ಕಳವು ಪ್ರಕರಣದ ಮೂವರು ಆರೋಪಿಗಳ ಬಂಧನ: 30 ಲಕ್ಷ ರೂ. ಮೌಲ್ಯದ ವಸ್ತು ಜಪ್ತಿ

ವಿಜಯಪುರ,ಡಿ.28: ನಗರದಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಸ್ರುದ್ದೀನ್ ಅಲಿಯಾಸ್ ನಾಸೀರ್ ಹುಸೇನ್ (24) ನಝಿರ್ ಅಹ್ಮದ್ (21) ಹಾಗೂ ಓರ್ವ ಅಪ್ರಾಪ್ತ ಬಾಲಕ ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತರಿಂದ 930 ಗ್ರಾಂ ಬಂಗಾರ, 1450 ಗ್ರಾಂ ಬೆಳ್ಳಿ ಆಭರಣ, 1 ಲಕ್ಷ 2 ಸಾವಿರ ರೂಪಾಯಿ ನಗದು ಹಾಗೂ ಒಂದು ಬೈಕ್ ಸೇರಿದಂತೆ ಒಟ್ಟು 30 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳು 10 ದಿನಗಳ ಹಿಂದೆ ಛಪ್ಪರಬಂದ್ ಕಾಲೋನಿಯ ಎಚ್.ಎ ರಗನಾಳ ಎಂಬವರ ಮನೆಯಲ್ಲಿ ಕಳ್ಳತನ ಮಾಡಿದ್ದರು. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದ ಗೋಲಗುಮ್ಮಟ ಠಾಣೆ ಪೊಲೀಸರು ಇಂದು ಬೆಳಗ್ಗೆ ಕೋಲಾರ್ ಬೈಪಾಸ್ ಬಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣ ಬೇದಿಸುವಲ್ಲಿ ಯಶಸ್ವಿಯಾದ ಸಿಬ್ಬಂದಿಗಳಿಗೆ ಎಸ್.ಪಿ ಪ್ರಕಾಶ್ ನಿಕ್ಕಂ 10 ಸಾವಿರ ರೂಪಾಯಿ ಬಹುಮಾನ ಘೋಷಿಸಿದರು.
Next Story





