಇದೆ. ಜೊತೆಗೆ 2017-18 ಹಾಗೂ 2018-19 ನೇ ಸಾಲಿನ ಈ ವರೆಗಿನ ಬಾಕಿ 539.75 ಕೋಟಿ ರೂ. ಹಾಗೂ 2018-19 ನೇ ಸಾಲಿನ ಅಂತ್ಯದ ವರೆಗೆ 8.50 ಕೋಟಿ ಮಾನವ ದಿನಗಳ ಸೃಜನೆಗೆ 1196.08 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಅವರು ಮಾಹಿತಿ ಒದಗಿಸಿದರು.

ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜನರು ಗುಳೆ ಹೋಗುವುದನ್ನು ತಡೆಯಲು ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯು ಅಗತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ 2538 ಕೋಟಿ ರೂ. ಗಳನ್ನು ಬಿಡುಗಡೆ ಮಾಡುವಂತೆ ಪ್ರಧಾನಮಂತ್ರಿಗೆ ಅವರು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X