Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ವರ್ಷದ ನಂತರ ನಡೆದ ಉಸ್ತುವಾರಿ...

ಮಡಿಕೇರಿ: ವರ್ಷದ ನಂತರ ನಡೆದ ಉಸ್ತುವಾರಿ ಸಚಿವರ ಕೆಡಿಪಿ ಸಭೆ; ಶಾಸಕರ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ27 Dec 2018 11:18 PM IST
share
ಮಡಿಕೇರಿ: ವರ್ಷದ ನಂತರ ನಡೆದ ಉಸ್ತುವಾರಿ ಸಚಿವರ ಕೆಡಿಪಿ ಸಭೆ; ಶಾಸಕರ ಅಸಮಾಧಾನ

ಮಡಿಕೇರಿ, ಡಿ.27: ರಾಜ್ಯ ಪ್ರವಾಸೋದ್ಯಮ ಹಾಗೂ ರೇಷ್ಮೆ ಖಾತೆ ಸಚಿವರಾದ ಸಾ.ರಾ. ಮಹೇಶ್ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಗುರುವಾರ (ಡಿ.27) ಪ್ರಥಮ ಬಾರಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಬೆಳಗ್ಗೆ 11ಗಂಟೆಗೆ ಸಭೆ ನಿಗದಿಯಾಗಿತ್ತಾದರೂ, ಸಚಿವರು ತಮ್ಮ ಸ್ವಕ್ಷೇತ್ರದಿಂದ ಮಡಿಕೇರಿಗೆ ಆಗಮಿಸುವಾಗ 45 ನಿಮಿಷಗಳಷ್ಟು ತಡವಾಗಿತ್ತು. ಸಚಿವರು ಕೆಡಿಪಿ ಸಭೆ ನಡೆಸಲು ಸಭಾಂಗಣಕ್ಕೆ ಆಗಮಿಸುತ್ತಿದ್ದಂತೆ ಮೈಸೂರಿನ ವಿಜಯನಗರ 1ನೇ ಹಂತದ ‘ವಿಜಯನಗರ ಕ್ಷೇಮಾಭಿವೃದ್ಧಿ ಸಂಘ’ದವರು ಅಲ್ಲಿನ ಮನೆಮನೆಗೆ ತೆರಳಿ ಕೊಡಗಿನ ಸಂತ್ರಸ್ತರಿಗಾಗಿ ಸಂಗ್ರಹಿಸಿ ತಂದಿದ್ದ ಸುಮಾರು 4.25 ಲಕ್ಷ ರೂ.ಗಳ ಚೆಕ್‍ನ್ನು ಉಸ್ತುವಾರಿ ಸಚಿವರ ಮೂಲಕ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.

ಈ ಸಂದರ್ಭ ಜಿಲ್ಲಾಧಿಕಾರಿ ಪಿ.ಐ ಶ್ರೀವಿದ್ಯಾ, ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ಮತ್ತಿತರರು ಹಾಜರಿದ್ದರು ಚೆಕ್ ಸ್ವೀಕರಿಸಿದರು.

ಕೆಲವು ನಿಮಿಷಗಳ ಬಳಿಕ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಅವರುಗಳು ಸಭೆಗೆ ಆಗಮಿಸಿದರಾದರೂ, ಶಾಸಕರಿಗೆ ವೇದಿಕೆಯಲ್ಲಿ ಆಸನ ಕಲ್ಪಿಸದೆ ಕೆಳಗೆ ವ್ಯವಸ್ಥೆ ಮಾಡಿರುವುದು ಸಚಿವರ ಗಮನಕ್ಕೆ ಬಂದಿತು.
ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಶಾಸಕರಿಗೆ ವೇದಿಕೆಯಲ್ಲಿ ಆಸನ ವ್ಯವಸ್ಥೆ ಕಲ್ಪಿಸಿ ಅವರುಗಳನ್ನು ಆಹ್ವಾನಿಸಿದರಾದರೂ, ಅದಾಗಲೇ ಕೆಳಗೆ ಆಸೀನರಾಗಿದ್ದ ಶಾಸಕರು, ಅಲ್ಲಿಗಿಂತ ಇಲ್ಲಿಯೇ ವಾಸಿ. ಇಲ್ಲಾದರೆ ಸಚಿವರಿಗೆ ನೇರವಾಗಿ ಪ್ರಶ್ನೆ ಕೇಳಬಹುದು, ಅಲ್ಲಾದರೆ ಕತ್ತು ತಿರುಗಿಸಿ ಪ್ರಶ್ನಿಸಬೇಕಾಗುತ್ತದೆ ಎಂದು ಕೆ.ಜಿ.ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ತಾನು ಕೂಡಾ ತನ್ನ ಸ್ಥಾನವನ್ನು ಅಲ್ಲಿಗೇ ವರ್ಗಾಯಿಸಬೇಕಾಗುತ್ತದೆ ಎಂದು ಸಚಿವರು ತಿಳಿಸಿದರಾದರೂ, ಕೇಳದ ಶಾಸಕರು ಸಭೆ ಆರಂಭಿಸುವಂತೆ ಒತ್ತಾಯಿಸಿದರು.  

ಬಳಿಕ ಸಚಿವರು ಸಭೆ ಆರಂಭಿಸುತ್ತಿದಂತೆ ಮಾತನಾಡಿದ ಶಾಸಕ ಬೋಪಯ್ಯ ಅವರು, 2017ರ ಸೆ.16ರಂದು ಕೆಡಿಪಿ ಸಭೆ ನಡೆದಿದ್ದು, ಅದಾದ ಬಳಿಕ ಇದುವರೆಗೆ ಒಂದೇ ಒಂದು ಸಭೆ ನಡೆದಿಲ್ಲ. ಆ ಸಭೆಯ ಅನುಪಾಲನಾ ವರದಿಯ ಮೇಲೆ ಚರ್ಚೆ ನಡೆಸುವುದಕ್ಕಿಂತ ಜಿಲ್ಲೆಯ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ಸೂಕ್ತ ಎಂದು ಸಲಹೆ ನೀಡಿದರು. 

ಆದಾದ ಬಳಿಕ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದವರಿಗೆ ಮನೆ ನಿರ್ಮಾಣದಲ್ಲಿ ಆಗುತ್ತಿರುವ ವಿಳಂಬ, ಪ್ರಕೃತಿ ವಿಕೋಪದ ಸಂದರ್ಭ ರೈತರ ಜಮೀನಿನಲ್ಲಿದ್ದ ಮರಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಅದಕ್ಕೆ ಸಂಬಂಧಿಸಿದಂತೆ ರೈತರಿಗೆ ಅರಣ್ಯ ಇಲಾಖೆಯಿಂದಾಗುತ್ತಿರುವ ಕಿರುಕುಳ ಮುಂತಾದ ವಿಷಯಗಳ ಬಗ್ಗೆ ಶಾಸಕರಾದ ಬೋಪಯ್ಯ, ಅಪ್ಪಚ್ಚುರಂಜನ್, ವೀಣಾ ಅಚ್ಚಯ್ಯ ಮತ್ತಿತರರು ಗಮನಸೆಳೆದರು.

‘ಸ್ಮಶಾನಕ್ಕೆ ಹೋದ ಶವ ಹಾಗೂ ಅರಣ್ಯ ಇಲಾಖೆಗೆ ಸಲ್ಲಿಸುವ ಅರ್ಜಿ ಎರಡೂ ಒಂದೇ’ ಎಂದು ವ್ಯಂಗವಾಡುವ ಮೂಲಕ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ಹೊರಗೆಡವಿದ ಪ್ರಸಂಗವೂ ನಡೆಯಿತು. ಸಭೆಗೆ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಜರಾಗದಿರುವ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ಸಚಿವರು, ಅವರನ್ನು ಕೂಡಲೇ ಸಭೆಗೆ ಆಗಮಿಸುವಂತೆ ಸೂಚಿಸಲು ಸಭಾ ಕಾರ್ಯದರ್ಶಿ ಹಾಗೂ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ನಿರ್ದೇಶನ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X