ಉಡುಪಿಯಲ್ಲಿ ರಾಷ್ಟ್ರಪತಿ...
ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಸನ್ಯಾಸ ದೀಕ್ಷೆ ಸ್ವೀಕರಿಸಿ 80 ವರ್ಷಗಳು ಪೂರ್ಣಗೊಂಡ ಪ್ರಯುಕ್ತ ಅವರಿಗೆ ಗೌರವ ಸಲ್ಲಿಸುವುದಕ್ಕಾಗಿ ಗುರುವಾರ ಉಡುಪಿಯ ಪೇಜಾವರ ಮಠಕ್ಕೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್‌ರನ್ನು ಸ್ವಾಮೀಜಿ ಶ್ರೀಕೃಷ್ಣನ ವಿಗ್ರಹವಿರುವ ಅಟ್ಟೆ ಪ್ರಭಾವಳಿಯನ್ನು ಸ್ಮರಣಿಕೆಯಾಗಿ ನೀಡಿ ಗೌರವಿಸಿದರು. ಈ ಸಂದರ್ಭ ರಾಷ್ಟ್ರಪತಿಯ ಪತ್ನಿ ಸವಿತಾ ಕೋವಿಂದ್, ಕರ್ನಾಟಕ ರಾಜ್ಯಪಾಲ ವಜೂಬಾಯಿ ವಾಲಾ, ನಾಗಾಲ್ಯಾಂಡ್ ರಾಜ್ಯಪಾಲ ಪದ್ಮನಾಭ ಆಚಾರ್ಯ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ, ಜಿಪಂ ಅಧ್ಯಕ್ಷ ದಿನಕರ ಬಾಬು ಮತ್ತಿತರರು ಉಪಸ್ಥಿತರಿದ್ದರು.
Next Story





