ಮಂಗಳೂರು: ‘ದಿ ಮುಸ್ಲಿಂ ಸೆಂಟ್ರಲ್ ಕಮಿಟಿ’ಯ ಸ್ವರ್ಣ ಮಹೋತ್ಸವ ಉದ್ಘಾಟನೆ

ಮಂಗಳೂರು, ಡಿ.29: ದ.ಕ. ಜಿಲ್ಲೆಯ ಪ್ರಮುಖ ಸಾಮಾಜಿಕ ಸಂಘಟನೆಗಳಲ್ಲಿ ಒಂದಾದ ‘ದಿ ಮುಸ್ಲಿಂ ಸೆಂಟ್ರಲ್ ಕಮಿಟಿ’ಯ ಸ್ವರ್ಣ ಮಹೋತ್ಸವ ಕಾರ್ಯಕ್ರಮವು ಶನಿವಾರ ನಗರದ ಪುರಭವನದಲ್ಲಿ ಉದ್ಘಾಟನೆಗೊಂಡಿತು.
ದ.ಕ. ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕಾರ್ಯಕ್ರಮ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಮುಸ್ಲಿಂ ಸಮಾಜದಲ್ಲಿ ಹಲವು ಸಂಘಟನೆಗಳಿವೆ. ಇವುಗಳೆಲ್ಲವೂ ಸಮುದಾಯ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಳ್ಳಲು ಮುಸ್ಲಿಂ ಸೆಂಟ್ರಲ್ ಕಮಿಟಿಯು ನೇತೃತ್ವ ವಹಿಸಬೇಕು ಎಂದು ಕರೆ ನೀಡಿದರು. ಕುದ್ರೋಳಿಯ ಜಾಮಿಯಾ ಮಸ್ಜಿದ್ ಖತೀಬ್ ಅಬ್ದುಲ್ ಮನ್ನಾನ್ ಮುಫ್ತಿ ದುಆಗೈದರು. ಚೊಕ್ಕಬೆಟ್ಟು ಮಸ್ಜಿದ್ ಖತೀಬ್ ಅಬ್ದುಲ್ ಅಝೀಝ್ ದಾರಿಮಿ ಮುಖ್ಯ ಭಾಷಣ ಮಾಡಿದರು.
ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್. ಮುಹಮ್ಮದ್ ಮಸೂದ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅವಿಭಜಿತ ದ.ಕ.ಜಿಲ್ಲೆಯ ವಕ್ಫ್ ಅಧ್ಯಕ್ಷರು, ಮಸೀದಿಗಳ ಹಾಗೂ ಸಂಘಟನೆಗಳ ಮುಖ್ಯಸ್ಥರು ಹಾಗೂ ಜಮಾಅತ್‌ನ ಅಧ್ಯಕ್ಷ, ಕಾರ್ಯದರ್ಶಿ, ಖತೀಬರು ಪಾಲ್ಗೊಂಡಿದ್ದರು.
ಮುಖ್ಯ ಅತಿಥಿಯಾಗಿ ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷ ಹಾಜಿ ಶಾಹುಲ್ ಹಮೀದ್ ಮೆಟ್ರೋ, ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕೆ.ಪಿ.ಇಬ್ರಾಹೀಂ, ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ. ಬಾವಾ, ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಅಧ್ಯಕ್ಷ ಪಿ.ಬಿ.ಅಬ್ದುಲ್ ಹಮೀದ್, ಬ್ಯಾರಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಅಧ್ಯಕ್ಷ ಹಾಜಿ ಎಸ್.ಎಂ.ಆರ್. ರಶೀದ್, ಉಳ್ಳಾಲ ದರ್ಗಾ ಅಧ್ಯಕ್ಷ ಹಾಜಿ ಅಬ್ದುರ್ರಶೀದ್, ಕಾರ್ಯಕ್ರಮದ ಸಂಚಾಲಕರಾದ ಹಾಜಿ ಇಬ್ರಾಹೀಂ ಕೋಡಿಜಾಲ್, ಕೆ. ಅಶ್ರಫ್, ಕಮಿಟಿಯ ಉಪಾಧ್ಯಕ್ಷರಾದ ಹಾಜಿ ಸಿ. ಮಹ್ಮೂದ್, ಮುಮ್ತಾಝ್ ಅಲಿ, ಸೈಯದ್ ಬಾಷಾ ತಂಙಳ್, ಕೋಶಾಧಿಕಾರಿ ಮೂಸಾ ಮೊಯ್ದಿನ್, ಮದ್ರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ಐ. ಮೊಯ್ದಿನಬ್ಬ ಹಾಜಿ, ಅಬ್ದುಲ್ ಮಜೀದ್ ಸೂರಲ್ಪಾಡಿ, ಮುಹಮ್ಮದ್ ಬಾಷಾ ಕುಂದಾಪುರ, ಬಂದರ್ ಬದ್ರಿಯಾ ಮಸ್ಜಿದ್ ಖತೀಬ್ ಶೇಖಬ್ಬ ಮುಸ್ಲಿಯಾರ್, ಮುಸ್ಲಿಂ ಲೀಗ್‌ನ ದ.ಕ. ಜಿಲ್ಲಾಧ್ಯಕ್ಷ ಸಿದ್ದೀಕ್ ಅಬ್ದುಲ್ ಖಾದರ್, ಮುಸ್ಲಿಂ ಲೀಗ್‌ನ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯ ಎಸ್. ಸುಲೈಮಾನ್, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ.ಎಚ್. ಖಾದರ್, ನ್ಯಾಯವಾದಿ ಅನ್ವರ್ ಸಾದಾತ್ ಭಾಗವಹಿಸಿದ್ದರು.
ಸಜೀಂ ಕಿರಾಅತ್ ಪಠಿಸಿದರು. ಮುಹಮ್ಮದ್ ಅನಸ್ ಬೆಂಗಳೂರು ನಾಥ್ ಹಾಡಿದರು. ಕಮಿಟಿಯ ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ ಬಂದರ್ ಸ್ವಾಗತಿಸಿದರು. ಹುಸೈನ್ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.