Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಂಥಪಾಲಕರ ಸೇವಾ ವಯೋಮಿತಿ ವಿವಾದ:...

ಗ್ರಂಥಪಾಲಕರ ಸೇವಾ ವಯೋಮಿತಿ ವಿವಾದ: ಮೈಸೂರು ವಿವಿ, ಶಿಕ್ಷಣ ಇಲಾಖೆಗೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ27 Dec 2018 10:11 PM IST
share
ಗ್ರಂಥಪಾಲಕರ ಸೇವಾ ವಯೋಮಿತಿ ವಿವಾದ: ಮೈಸೂರು ವಿವಿ, ಶಿಕ್ಷಣ ಇಲಾಖೆಗೆ ಹೈಕೋರ್ಟ್ ನೋಟಿಸ್

ಬೆಂಗಳೂರು, ಡಿ.27: ಗ್ರಂಥಪಾಲಕರು ಹಾಗೂ ಗ್ರಂಥಾಲಯ ಸಿಬ್ಬಂದಿಯ ಸೇವಾ ವಯೋಮಿತಿ ವಿವಾದಕ್ಕೆ ಸಂಬಂಧಿಸಿದಂತೆ ಮೈಸೂರು ವಿಶ್ವವಿದ್ಯಾಲಯ ಹಾಗೂ ಶಿಕ್ಷಣ ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಈ ಸಂಬಂಧ ಮೈಸೂರು ವಿವಿಯಲ್ಲಿ ಉಪ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ರಮೇಶ್ ಗಾಂಧಿ ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರತಿವಾದಿಗಳಾದ ಮೈಸೂರು ವಿವಿ ಹಾಗೂ ಶಿಕ್ಷಣ ಇಲಾಖೆಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಮುಂದೂಡಿತು.

ಮೈಸೂರು ವಿವಿಯ ಗ್ರಂಥಾಲಯ ವಿಜ್ಞಾನ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಂಥಪಾಲಕರು ಹಾಗೂ ಗ್ರಂಥಾಲಯ ಸಿಬ್ಬಂದಿ ಶಿಕ್ಷಕರು(ಬೋಧಕ ಸಿಬ್ಬಂದಿ) ಅಲ್ಲ. 60 ವರ್ಷ ಮೀರಿ ಸೇವೆಯಲ್ಲಿ ಮುಂದುವರಿಯಲು ಅವರಿಗೆ ಅವಕಾಶವಿಲ್ಲ ಎಂದು 2016ರ ಜುಲೈ 17ರಂದು ವಿವಿ ಹೊರಡಿಸಿದ ಅಧಿಸೂಚನೆ ರದ್ದುಪಡಿಸಬೇಕು. ಅದೇ ರೀತಿ 2018ರ ಡಿ.31ಕ್ಕೆ ಅನ್ವಯವಾಗುವಂತೆ ತನಗೆ ಸೇವಾ ನಿವೃತ್ತಿ ಹೊಂದುವಂತೆ ಸೂಚಿಸಿ 2017ರ ನ.22ರಂದು ವಿವಿ ಹೊರಡಿಸಿದ ಆದೇಶ ರದ್ದುಪಡಿಸಬೇಕು ಎಂದು ಡಾ. ರಮೇಶ್ ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಅದೇ ರೀತಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಕರಿಯರ್ ಅಡ್ವಾನ್ಸ್‌ಮೆಂಟ್ ಸ್ಕೀಮ್ ಅನ್ವಯ ವೇತನ ಶ್ರೇಣಿ ಹೆಚ್ಚಳ ಮಾಡುವಂತೆ ಕೋರಿ ತಾನು 2017ರ ಡಿ.11ರಂದು ಸಲ್ಲಿಸಿದ ಮನವಿಯನ್ನು ಪರಿಗಣಿಸುವಂತೆ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದಾರೆ. ಅರ್ಜಿದಾರರ ಪರ ವಕೀಲ ಬಿ. ವಿನಾಯಕ ವಾದ ಮಂಡಿಸಿದರು.

ಅರ್ಜಿದಾರರು 1989ರಲ್ಲಿ ಯುಜಿಸಿ ವೇತನ ಶ್ರೇಣಿಯಲ್ಲಿ ಉಪ ಗ್ರಂಥಪಾಲಕರಾಗಿ ಸೇವೆಗೆ ಸೇರಿದ್ದರು. ಈ ಮಧ್ಯೆ 2006ರಲ್ಲಿ ಕರಿಯರ್ ಅಡ್ವಾನ್ಸ್‌ಮೆಂಟ್ ಸ್ಕೀಂ ಘೋಷಿಸಿದ ಯುಜಿಸಿ ಸಹಾಯಕ ಗ್ರಂಥಪಾಲಕರು, ಕಾಲೇಜು ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಸಹಾಯಕ ನಿರ್ದೇಶಕರು 60 ವರ್ಷದ ಬದಲಿಗೆ 62 ವರ್ಷಕ್ಕೆ ಸೇವಾ ನಿವೃತ್ತಿ ಹೊಂದುವಂತೆ ಅಧಿಸೂಚನೆ ಹೊರಡಿಸಿತ್ತು. ಈ ನಡುವೆ ಯುಜಿಸಿ ವೇತನ ಶ್ರೇಣಿ ಪಡೆಯುತ್ತಿರುವ ಶಿಕ್ಷಕರು 62 ವರ್ಷದವರೆಗೆ ಅದಕ್ಕೆ ಅರ್ಹರು ಎಂದು 2009ರಲ್ಲಿ ರಾಜ್ಯ ಸರಕಾರ ಹೇಳಿತ್ತು. ಆದರೆ, ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಸಹಾಯಕ ನಿರ್ದೇಶಕರ ನಿವೃತ್ತಿ ವಯೋಮಿತಿಗೆ ರಾಜ್ಯ ಸರಕಾರ 2015ರಲ್ಲಿ ಪ್ರತ್ಯೇಕ ಶ್ರೇಣಿ ನಿಗದಿಪಡಿಸಿತ್ತು. ಅದರಂತೆ ಯುಜಿಸಿ ವೇತನ ಪಡೆಯುತ್ತಿರುವ ಗ್ರಂಥಪಾಲಕರು, ಗ್ರಂಥಾಲಯ ಸಿಬ್ಬಂದಿ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರು ಶಿಕ್ಷಕರು (ಬೋಧಕ ಸಿಬ್ಬಂದಿ) ಅಲ್ಲ. ಹೀಗಾಗಿ, ಅವರ ಸೇವಾ ನಿವೃತ್ತಿ ವಯೋಮಿತಿಯನ್ನು 60 ರಿಂದ 62 ವರ್ಷಕ್ಕೆ ಪರಿಷ್ಕರಿಸುವ ಅಗತ್ಯವಿಲ್ಲ ಎಂದು 2016ರಲ್ಲಿ ಎಲ್ಲ ವಿವಿಗಳಿಗೆ ರಾಜ್ಯ ಸರಕಾರ ಹೇಳಿತ್ತು.

ಈ ನಡುವೆ ತನ್ನ ಸೇವಾ ನಿವೃತ್ತಿ ವಯೋಮಿತಿ 62 ವರ್ಷ ಆಗಲು ಯುಜಿಸಿಯ ಕರಿಯರ್ ಅಡ್ವಾನ್ಸ್‌ಮೆಂಟ್ ಸ್ಕೀಮ್ ಅನ್ವಯ ತನ್ನ ಕೋರಿಕೆ ಪರಿಗಣಿಸುವಂತೆ ಅರ್ಜಿದಾರರು ವಿವಿಗೆ ಮನವಿ ಸಲ್ಲಿಸಿದ್ದರು. ಆದರೆ, ಮೈಸೂರು ವಿವಿಯ ಗ್ರಂಥಾಲಯ ವಿಜ್ಞಾನ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಂಥಪಾಲಕರು ಹಾಗೂ ಗ್ರಂಥಾಲಯ ಸಿಬ್ಬಂದಿ ‘ಶಿಕ್ಷಕರು’ (ಬೋಧಕ ಸಿಬ್ಬಂದಿ) ಅಲ್ಲ. 60 ವರ್ಷ ಮೀರಿ ಸೇವೆಯಲ್ಲಿ ಮುಂದುವರಿಯಲು ಅವರಿಗೆ ಅವಕಾಶವಿಲ್ಲ ಹೇಳಿ ವಿವಿ ಮನವಿಯನ್ನು ತಿರಸ್ಕರಿಸಿತ್ತು. ಇದೀಗ ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X