ಬೆಂಗಳೂರು: ಪೊಲೀಸ್ ವಾಹನಕ್ಕೆ ಕಾರು ಢಿಕ್ಕಿ; ಮೂವರು ಪ್ರಾಣಾಪಾಯದಿಂದ ಪಾರು

ಬೆಂಗಳೂರು, ಡಿ.28: ಪೊಲೀಸ್ ಹೊಯ್ಸಳ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದಿರುವ ಪ್ರಕರಣ ಇಲ್ಲಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೊಯ್ಸಳ ವಾಹನದಲ್ಲಿದ್ದ ಮೂವರು ಪೊಲೀಸರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಕನಕಪುರ ರಸ್ತೆಯ ಕೋಣನಕುಂಟೆ ಕ್ರಾಸ್ ಬಳಿ ಘಟನೆ ನಡೆದಿದ್ದು, ಹೊಯ್ಸಳದಲ್ಲಿ ಮೂವರು ಪೊಲೀಸರು ಗಸ್ತು ತಿರುಗುತ್ತಿದ್ದರು. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದು ಹೊಯ್ಸಳ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಢಿಕ್ಕಿ ಹೊಡೆದ ರಭಸಕ್ಕೆ ಎರಡು ಕಾರುಗಳು ಜಖಂ ಆಗಿವೆ ಎನ್ನಲಾಗಿದ್ದು, ಘಟನೆ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





