Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭ್ರಷ್ಟಾಚಾರ ಆರೋಪ: ಉ.ಪ್ರದೇಶ ಸಚಿವಾಲಯದ...

ಭ್ರಷ್ಟಾಚಾರ ಆರೋಪ: ಉ.ಪ್ರದೇಶ ಸಚಿವಾಲಯದ ಮೂವರು ಸಿಬ್ಬಂದಿ ಅಮಾನತು

ವಾರ್ತಾಭಾರತಿವಾರ್ತಾಭಾರತಿ28 Dec 2018 9:17 PM IST
share
ಭ್ರಷ್ಟಾಚಾರ ಆರೋಪ: ಉ.ಪ್ರದೇಶ ಸಚಿವಾಲಯದ ಮೂವರು ಸಿಬ್ಬಂದಿ ಅಮಾನತು

ಲಕ್ನೊ, ಡಿ.28: ಖಾಸಗಿ ಸುದ್ದಿವಾಹಿನಿ ನಡೆಸಿದ್ದ ಕುಟುಕು ಕಾರ್ಯಾಚರಣೆ ಸಂದರ್ಭ ಬೆಳಕಿಗೆ ಬಂದಿದ್ದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಉತ್ತರಪ್ರದೇಶ ಸಚಿವಾಲಯದ ಮೂವರು ಸಿಬ್ಬಂದಿಯನ್ನು ವಜಾಗೊಳಿಸಿರುವುದಾಗಿ ಸರಕಾರದ ಪ್ರಕಟನೆ ತಿಳಿಸಿದೆ.

ಈ ಮೂವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸುವಂತೆ ಮುಖ್ಯಮಂತ್ರಿ ಆದಿತ್ಯನಾಥ್ ಆದೇಶಿಸಿದ್ದಾರೆ. ಅಲ್ಲದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸುವಂತೆ ಸಚಿವಾಲಯದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 ಮುಖ್ಯಮಂತ್ರಿ ಸೂಚನೆಯಂತೆ ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಸಿಟ್)ಗೆ ವಹಿಸಲಾಗಿದ್ದು , ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರ ಹೇಳಿಕೆಗಳನ್ನು ದಾಖಲಿಸಿಕೊಂಡು 10 ದಿನದೊಳಗೆ ವರದಿ ಸಲ್ಲಿಸಲು ತಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಕ್ನೊ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರಾಜೀವ್ ಕೃಷ್ಣ ‘ಸಿಟ್’ನ ನೇತೃತ್ವ ವಹಿಸಿದ್ದಾರೆ.

ವರ್ಗಾವಣೆ ಹಾಗೂ ಸರಕಾರಿ ಕಾಮಗಾರಿಗಳ ಗುತ್ತಿಗೆ ವಿಷಯದಲ್ಲಿ ಸಚಿವಾಲಯದ ಮೂವರು ಸಿಬ್ಬಂದಿ ಲಂಚ ಪಡೆಯುತ್ತಿರುವುದು ಖಾಸಗಿ ಟಿವಿ ಚಾನೆಲ್ ನಡೆಸಿದ್ದ ಕುಟುಕು ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಹಿಂದುಳಿದ ವರ್ಗದವರ ಕಲ್ಯಾಣ ಇಲಾಖೆಯ ಆಪ್ತ ಕಾರ್ಯದರ್ಶಿ ಓಂಪ್ರಕಾಶ್ ಕಶ್ಯಪ್ ವರ್ಗಾವಣೆ ಮಾಡಿಕೊಡಲು 40 ಲಕ್ಷ ರೂ. ಲಂಚದ ಬೇಡಿಕೆ ಮುಂದಿರಿಸಿರುವುದು ಕುಟುಕು ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ. ತನ್ನ ಕಾರ್ಯದರ್ಶಿಯನ್ನು ವಜಾಗೊಳಿಸಿದ್ದು ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಪತ್ರ ಬರೆದಿರುವುದಾಗಿ ಸಚಿವರು ತಿಳಿಸಿದ್ದಾರೆ.

  ಗಣಿ ಇಲಾಖೆಯ ಸಹಾಯಕ ಸಚಿವೆ ಅರ್ಚನಾ ಪಾಂಡೆಯ ಸಹಾಯಕಿ, ಗುರುತು ಮರೆಸಿ ಬಂದಿದ್ದ ಟಿವಿ ಚಾನೆಲ್‌ನ ವರದಿಗಾರನಿಗೆ ಆರು ಜಿಲ್ಲೆಗಳ ಗಣಿ ಗುತ್ತಿಗೆ ವಹಿಸಿಕೊಡಲು ಭಾರೀ ಮೊತ್ತದ ಲಂಚದ ಬೇಡಿಕೆ ಇರಿಸಿದ್ದರೆ, ಪ್ರಾಥಮಿಕ ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿ ಸಂತೋಷ್ ಅವಸ್ಥಿ ಇಲಾಖೆಗೆ ಅಗತ್ಯವಿರುವ ಪುಸ್ತಕಗಳು, ಶಾಲಾ ಬ್ಯಾಗ್, ಸಮವಸ್ತ್ರ ಸರಬರಾಜಿನ ಗುತ್ತಿಗೆ ಮಂಜೂರು ಮಾಡಲು ಲಂಚದ ಬೇಡಿಕೆ ಮುಂದಿರಿಸಿರುವುದು ಕುಟುಕು ಕಾರ್ಯಾಚರಣೆಯಲ್ಲಿ ಸೆರೆಯಾಗಿದೆ ಎನ್ನಲಾಗಿದೆ.

 ಸರಕಾರ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಆಡಳಿತ ನಿರ್ವಹಣೆಯಲ್ಲಿ ಸಂಪೂರ್ಣ ಪಾರದರ್ಶತೆ ತೋರಬೇಕು ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X