Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುಲಿಟ್ಝರ್ ಪ್ರಶಸ್ತಿ ವಿಜೇತ...

ಪುಲಿಟ್ಝರ್ ಪ್ರಶಸ್ತಿ ವಿಜೇತ ‘ರಾಯ್ಟರ್ಸ್’ ಛಾಯಾಗ್ರಾಹಕನಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ28 Dec 2018 4:14 PM IST
share
ಪುಲಿಟ್ಝರ್ ಪ್ರಶಸ್ತಿ ವಿಜೇತ ‘ರಾಯ್ಟರ್ಸ್’ ಛಾಯಾಗ್ರಾಹಕನಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

ಹೊಸದಿಲ್ಲಿ, ಡಿ.28: ‘ರಾಯ್ಟರ್ಸ್’ ಸುದ್ದಿ ಸಂಸ್ಥೆಯ ದಿಲ್ಲಿ ಕಚೇರಿಯ ಮುಖ್ಯ ಛಾಯಾಗ್ರಾಹಕರಾಗಿರುವ ಪುಲಿಟ್ಝರ್ ಪ್ರಶಸ್ತಿ ವಿಜೇತ ಕಥಾಲ್ ಮೆಕ್‍ನೌಟನ್ ಅವರಿಗೆ  ವೀಸಾ ನಿಯಮ ಉಲ್ಲಂಘನೆಗಾಗಿ ಭಾರತಕ್ಕೆ ಮರು ಪ್ರವೇಶವನ್ನು ನಿರಾಕರಿಸಲಾಗಿದೆ. ವಿದೇಶ ಪ್ರವಾಸದಿಂದ ದಿಲ್ಲಿ ವಿಮಾನ ನಿಲ್ದಾಣಕ್ಕೆ ಹಿಂದಿರುಗಿದ ಅವರನ್ನು ಅಲ್ಲಿಂದಲೇ ವಾಪಸ್ ಕಳುಹಿಸಲಾಗಿದೆ.

ಈ ವರ್ಷದ ಮೇ ತಿಂಗಳಲ್ಲಿ ಪ್ರತಿಷ್ಠಿತ ಪುಲಿಟ್ಝರ್ ಪ್ರಶಸ್ತಿ ಪಡೆದಿದ್ದ ಅವರು ಜಮ್ಮು ಕಾಶ್ಮೀರದ ನಿರ್ಬಂಧಿತ ಪ್ರದೇಶಗಳಿಗೆ ಅನುಮತಿಯಿಲ್ಲದೆ ಪ್ರಯಾಣಿಸಿದ್ದರೆಂಬ ಆರೋಪವಿದೆ.  ರಾಜ್ಯದಿಂದ ಯಾವುದೇ ಅನುಮತಿಯಿಲ್ಲದೆ ಅವರು ವರದಿ ಸಲ್ಲಿಸಿದ್ದರೆಂದೂ ಹೇಳಲಾಗಿದೆ.

ಐರಿಷ್ ನಾಗರಿಕರಾಗಿರುವ ಕಥಾಲ್ ಅವರ ವಿರುದ್ಧದ ಕ್ರಮ ಖಾಯಂ ಅಲ್ಲ, ಆರು ತಿಂಗಳು ಅಥವಾ ಒಂದು ವರ್ಷದ ನಂತರ ಅದನ್ನು ಮರುಪರಿಶೀಲಿಸಬಹುದಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿದೇಶಿ ಪತ್ರಕರ್ತರಿಗಿರುವ ವೀಸಾ ನಿಯಮಗಳಂತೆ ಅವರು ಜಮ್ಮು ಕಾಶ್ಮೀರದ ಅಥವಾ ಈಶಾನ್ಯ ರಾಜ್ಯಗಳ ನಿರ್ಬಂಧಿತ ಪ್ರದೇಶಗಳಿಗೆ ಭೇಟಿ ನೀಡಲು ಬಯಸಿದರೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಿದೇಶಾಂಗ ಪ್ರಚಾರ ವಿಭಾಗದ ಮೂಲಕ ವಿಶೇಷ ಅನುಮತಿ ಪಡೆಯಬೇಕಾಗುತ್ತದೆ.

ಫಾರಿನರ್ಸ್(ಪ್ರೊಟೆಕ್ಟೆಡ್ ಏರಿಯಾಸ್) ಆರ್ಡರ್ 1958 ಅನ್ವಯವಾಗುವ ಪ್ರದೇಶಗಳಿಗೆ ಪ್ರಯಾಣಿಸಲು ಅನುಮತಿ ಪಡೆಯಬೇಕೆಂದು ಈ ವರ್ಷದ ಮೇ ತಿಂಗಳಲ್ಲಿ ಸಚಿವಾಲಯ ಅಂತಾರಾಷ್ಟ್ರೀಯ ಪತ್ರಕರ್ತರಿಗೆ ನೆನಪಿಸಿತ್ತು.

ನಿರ್ಬಂಧಿತ ಪ್ರದೇಶಗಳಲ್ಲಿ ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ರಾಜಸ್ಥಾನ, ಉತ್ತರಾಖಂಡದ ಕೆಲ ಭಾಗಗಳು ಹಾಗೂ ಅರುಣಾಚಲ ಪ್ರದೇಶ, ಸಿಕ್ಕಿಂ ರಾಜ್ಯಗಳು ಸೇರಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X