ದಾವಣಗೆರೆ ಜಿಪಂ ಅಧ್ಯಕ್ಷ ಸ್ಥಾನಕ್ಕೆ ಡಿ.31ರಂದು ರಾಜೀನಾಮೆ: ಕೆ.ಆರ್.ಜಯಶೀಲಾ
ದಾವಣಗೆರೆ,ಡಿ.28: ಜಿಪಂ ಅಧ್ಯಕ್ಷ ಸ್ಥಾನಕ್ಕೆ ಡಿ.31ರ ಸೋಮವಾರ ರಾಜೀನಾಮೆ ನೀಡುವುದಾಗಿ ಕೆ.ಆರ್.ಜಯಶೀಲಾ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಉಪ ಕಾರ್ಯದರ್ಶಿ ವಿರುದ್ಧ ಎಸಿಬಿಗೆ ನೀಡಿರುವ ದೂರಿಗೂ ಹಾಗೂ ರಾಜೀನಾಮೆ ನೀಡುತ್ತಿರುವುದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
ನಮಗೆ ಅಧಿಕಾರ ನೀಡುವ ಮುನ್ನವೇ ಮೂರು ತಿಂಗಳಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿತ್ತು. ಅದರಂತೆ, ಈಗಾಗಲೇ ನಾವು ನಾಲ್ಕು ತಿಂಗಳು ಅಧಿಕಾರ ಅನುಭವಿಸಿದ್ದೇವೆ. ಅದರ ಹಿನ್ನೆಲೆಯಲ್ಲಿ ಈಗಾಗಲೇ ಡಿ.24ರಂದು ಜಿ.ಪಂ. ಉಪಾಧ್ಯಕ್ಷೆ ರಶ್ಮಿ ರಾಜಪ್ಪ ತಮಗೆ ರಾಜೀನಾಮೆ ಸಲ್ಲಿಸಿದ್ದು, ತಾವು ಸೋಮವಾರ ರಾಜೀನಾಮೆ ಸಲ್ಲಿಸಲಿದ್ದೇವೆ. ಅವಧಿ ಮುಗಿದಿರುವ ಕಾರಣಕ್ಕೆ ಹಾಗೂ ಹರಪನಹಳ್ಳಿ ತಾಲೂಕು ಅಧಿಕೃತವಾಗಿ ಬಳ್ಳಾರಿಗೆ ಹೋಗುತ್ತಿರುವುದರಿಂದ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ ಎಂದರು.
Next Story





