ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಪಾರ್ಥಿವ ಶರೀರ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ

ಮಂಗಳೂರು, ಡಿ.29: ದಕ್ಷ ಪೊಲೀಸ್ ಅಧಿಕಾರಿ ಡಾ.ಮಧುಕರ್ ಶೆಟ್ಟಿ ಅವರ ಪಾರ್ಥಿವ ಶರೀರವು ಡಿ. 29ರಂದು ರಾತ್ರಿ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ರಾತ್ರಿ 9ರಿಂದ 10 ಗಂಟೆಯವರೆಗೆ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯವಸ್ಥೆ ಕಲ್ಪಿಸಿದೆ ಎಂದು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





