Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏರ್‌ಇಂಡಿಯಾದ ಪುನಃಶ್ಚೇತನಕ್ಕಾಗಿ ಯೋಜನೆ...

ಏರ್‌ಇಂಡಿಯಾದ ಪುನಃಶ್ಚೇತನಕ್ಕಾಗಿ ಯೋಜನೆ ಸಿದ್ಧ: ಕೇಂದ್ರ ಸಚಿವ ಸಿನ್ಹಾ

ವಾರ್ತಾಭಾರತಿವಾರ್ತಾಭಾರತಿ27 Dec 2018 10:12 PM IST
share
ಏರ್‌ಇಂಡಿಯಾದ ಪುನಃಶ್ಚೇತನಕ್ಕಾಗಿ ಯೋಜನೆ ಸಿದ್ಧ: ಕೇಂದ್ರ ಸಚಿವ ಸಿನ್ಹಾ

ಹೊಸದಿಲ್ಲಿ,ಡಿ.27: ಏರ್‌ಇಂಡಿಯಾದ ಪುನಃಶ್ಚೇತನಕ್ಕಾಗಿ ಯೋಜನೆಯೊಂದನ್ನು ಸರಕಾರವು ಸಿದ್ಧಪಡಿಸಿದೆ ಎಂದು ಸಹಾಯಕ ನಾಗರಿಕ ವಾಯುಯಾನ ಸಚಿವ ಜಯಂತ ಸಿನ್ಹಾ ಅವರು ಗುರುವಾರ ಲೋಕಸಭೆಯಲ್ಲಿ ತಿಳಿಸಿದರು.

ರಿಯಲ್ ಎಸ್ಟೇಟ್ ಆಸ್ತಿಗಳ ನಗದೀಕರಣ ಸೇರಿದಂತೆ ಹಿಂದಿನ ಸರಕಾರವು ನೀಡಿದ್ದ ಪಾರುಗಾಣಿಕೆ ಪ್ಯಾಕೇಜ್ ಬಲದಿಂದ ಉಸಿರಾಡುತ್ತಿರುವ ಏರ್‌ ಇಂಡಿಯಾವನ್ನು ಪುನಃ ಲಾಭದ ದಾರಿಗೆ ತರಲು ವಿವಿಧ ಉಪಕ್ರಮಗಳು ಜಾರಿಯಲ್ಲಿವೆ.

ಸರಕಾರವು ರೂಪಿಸಿರುವ ಪುನಃಶ್ಚೇತನ ಯೋಜನೆಯು ಸ್ಪರ್ಧಾತ್ಮಕ ಮತ್ತು ಲಾಭದಾಯಕ ವಿಮಾನಯಾನ ಸಮೂಹವನ್ನು ನಿರ್ಮಿಸಲು ಗಮನವನ್ನು ಕೇಂದ್ರೀಕರಿಸಿದೆ ಎಂದು ಹೇಳಿದ ಸಿನ್ಹಾ, ವಿಶೇಷ ಉದ್ದೇಶದ ಸಂಸ್ಥೆಗೆ ಪ್ರಮುಖವಲ್ಲದ ಸಾಲ ಮತ್ತು ಆಸ್ತಿಗಳ ವರ್ಗಾವಣೆ ಸೇರಿದಂತೆ ಸಮಗ್ರ ಹಣಕಾಸು ಪ್ಯಾಕೇಜ್, ಆಡಳಿತ ಮಂಡಳಿಯಿಂದ ಸದೃಢ ಸಂಘಟನಾತ್ಮಕ ಮತ್ತು ಆಡಳಿತಾತ್ಮಕ ಕ್ರಮಗಳ ಅನುಷ್ಠಾನ ಹಾಗೂ ಏರ್ ಇಂಡಿಯಾದ ಪ್ರತಿಯೊಂದೂ ಮುಖ್ಯ ವ್ಯವಹಾರಕ್ಕಾಗಿ ವಿಭಿನ್ನ ವ್ಯವಹಾರ ಕಾರ್ಯತಂತ್ರಗಳು ಯೋಜನೆಯಲ್ಲಿ ಅಡಕವಾಗಿವೆ ಎಂದರು.

ಮುಂದಿನ ಕೆಲವು ವರ್ಷಗಳಲ್ಲಿ ತನ್ನ ಬಳಕೆಯಲ್ಲಿಲ್ಲದ ಮತ್ತು ಹೆಚ್ಚುವರಿ ರಿಯಲ್ ಎಸ್ಟೇಟ್ ಆಸ್ತಿಗಳನ್ನು ಮಾರಾಟ ಮಾಡಿ ಹಣಕಾಸನ್ನು ಕ್ರೋಢೀಕರಿಸಲು ಸಹ ಏರ್‌ಇಂಡಿಯಾ ಯೋಜಿಸಿದೆ. ಈವರೆಗೆ ಏರ್‌ಇಂಡಿಯಾ ದೇಶದಲ್ಲಿಯ ಮತ್ತು ವಿದೇಶಗಳಲ್ಲಿಯ ತನ್ನ ಮುಖ್ಯವಲ್ಲದ ಆಸ್ತಿಗಳನ್ನು ಮಾರಾಟ ಮಾಡಿ 410 ಕೋ.ರೂ.ಗಳನ್ನು ಸಂಗ್ರಹಿಸಿದೆ. ಬಾಡಿಗೆಯ ರೂಪದಲ್ಲಿ 314 ಕೋ.ರೂ.ಗಳ ಆದಾಯವನ್ನೂ ಅದು ಗಳಿಸಿದೆ ಎಂದು ಸಿನ್ಹಾ ಪ್ರಶ್ನೆ ವೇಳೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದರು.

ಏರ್‌ ಇಂಡಿಯಾ ಅಂದಾಜು 55,000 ಕೋ.ರೂ.ಗೂ ಅಧಿಕ ಸಾಲವನ್ನು ಹೊಂದಿದೆ.

ಏರ್‌ ಇಂಡಿಯಾದಲ್ಲಿ ಹೂಡಿಕೆ ಹಿಂದೆಗೆತಕ್ಕೆ ಸರಕಾರವು ಬದ್ಧವಾಗಿದೆ ಎಂದು ಸಿನ್ಹಾ ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X