ನೇಣುಬಿಗಿದು ಬಾಗಲಕೋಟೆ ಮೂಲದ ವ್ಯಕ್ತಿ ಆತ್ಮಹತ್ಯೆ
ಮಂಗಳೂರು, ಡಿ.27: ನಗರದ ಮರಕಡ ನಿವಾಸಿ ಕೀರಪ್ಪ ಕರಿಯಣ್ಣ (48) ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು, ಕಳೆದ 26 ವರ್ಷಗಳಿಂದ ನಗರದಲ್ಲಿ ವಾಸಿಸುತ್ತಿದ್ದರು. ಇವರಿಗೆ ವಿಪರೀತ ಕುಡಿತದ ಚಟವಿದ್ದು, ಕೆಲಸಕ್ಕೆ ಸರಿಯಾಗಿ ಹೋಗುತ್ತಿರಲಿಲ್ಲ. ಬುಧವಾರ ಪತ್ನಿ ಇವರಿಗೆ ಕೆಲಸಕ್ಕೆ ಹೋಗಲು ಹೇಳಿದ್ದು, ಇದಾದ ಸ್ವಲ್ಪ ಹೊತ್ತಿನಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ವ್ಯಕ್ತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story